ಪಾದರಾಯನಪುರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಲಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ 

ಉಡುಪಿ: ಬೆಂಗಳೂರಿನ ಪಾದರಾಯನಪುರದಲ್ಲಿ ರವಿವಾರ ಸಂಜೆ ನಡೆದಿರುವ ಘಟನೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಅವರು ತೀವ್ರವಾಗಿ  ಖಂಡಿಸಿದ್ದಾರೆ. ಕ್ವಾರಂಟೈನ್ ನಲ್ಲಿ ಕೊರೋನ ಸೋಂಕು ಶಂಕಿತರನ್ನು ಕ್ವಾರಂಟೈನ್ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಗಲಾಟೆ ನಡೆಸಿ ಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಅತ್ಯಂತ ಖಂಡನೀಯ ಎಂದು ಹೇಳಿರುವ ಅವರು ತಪ್ಪಿತಸ್ಥರ ವಿರುದ್ಧ  ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, […]

ಹೊರ ರಾಜ್ಯದ ಮೀನಿನ ಲಾರಿಗಳಿಗೆ ಪ್ರತ್ಯೇಕ ವ್ಯವಸ್ಥೆ: ಶಾಸಕ ಕಾಮತ್

ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು. ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ ಇಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಹಳೆಬಂದರು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಹೊರರಾಜ್ಯಗಳ ಸುಮಾರು 25ರಷ್ಟು ಬೃಹತ್ ಲಾರಿಗಳು ಮೀನುಗಳ ಸಮೇತ ಮಂಗಳೂರಿಗೆ ಆಗಮಿಸುತ್ತಿವೆ. ಆದರೆ ಸದ್ಯ ಅವರಿಗೆ ಸೂಕ್ತ ಸ್ಥಳಾವಕಾಶವಿರಲಿಲ್ಲ. ಹೀಗಾಗಿ ಹಳೆ […]

ಲಾಕ್ ಡೌನ್ ಉಲ್ಲಂಘಿಸಿದ ಬಿಗ್ ಬ್ಯಾಗ್ಸ್ ಕಂಪನಿ: ಸಾವಿರಾರು ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಕಂಪನಿ

ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠ ಇಂಡಸ್ಟ್ರಿಯಲ್ ಏರಿಯಾದ ಬಿಗ್ ಬ್ಯಾಗ್ಸ್ ಪ್ರೈ.ಲಿ ಎಂಬ ಪ್ಲಾಸ್ಟಿಕ್ ಬ್ಯಾಗ್ ಉತ್ಪಾದನಾ ಕಂಪನಿ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿದೆ. ಲಾಕ್ ಡೌನ್ ನಡುವೆಯೂ ಕಂಪೆನಿ ತನ್ನ ಕಾರ್ಮಿಕರನ್ನು ಕರೆಸಿಕೊಂಡು ಕಾರ್ಯಾರಂಭವನ್ನು ಮಾಡಿದೆ. ಹೊರರಾಜ್ಯದಿಂದಲೂ ಕಾರ್ಮಿಕರು ಆಗಮಿಸಿದ್ದು ಸುಮಾರು 3 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಂದ ಕೆಲಸ ಆರಂಭವಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ನೌಕರರನ್ನು ಒಟ್ಟು ಸೇರಿಸಿರಿರುವುದರಿಂದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆ ರೆಡ್ ಝೋನ್ ಪಟ್ಟಿಯಲ್ಲಿದ್ದು ಕಂಪೆನಿಯ ಕೆಲಸ ಕಾರ್ಯವನ್ನು […]

ಮಂಗಳೂರು: ಲಾಕ್ ಡೌನ್ ಉಲ್ಲಂಘಿಸಿದ 100 ವಾಹನಗಳು ಸೀಝ್

ಮಂಗಳೂರು: ಲಾಕ್ ಡೌನ್ ಉಲ್ಲಂಘಿಸಿದ ಬರೋಬ್ಬರಿ‌ 100 ವಾಹನಗಳನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೀಝ್ ಮಾಡಲಾಗಿದೆ. ಇದರಲ್ಲಿ 88 ದ್ವಿಚಕ್ರ ವಾಹನಗಳು, 4 ಆಟೋಗಳು ಹಾಗೂ 8 ಕಾರುಗಳು ಒಳಗೊಂಡಿವೆ. ಲಾಕ್ ಡೌನ್ ಮಧ್ಯೆಯೂ ಈ ವಾಹನಗಳು ರಸ್ತೆಗಿಳಿದ್ದವು. ದಿನ ಬಳಕೆ ವಸ್ತುಗಳ ಖರೀದಿಗೆ ವಾಹನಗಳ ನಿಷೇಧಗಳನ್ನು ನಿಷೇಧಿಸಲಾಗಿದೆ. ನಡೆದುಕೊಂಡೇ ಮನೆ ಸಮೀಪ ಖರೀದಿಗೆ ಬೆಳಿಗ್ಗೆ 7 ರಿಂದ 12 ರವರೆಗೆ ಅವಕಾಶ ನೀಡಲಾಗಿತ್ತು. ಆದೇಶವಿದ್ರೂ ರಸ್ತೆಗಿಳಿದಿದ್ದ ವಾಹನಗಳನ್ನು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷಾ […]

ಬಂಟ್ವಾಳ: ಕೊರೊನಾಗೆ ಮೃತಪಟ್ಟ ಹಿನ್ನೆಲೆ 34 ಮಂದಿಗೆ ಕ್ವಾರಂಟೈನ್: ಅಧಿಕಾರಿಗಳ ಜತೆ ಸಂಸದ ನಳಿನ್ ಸಭೆ

ಮಂಗಳೂರು: ಕೊರೊನಾ ಸೋಂಕಿಗೆ ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಅವರು ಸೋಮವಾರ ಸ್ಥಳೀಯ ಶಾಸಕರು, ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಮಹಿಳೆಯ ಕುಟುಂಬದ ಸದಸ್ಯರು ಸೇರಿದಂತೆ ಅವರ ಸಂಪರ್ಕದಲ್ಲಿದ್ದ 28 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಜತೆಗೆ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಇತರ 6 ಸಿಬಂದಿ ಸಹಿತ ಒಟ್ಟು 34 ಮಂದಿಗೆ ಕ್ವಾರಂಟೈನ್‌ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ‌ಸಂಸದ ನಳಿನ್ ಕುಮಾರ್ ‌ಕಟೀಲು‌ ಮಾಹಿತಿ ನೀಡಿದರು. ಅಲ್ಲದೇ ಅವರು ಬೇರೆ […]