ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ಆರೋಪ: ತನಿಖೆಗೆ ಸಚಿವ ಕೋಟ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕೊಕ್ಕಡ ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ವಿಚಾರದಲ್ಲಿ ಸ್ಥಳೀಯ ಶಾಸಕ  ಹರೀಶ್ ಪೂಂಜ ಅವರ ದೂರಿನಂತೆ, ಇಡೀ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ, ದೇವಸ್ಥಾನದ ಕಾರ್ಯನಿರ್ವಹಣ ಅಧಿಕಾರಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು, ರಾಜ್ಯ ಧಾರ್ಮಿಕ ದತ್ತಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇಲಾಖೆಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ತಿಳಿಸಿದ್ದು, ಅಗತ್ಯವಿದ್ದಲ್ಲಿ ಕಾರ್ಯನಿರ್ವಹಣಾ ಅಧಿಕಾರಿಯವರನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ ಮಾಡಬೇಕೆಂದು […]

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ  ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್  ಮಂಗಳೂರು ಇದರ ವತಿಯಿಂದ ಕೊರೊನಾ ವೈರಸ್ ನಿರ್ಬಂಧದಿಂದ ಸಂಕಷ್ಟಕ್ಕೆ ಸಿಲುಕಿದ ಯಕ್ಷಗಾನ ಕ್ಷೇತ್ರದಲ್ಲಿ ದುಡಿಯುತ್ತಿರುವ ಸುಮಾರು ಒಂದು ಸಾವಿರ ಕಲಾವಿದರಿಗೆ ಸುಮಾರು 20 ಲಕ್ಷ ರೂಪಾಯಿಗೂ ಮಿಕ್ಕಿದ ಆಹಾರ ಸಾಮಾಗ್ರಿ ಕಿಟ್ ನ್ನು ವಿತರಿಸಲಾಯಿತು. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಕಾಸರಗೋಡು ಮೊದಲಾದ ಜಿಲ್ಲೆಗಳಲ್ಲಿರುವ ಅಗತ್ಯ ಇರುವ ಯಕ್ಷಗಾನ ಕಲಾವಿದರಿಗೆ ಆಯಾಯ  ಪ್ರದೇಶಗಳಲ್ಲಿ ಇರುವ ಘಟಕಗಳ ಮೂಲಕ ಪಡಿತರ ಮತ್ತು ದಿನಸಿ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ಯಕ್ಷಧ್ರುವ […]

ದಕ್ಷಿಣ ಕನ್ನಡ: ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ‌ ಸೋಮವಾರ ಡಿಸ್ಚಾರ್ಜ್  ಆಗಿದ್ದಾರೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಭಟ್ಕಳ, ಮೂರು ಮಂದಿ ಕಾಸರಗೋಡು ನಿವಾಸಿಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಅವರಿಗೆ 28 ದಿನ ಕಡ್ಡಾಯ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದ್ದು, ಕೈಗೆ ಸೀಲ್ ಹಾಕಿ ಕಳುಹಿಸಲಾಗಿದೆ. ಒಟ್ಟು 12 ಮಂದಿಗೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇನ್ನುಳಿದ 8 ಎಂಟು ಮಂದಿ ಕೊರೋನಾ ಸೋಂಕಿತರಿಗೆ ವೆನ್ಲಾಕ್ […]

ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಜನಪ್ರಿಯ ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬುಲೆಟ್ ಪ್ರಕಾಶ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯಕ್ಕೆ ಉಡುಪಿಗೆ ಕೊರೊನಾದ ಆತಂಕವಿಲ್ಲ: ಡಿಸಿ ಜಗದೀಶ್

ಉಡುಪಿ: ಉಡುಪಿ ಜಿಲ್ಲೆಗೆ ಸದ್ಯಕ್ಕೆ ಕೊರೊನಾ ಸೋಂಕಿನ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೊರೊನಾ ಪಾಸಿಟಿವ್ ಬಂದಿರುವ ಮೂರು ವ್ಯಕ್ತಿಗಳ ಸಂಪರ್ಕದಲ್ಲಿದ್ದ ಎಲ್ಲರನ್ನು ತಪಾಸಣೆ ನಡೆಸಿದ್ದು, ಎಲ್ಲರನ್ನು ಉದ್ಯಾವರದ ಎಸ್ ಡಿಎಂ ಆಸ್ಪತ್ರೆ ಹಾಗೂ ಹಾಸ್ಟೇಲ್ ನಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ಹಾಗೆಯೇ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾದರಿಯನ್ನು ಪ್ರಾಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಎಲ್ಲ ವರದಿಗಳಲ್ಲೂ ನೆಗೆಟಿವ್ ಫಲಿತಾಂಶ ಬಂದಿದೆ. ಹಾಗಾಗಿ ಜನರು ಯಾವುದೇ […]