ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್‍ಗಳ ಮಾಲೀಕರು ತಕ್ಷಣದಿಂದಲೇ ರೈಸ್ ಮಿಲ್ ಗಳನ್ನು ತೆಗೆದು ಎಂದಿನಂತೆ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದ್ದು,ಜಿಲ್ಲೆಗೆ ಹೊರ ಜಿಲ್ಲೆಯಿಂದ ಪೂರೈಕೆಯಾಗುವ ಸಾಮಗ್ರಿಗಳ ವಾಹನಗಳಿಗೆ ಸಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲವಾಗಿದ್ದು, ದಿನಸಿ ವಸ್ತುಗಳ ಕೊರತೆ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗ್ಯವಿಲ್ಲ, ದಿನಸಿ ವಸ್ತುಗಳ ಕೊರತೆಯಾಗದಂತೆ ಎಲ್ಲಾ ಅಗ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು […]

ಕರೋನಾ ಖಚಿತಗೊಂಡ ರೋಗಿಗಳಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾಹೆ‌ ನಿರ್ಧಾರ

ಮಣಿಪಾಲ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ಅಗತ್ಯವಾದ  ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ  ಬೆಂಬಲದೊಂದಿಗೆ, ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಟ್ಟಿದೆ. ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು 100 ಹಾಸಿಗೆಗಳ ಆಸ್ಪತ್ರೆಯಾಗಿದ್ದು,11 ತೀವ್ರ […]

ಕೋವಿಡ್ 19:  ಪ್ರತಿದಿನ 50 ಸಾವಿರ ಮಾಸ್ಕ್ ದೇಶೀಯ ಕಂಪೆನಿಗಳಿಂದ ತಯಾರಿ

ನವದೆಹಲಿ: ಕೋವಿಡ್-19 ತಡೆಗೆ ವಿವಿಧ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಅಂದಹಾಗೆ ಈ ಸೋಂಕು ತಡೆಗೆ N95 ಮಾಸ್ಕ್ ಪರಿಣಾಮಕಾರಿಯಾಗಿದ್ದು, ಪ್ರತಿದಿನ 50 ಸಾವಿರ ಮಾಸ್ಕ್‌ಗಳನ್ನು ದೇಶೀಯ ಕಂಪನಿಗಳಿಂದ ತಯಾರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮುಂದಿನ ವಾರದಲ್ಲಿ ಪ್ರತಿದಿನ ಮಾಸ್ಕ್‌‌ಗಳ ತಯಾರಿಕಾ ಸಾಮರ್ಥ್ಯವನ್ನು 1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತದೆ. ಸದ್ಯ ದೇಶದ  ಆಸ್ಪತ್ರೆಗಳಲ್ಲಿ 11.95 ಲಕ್ಷ N95 ಮಾಸ್ಕ್‌‌ಗಳು ಇವೆ. ಕಳೆದ ಎರಡು ದಿನಗಳಿಂದ ಹೆಚ್ಚುವರಿಯಾಗಿ 5 ಲಕ್ಷ  ಮಾಸ್ಕ್‌‌ಗಳನ್ನು […]