ಕೂಲಿ ಕಾರ್ಮಿಕರನ್ನು ಬಾಡಿಗೆ ಮನೆ, ಶೆಡ್ ಗಳಿಂದ ಹೊರ ಹಾಕಿದರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ

ಉಡುಪಿ ಮಾ.31: ಕೋರೋನಾ ಸೋಂಕು ಹರಡುವುದನ್ನು ತಡೆಗಟ್ಟಲು, ಜಿಲ್ಲೆಯ ಸಾರ್ವಜನಿಕರು ಮತ್ತು ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಪ್ರಯಾಣ ಬೆಳಸದಂತೆ ನಿರ್ಭಂಧಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೂಲಿ ಕಾಮಿಕರು ಬಾಡಿಗೆ ಮನೆ, ಶೆಡ್ ಗಳಲ್ಲಿ ವಾಸವಿದ್ದು, ಇವರನ್ನು ಅಲ್ಲಿಂದ ಹೊರ ಹಾಕುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಯಾವುದೇ ಕಾರಣಕ್ಕೂ ಇವರನ್ನು  ಬಾಡಿಗೆ ಶೆಡ್?ಮನೆಗಳ ಮಾಲೀಖರು ಹೊರ ಹಾಕುವಂತಿಲ್ಲ ಹಾಗೂ ಮನೆ/ಶೆಡ್ ಖಾಲಿ ಮಾಡುವಂತೆ ಒತ್ತಾಯಿಸುವಂತಿಲ್ಲ ಈ ಬಗ್ಗೆ ದೂರು ಬಂದಲ್ಲಿ ಸಂಬಂದಪಟ್ಟವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಅಲ್ಲದೇ […]

ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಪಡಿತರ ವಿತರಣೆ, ಓಟಿಪಿ ಕಡ್ಡಾಯವಿಲ್ಲ: ಸಚಿವ ಕೋಟ

ಉಡುಪಿ ಮಾ.31:  ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಪಡಿತರ ವಿತರಣೆ ಆರಂಭವಾಗಲಿದ್ದು, ಕೊರೋನಾ ಹಿನ್ನಲೆಯಲ್ಲಿ ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಂದರು, ಮೀನುಗಾರಿಕೆ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿನ ಅಂತ್ಯೋದಯ, ಬಿಪಿಎಲ್ ಮತ್ತು ಆಹಾರ ಪಡೆಯಲು ನೊಂದಾಯಿಸಿರುವ […]

ಮಂಗಳೂರು: ತರಕಾರಿ-ದಿನಸಿ ಖರೀದಿಗೆ ಮುಗಿಬಿದ್ದ ಜನತೆ

ಮಂಗಳೂರು: ಕಳೆದ ಮೂರು ದಿನಗಳಿಂದ ಸಂಪೂರ್ಣ ಬಂದ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ದಿನಸಿ ಸಾಮಾಗ್ರಿಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3ಗಂಟೆಯ ವರೆಗೆ ಅವಕಾಶ ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಾಕಷ್ಟು ಸಂಖ್ಯೆಯಲ್ಲಿ ಜನತೆ ಹೊರ ಬಂದು ದಿನಸಿ, ತರಕಾರಿ ಖರೀದಿಸಿದ್ದಾರೆ. ವಿವಿಧ ಭಾಗಗಳ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಕ್ಯೂ ನಿಂತು ಖರೀದಿ ಮಾಡುತ್ತಿದ್ದರು. ಮಾರುಕಟ್ಟೆ ಬಳಿ ಕ್ಯೂ ಗಾಗಿ ಚೇರ್ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆ ಮಾಡಿಕೊಟ್ಟಿತ್ತು. […]

ಉದ್ಯಾವರ: ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟ ವಿತರಣೆ

ಉಡುಪಿ: ದೇಶ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನಕರ ಬಾಬು ಇವರ ನೇತೃತ್ವದಲ್ಲಿ ಉದ್ಯಾವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟವನ್ನು ವಿತರಿಸಲಾಗುತ್ತಿದ್ದು, ಊಟಕ್ಕೆ ಹಲವಾರು ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಇವರು ಕೂಡಾ ಊಟ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಸ್ಕ್ ಹಾಗೂ ಊಟ ವಿತರಿಸಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ […]