ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ವಿತರಣೆ: ಜಿಲ್ಲಾಧಿಕಾರಿ

ಉಡುಪಿ 18: ಜಿಲ್ಲೆಯಲ್ಲಿ ಈಗಾಗಲೇ ಹೊಸ ಆದ್ಯತಾ(ಬಿಪಿಎಲ್) ಮತ್ತು ಆದ್ಯತೇತರ(ಎಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇರುವ ಅರ್ಜಿದಾರರ ಗಮನಕ್ಕೆ ತರುವುದೇನೆಂದರೆ, ಈ ಅರ್ಜಿಗಳಿಗೆ ಪಡಿತರ ಹಂಚಿಕೆಯಾಗಿದ್ದು ಅಂತಹ ಅರ್ಜಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 10 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು ಎಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 15-/- ರೂ ದರದಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದಾಗಿದೆ . […]

ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ಉಡುಪಿ ಏ18: ಜಿಲ್ಲೆಯ ಯಾವುದೇ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ , ಜ್ವರ ಮತ್ತು ಶೀತ ಕೆಮ್ಮು ಇರುವ ರೋಗಿಗಳು ಕಂಡುಬಂದಲ್ಲಿ ಅವರ ವಿವರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ , ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳ ವೈದ್ಯರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ , ಕೋವಿಡ್ -19 ನಿಯಂತ್ರಣ ಕುರಿತಂತೆ ರಚಿಸಲಾಗಿರುವ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ […]

ಕೃಷಿ ಚಟುವಟಿಕೆ ನಡೆಸಲು ಲಾಕ್‌ಡೌನ್ ಅಡ್ಡಿಯಾಗುವುದಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ಕುಂದಾಪುರ: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ‍್ಯಕರ್ತೆಯರು ಸೇರಿದಂತೆ ಪೊಲೀಸರು, ಎಲ್ಲಾ ಅಧಿಕಾರಿಗಳು ಸಮಯದ ಪರಿಮಿತಿ ಮೀರಿ ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದು, ಅವರಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅವರು ಶನಿವಾರ ಕೊರೋನಾ ಕುರಿತಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕೈಗೊಂಡ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ತಾ.ಪಂ. ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೃಷಿ, ತೋಟಗಾರಿಕಾ ಬೆಳೆಗಳ ಸಾಗಾಟಕ್ಕೆ ಯಾವುದೇ ಸಮಸ್ಯೆ ಆಗದಂತೆ […]

ಕುಂದಾಪುರ: ಗ್ರಾಮಮಟ್ಟದಲ್ಲಿ ಸಂತೆ ನಡೆದ್ರೂ ಬಗೆಹರಿಯಲಿಲ್ಲ ಜನರ ಚಿಂತೆ :ಅಗತ್ಯ ವಸ್ತುಗಳು ಸಿಗದೇ ಸಾರ್ವಜನಿಕರ ಪರದಾಟ !

ಕುಂದಾಪುರ: ಗ್ರಾಮೀಣ ಅಂಗಡಿ ವ್ಯಾಪಾರಸ್ಥರಿಗಾಗಿ ಕುಂದಾಪುರ ಎಪಿಎಂಸಿ ಆವರಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಯನ್ನು ಕೋಟೇಶ್ವರದ ಕಾಳಾವರವರ ವದರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಕೋವಿಡ್-೧೯ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಂದಾಪುರದ ಶನಿವಾರ ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ತರಕಾರಿ, ಹಣ್ಣು, ಅಗತ್ಯ ವಸ್ತುಗಳ ಪೂರೈಕೆಗೆ ವ್ಯತ್ಯಯ ಉಂಟಾಗದಂತೆ ಕೇವಲ ಸಗಟು, ಚಿಲ್ಲರೆ ವ್ಯಾಪರಸ್ಥರಿಗೆ ಮಾತ್ರ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಸ್ತಾರ ಮೈದಾನದಲ್ಲಿ ಸಂತೆ ನಡೆಸಲು ತಾಲೂಕು ಆಡಳಿತ, ಎಪಿಎಂಸಿ, ಪೊಲೀಸ್ ಇಲಾಖೆ ಶುಕ್ರವಾರವೇ […]

ಮಂಗಳೂರು: ಬೀಡಿ ಉದ್ಯಮ ಸೋಮವಾರದಿಂದಲೇ ಪ್ರಾರಂಭ: ಸಚಿವ‌  ಕೋಟ

ಮಂಗಳೂರು: ಅವಿಭಜಿತ ದಕ್ಷಿಣ ‌ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದಲೇ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ. ಕಾರ್ಮಿಕರಿಗೆ ಶೇಕಡಾ 50ರಷ್ಟು ಕೆಲಸ ನೀಡಲು ಮಾಲೀಕರು ಒಪ್ಪಿಕೊಂಡಿದ್ದಾರೆ ಎಂದು […]