ಕೊರೊನಾ ಲಾಕ್ ಡೌನ್ ಉಲ್ಲಂಘನೆ: 154 ವಾಹನಗಳು ಸೀಸ್
ಮಂಗಳೂರು: ಮಂಗಳೂರು ನಗರ ಕಮಿಷನರ್ ವ್ಯಾಪ್ತಿಯಲ್ಲಿ ಗುರುವಾರ ಕೊರೊನ ಲಾಕ್ ಡೌನ್ ಆದೇಶ ಉಲ್ಲಂಘಿಸಿದ 154 ವಾಹನಗಳನ್ನು ಸೀಝ್ ಮಾಡಲಾಗಿದೆ ಎಂದು ಕಮಿಷನರ್ ಡಾ.ಪಿ.ಎಸ್.ಹರ್ಷ ಟ್ವೀಟ್ ಮಾಡಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ದಿನಬಳಕೆ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7 ರಿಂದ 12 ರವರೆಗೂ ಖರೀದಿಗಾಗಿ ವಾಹನಗಳಿಗೂ ಅವಕಾಶ ನೀಡಲಾಗಿತ್ತು. ಆದ್ರೆ ಮಧ್ಯಾಹ್ನ 12 ಗಂಟೆಯ ಬಳಿಕವೂ ಕೆಲವು ವಾಹನ ಸವಾರರು ರಸ್ತೆಯಲ್ಲಿ ಸಂಚಾರ ನಡೆಸಿ ಕೊರೊನ ಲಾಕ್ ಡೌನ್ ಆದೇಶ ಉಲ್ಲಂಘನೆ ಮಾಡಿದ್ದರು. […]
ಉಡುಪಿ: ಇಂದು 10 ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು
ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 10 ಮಂದಿ ಕೊರೊನಾ ಶಂಕಿತರನ್ನು ಗುರುತಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಪತ್ತೆಯಾದ 10 ಮಂದಿಯಲ್ಲಿ ಆರು ಮಂದಿಯಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದು, ಉಳಿದ ನಾಲ್ವರು ಕೊರೊನಾ ಸೋಂಕಿತರ ಸಂಪರ್ಕ ಹೊಂದಿದವರಾಗಿದ್ದಾರೆ. ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಶಾಕಾರ್ಯಕರ್ತರ ಮೇಲಿನ ಹಲ್ಲೆ: ಯು.ಟಿ ಖಾದರ್ ಖಂಡನೆ
ಮಂಗಳೂರು: ಬೆಂಗಳೂರಿನ ಸಾದಿಕ್ ನಗರದಲ್ಲಿ ಕೋವಿಡ್ ೧೯ ತಪಾಸಣೆಗಾಗಿ ಹೊರಡಿದ ಆಶಾಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಆಶಾ ಕಾರ್ಯಕರ್ತರು ಜನರ ಹಿತಾಸಕ್ತಿಗಾಗಿ ದುಡಿಯುವ ಮಹಿಳೆಯರು. ಎಂದಿಗೂ ಜನರ ಹಿತಾಸಕ್ತಿಗೆ ನೋವುಂಟು ಮಾಡುವ ಕೆಲಸ ಆಶಾ ಕಾರ್ಯಕರ್ತರದ್ದಲ್ಲ. ಅವರು ನಮ್ಮ ಕುಟುಂಬದ ಒಳಿತಿಗಾಗಿ ಬಂದು ಆರೋಗ್ಯದ ಕುರಿತು ಮಾಹಿತಿ ಕೇಳಿದರೆ ಅವರಿಗೆ ಸ್ಪಂದಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕೊರೊನಾ ವೈರಸ್ ಜಾತಿ, ಮತ, ದೇಶ, ಗಡಿ, ಭಾಷೆ, ರಾಜ್ಯ, ಶ್ರೀಮಂತ, ಬಡವ, […]
7-9ನೇ ತರಗತಿಗೆ ಪರೀಕ್ಷೆ ಇಲ್ಲ: ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ಬಗ್ಗೆ ಏ.14ರ ನಂತರ ನಿರ್ಧಾರ: ಸಚಿವರಿಂದ ಸ್ಪಷ್ಟನೆ
ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ಆದೇಶದಂತೆ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು. ವಿದ್ಯಾರ್ಥಿಗಳ ಪರೀಕ್ಷೆಗಳೂ ಮುಂದೂಡಲ್ಪಟ್ಟಿದ್ದು 7-9ನೇ ತರಗತಿಗೆ ಪರೀಕ್ಷೆಗಳು ನಡೆಯುವುದಿಲ್ಲ, ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ಬಗ್ಗೆ ಏ. 14ರ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‍ಬುಕ್ ಲೈವ್ ವಿಡಿಯೋ ಮೂಲಕ ಸ್ಪಷ್ಟಣೆ ನೀಡಿದ್ದಾರೆ. 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಮುಂದಿನ ತರಗತಿಗೆ ಪಾಸ್ ಮಾಡಿ ಕಳುಹಿಸಲಾಗುತ್ತದೆ ಎಂದು ತಿಳಿಸಿದರು. […]
ಜಿಲ್ಲೆಯಲ್ಲಿ ಮೀನು, ಮಾಂಸ ನಿರ್ಬಂದಿಸಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ ಏ.2: ಜಿಲ್ಲೆಯಲ್ಲಿ ಮೀನು ಹಿಡಿಯುವುದು ಹಾಗೂ ಮಾರಾಟ ಮಾಡುವುದನ್ನು ನಿರ್ಬಂದಿಸಿಲ್ಲ, ಅದರೆ ಗುಂಪು ಗುಂಪಾಗಿ ಮೀನುಗಾರಿಕೆ ಮಾಡುವುದು ಹಾಗೂ ಮಾರಾಟ ಮಾಡುವುದಕ್ಕೆ ನಿರ್ಭಂದವಿದೆ, ಆದರೆ ಸಾಂಪ್ರದಾಯಿಕ ದೋಣಿಗಳಲ್ಲಿ ಮೀನುಗಾರಿಕೆ ಮಾಡಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು, ಕೋಳಿ, ಮಾಂಸ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಠಪಡಿಸಿದ್ದಾರೆ. ಅವರು ಗುರುವಾರ, ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯ ರೈತರ ಬೆಳಗಳಿಗೆ ಸಹ ಯಾವುದೇ ತೊಂದರೆಯಾಗದಂತೆ ಸಮರ್ಪಕ ರೀತಿಯಲ್ಲಿ ಸಾಗಾಟ ಮತ್ತು ಮಾರಾಟಕ್ಕೆ […]