ಇನ್ಛೋಸಿಸ್ ನಿಂದ ಉಡುಪಿ ಜಿಲ್ಲಾಡಳಿತಕ್ಕೆ 54 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆ ಹಸ್ತಾಂತರ

ಉಡುಪಿ: ಇನ್ಛೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಸುಮಾರು 54 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಉಡುಪಿ ಜಿಲ್ಲಾಡಳಿತಕ್ಕೆ ಬುಧವಾರ ಹಸ್ತಾಂತರಿಸಿದ್ದಾರೆ. 4,000 ಎನ್95 ಮಾಸ್ಕ್, 4,000 ಸ್ಯಾನಿಟೈಸರ್, 25000ತ್ರಿಪಲ್ ಲೇಯರ್ ಮಾಸ್ಕ್, 10,000ಸರ್ಜಿಕಲ್ ಗ್ಲೌಸ್, 1,500 ಪಿಪಿಇ ಒದಗಿಸಿದ್ದಾರೆ. ಈ ಮೇಲಿನ ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿದ ಸುಧಾ ಮೂರ್ತಿ‌ ಹಾಗೂ ಡಾ.ರಾಮದಾಸ್ ಕಾಮತ್ ಅವರಿಗೆ ಜಿಲ್ಲಾಧಿಕಾರಿ‌ ಜಿ.ಜಗದೀಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಮೊದಲ ಖಾಸಗಿ ಕೋವಿಡ್ 19 ಆಸ್ಪತ್ರೆಯಾಗಿ‌ ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಕಾರ್ಯಾರಂಭ

ಉಡುಪಿ: ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ರಾಜ್ಯದ ಮೊದಲ ಖಾಸಗಿ ಕೋವಿಡ್ 19 ಆಸ್ಪತ್ರೆಯಾಗಿ‌ ಬುಧವಾರ ಕಾರ್ಯಾರಂಭಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಮಣಿಪಾಲ‌ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೊರೊನಾ‌ ಸೋಂಕಿತರನ್ನು ಇದೀಗ ಡಾ. ಟಿಎಂಎ ಪೈ ಆಸ್ಪತ್ರೆಗೆ ಸ್ಥಳಾಂತರಿಸಿ‌ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸದಿಲ್ಲಿ ನಿಜಾಮುದ್ದೀನ್ ಮುಸ್ಲಿಂ ಧಾರ್ಮಿಕ ಸಮಾವೇಶ: ರಾಜ್ಯದಿಂದ 1500  ಮಂದಿ ಭಾಗಿ

ಬೆಂಗಳೂರು: ಹೊಸದಿಲ್ಲಿಯ ನಿಜಾಮುದ್ದೀನ್‍ನ ಅಲಾಮಿ ಮಾರ್ಕೆಜ್ ಮಸೀದಿಯಲ್ಲಿ ಮಾ.13 ರಿಂದ 15 ರವರೆಗೆ ನಡೆದಿದ್ದ ಮುಸಲ್ಮಾನರ ಧಾರ್ಮಿಕ ಸಮಾವೇಶದಲ್ಲಿ ರಾಜ್ಯದ 1,500 ಮಂದಿ ಭಾಗವಹಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ತೆ ಮಾಡಿದೆ. ಈ ಪಟ್ಟಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಿದ್ದು, ರಾಜ್ಯದ ಅಧಿಕಾರಿಗಳು ಈವರೆಗೆ 800 ಮಂದಿಯ ಜತೆ ಸಂಪರ್ಕ ಸಾಧಿಸಿದ್ದಾರೆ. 800 ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಅವರಿಗೆ ಸೋಂಕು ಇದೆಯೇ ಎಂದು ಪತ್ತೆ ಮಾಡಲಾಗುತ್ತಿದೆ. […]

ತೋಟಗಾರಿಕಾ ಬೆಳೆಗಳ ಸರಬರಾಜುಗೆ  ಲಾಕ್ ಡೌನ್ ನಿಂದ ವಿನಾಯತಿ: ಜಿಲ್ಲಾಧಿಕಾರಿ

ಉಡುಪಿ  ಏ.1:  ಉಡುಪಿ ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಪ್ರಯುಕ್ತ ತೋಟಗಾರಿಕೆ ಬೆಳೆಗಾರರು ತಾವು ಬೆಳೆದ, ದಾಸ್ತಾನು ಮಾಡಿಕೊಂಡಿರುವ ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆಗೆ, ಹೊರ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ಬೆಳೆದ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. […]

ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನ ದೃಢ: ಪುತ್ತೂರು ಮೂಲದ ವ್ಯಕ್ತಿಗೆ ಕೊರೊನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇವರು ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಾ.20 ರಂದು ಮಂಗಳೂರು ಆಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದರು. ಮಂಗಳೂರಿನಿಂದ ಖಾಸಗಿ ಟ್ಯಾಕ್ಸಿ ಮೂಲಕ ಪುತ್ತೂರಿಗೆ ಆಗಮಿಸಿದ್ದರು. ಮಾ. 28ರಂದು ಗಂಟಲಿನಲ್ಲಿ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಆಸ್ಪತ್ರೆಗೆ ದಾಖಲು, ಗಂಟಲಿನ ದ್ರವ ತಪಾಸಣೆಗೆ ರವಾನೆಯಾಗಿದ್ದು, ಇಂದು ಬಂದ ವರದಿಯಲ್ಲಿ ಕೊರೊನಾ ದೃಡ ಪಟ್ಟಿದೆ. ವ್ಯಕ್ತಿಯ ಸಂಪರ್ಕದಲ್ಲಿ ಇದ್ದವರನ್ನು […]