ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಉಡುಪಿ ಏ.14: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ, ಮಂಗಳವಾರ  ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಜಿ.ಜಗದೀಶ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಷನೆ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ  ಕಿರಣ್ ಫಡ್ನೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ […]

ದ.ಕ. ಜಿಲ್ಲೆಯಲ್ಲಿ ಕೊರೊನ ಸೋಂಕಿತ 9 ಮಂದಿ ಗುಣಮುಖರಾಗಿ ಡಿಸ್ಚಾರ್ಜ್; ಇಂದು ಪುತ್ತೂರಿನ‌ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ‌ ಕೊರೊನಾ ಸೋಂಕಿತ ಮತ್ತೋರ್ವ ವ್ಯಕ್ತಿ ಪೂರ್ಣ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ‌ ಒಟ್ಟು 12 ಕೊರೊನಾ ಸೋಂಕಿತರ‌ ಪೈಕಿ 9 ಮಂದಿ ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಡಿಸ್ಚಾರ್ಜ್ ಆದವರು ಪುತ್ತೂರು ಮೂಲದವರಾಗಿದ್ದು, ಅವರು ದುಬೈಯಿಂದ ಮಾರ್ಚ್ 21 ರಂದು ಪುತ್ತೂರಿಗೆ ಆಗಮಿಸಿದ್ದರು. ಅನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಏಪ್ರಿಲ್ 1ರಂದು ಗಂಟಲಿನ ದ್ರವ ಮಾದರಿ ಪರೀಕ್ಷೆಯಲ್ಲಿ ಕೊರೊನಾ‌ […]

ಉಡುಪಿಯ ಎರಡನೆ ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್: 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ

ಉಡುಪಿ: ಜಿಲ್ಲೆಯ ಎರಡನೇ ಕೊರೊನಾ ಸೋಂಕಿತ (ಕೋವಿಡ್-19) ಮಣಿಪುರದ 35ರ  ಹರೆಯದ ಯುವಕ ಸಂಪೂರ್ಣ ಗುಣಮುಖನಾಗಿದ್ದು, ಆತನನ್ನು ಇಂದು ಮಧ್ಯಾಹ್ನದ ವೇಳೆಗೆ ಉಡುಪಿಯ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಹೇಳಿದ್ದಾರೆ. ಈತನ ಗಂಟಲಿನ ದ್ರವದ ಮಾದರಿಯನ್ನು ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, ಇದೀಗ ಆತ ಸೋಂಕಿನಿಂದ ಸಂಪೂರ್ಣ ಚೇತರಿಸಿ ಕೊಂಡಿರುವುದು ಖಚಿತವಾಗಿದೆ. […]

ಕೊರೋನಾಗೆ ಕಡಿವಾಣ ಜಿಲ್ಲೆಗೆ ಕೇಂದ್ರದಿಂದ ಪ್ರಶಂಸೆ: ಜಿಲ್ಲಾಧಿಕಾರಿ ಜಿ.ಜಗದೀಶ

ಉಡುಪಿ ಏ.14: ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ, ಉಡುಪಿ ಜಿಲ್ಲೆಯ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ, ಕಳೆದ 2 ವಾರಗಳಿಂದ ಯಾವುದೇ  ಹೊಸ ಕೊರೋನ ಪ್ರಕರಣಗಳು ಕಂಡುಬಂದಿಲ್ಲವಾದ  ಕಾರಣ  ಈ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ಕೊನೆಯ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ನಂತರದ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಂಡ ಸಮರ್ಥ ನಿರ್ಧಾರಗಳಿಂದ , ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೊಸದಾಗಿ ಕಂಡು ಬಂದಿಲ್ಲ, ಜಿಲ್ಲೆಯಲ್ಲಿ ಕೊರೋನಾ ಸೋಂಕಿತರು ಕಂಡು ಬಂದ ಕೂಡಲೇ , […]

ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ ಬಂದವರ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ

ಉಡುಪಿ ಏ.14: ಕೋವಿಡ್-19 ಗೆ ಸಂಬ0ದಿಸಿದ0ತೆ,  ಜಿಲ್ಲೆಯ ಪ್ರಜ್ಞಾವಂತ ನಾಗರೀಕರ ಸಹಕಾರದೊಂದಿಗೆ ರೋಗ ಹರಡುವುದನ್ನು ತಡೆಗಟ್ಟುವುದರಲ್ಲಿ ಆದಷ್ಟು ಮಟ್ಟಿಗೆ ಪ್ರಗತಿಯನ್ನು ಕಂಡಿದ್ದೇವೆ. ಆದರೆ ನಾವು ಇನ್ನೂ ಕೂಡಾ ಜಾಗೃತರಾಗಿ ಲಾಕ್ ಡೌನ್ ಅನ್ನು ಪಾಲಿಸುವ ಅಗತ್ಯವಿದೆ. ಕೆಲವು ಜನ ಅನಗತ್ಯವಾಗಿ ಹೊರಗಡೆ ತಿರುಗಾಡುವುದು, ಲಾಕ್ ಡೌನ್ ಮೂಲ ಉದ್ದೇಶವನ್ನು  ಅರುತುಕೊಳ್ಳದೇ ಅದನ್ನು ಧಿಕ್ಕರಿಸುವುದು  ಕಂಡು ಬಂದಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ಈಗಾಗಲೇ 413 ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಳು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ […]