ಕೊರೊನ ಹಿನ್ನೆಲೆ: ಉಡುಪಿ ಜಿಲ್ಲೆಯಿಂದ ಇಂದು 53 ಮಂದಿಯ ಮಾದರಿ ಪರೀಕ್ಷೆಗೆ ರವಾನೆ

ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ 53 ಮಂದಿ ಕೊರೊನಾ ಶಂಕಿತರನ್ನು ಪತ್ತೆ ಮಾಡಲಾಗಿದ್ದು, ಇಂದು ಅವರ ಗಂಟಲಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ತಿಳಿಸಿದ್ದಾರೆ. 53 ಮಂದಿಯ ಪೈಕಿ 51 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರಾಗಿದ್ದಾರೆ. ಎಲ್ಲರನ್ನು ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 41 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಬಂದಿದೆ. ಇನ್ನು‌ 56 […]

ಜನೌಷಧಿ ಕೇಂದ್ರಗಳನ್ನು ಬೆಳಿಗ್ಗೆ 7ಗಂಟೆಗೆ ತೆರೆಯಿರಿ: ಸಚಿವ ಕೋಟ ಸೂಚನೆ 

ಉಡುಪಿ: ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಯಾದ ಜನೌಷಧಿ ಕೇಂದ್ರವನ್ನು ಬೆಳಿಗ್ಗೆ 9 ಗಂಟೆಯ ಬದಲು ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ವಿಚಾರಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನೌಷಧ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯ ಬಳಿಕ ತೆರೆಯುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಏಪ್ರಿಲ್ 14ರಿಂದ ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ […]

ಅನುಮತಿಯಿಲ್ಲದೇ ಡ್ರೋನ್ ಕ್ಯಾಮರಾ ಬಳಸಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ

ಉಡುಪಿ ಏ.13: ಕೋವಿಡ್-2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿದ್ದು,   ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144 (3) ರಂತೆ ನಾಗರೀಕರ ಸಂಚಾರವನ್ನು ನಿರ್ಭಂಧಿಸಿ ಆದೇಶವನ್ನು ಹೊರಡಿಸಲಾಗಿದೆ. ಈ ನಡುವೆ ಕೆಲವೊಂದು ವ್ಯಕ್ತಿಗಳು / ಸಂಸ್ಥೆಗಳು  ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೇ ಡ್ರೋನ್ ಕ್ಯಾಮರಾಗಳನ್ನು ಬಳಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.ಈ ಬಗ್ಗೆ ಸಾಕಷ್ಟು ದೂರುಗಳು ಸ್ವೀಕೃತವಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣಕ್ಕೆ ಆಸ್ಪದ ನೀಡಿದಂತಾಗುತ್ತದೆ. ಡ್ರೋನ್ […]

ಮಣಿಪಾಲ ಕೆಎಂಸಿ ಆಸ್ಪತ್ರೆಯ ಕೆಲ ಹೊರರೋಗಿ ವಿಭಾಗಗಳು ಸೇವೆಗೆ ಲಭ್ಯ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಕೆಲ ಹೊರ ರೋಗಿಗಳ ವಿಭಾಗಗಳು ಏಪ್ರಿಲ್  15ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೇವೆಗೆ ಲಭ್ಯವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಸಾಮಾನ್ಯ ವೈದ್ಯಕೀಯ ವಿಭಾಗ, ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ, ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗ, ಮಕ್ಕಳ ವಿಭಾಗ, ಅಲರ್ಜಿ ಮತ್ತು ಶ್ವಾಸಕೋಶ ವಿಭಾಗ, ಮೂಳೆ ವಿಭಾಗ, ವೈದ್ಯಕೀಯ ಕ್ಯಾನ್ಸರ್ ವಿಭಾಗ, ಶಸ್ತ್ರಚಿಕಿತ್ಸಾ ಕ್ಯಾನ್ಸರ್ , ಮಕ್ಕಳ ರಕ್ತಶಾಸ್ತ ಮತ್ತು […]

ನಾಳೆ ಬೆಳಿಗ್ಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ದೇಶ: ಮಂಗಳವಾರ ಬೆಳಗ್ಗೆ 10ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾತನಾಡಲಿದ್ದಾರೆ. ಕೊರೊನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ನಾಳೆಗೆ ಮುಕ್ತಾಯವಾಗಲಿದೆ. ನಾಳೆಯ ಭಾಷಣದಲ್ಲಿ ಹೊಸ ನಿರ್ಧಾರಗಳನ್ನು ಘೋಷಿಸುವ ಅಥವಾ ಲಾಕ್‌ಡೌನ್‌ ವಿಸ್ತರಿಸುವ ಅನುಮಾನಗಳಿಗೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ.