ಲಾಕ್ ಡೌನ್ ನಿಯಾಮವಳಿಯಲ್ಲಿ ಸ್ವಲ್ಪ ಸಡಿಲಿಕೆ: ಕೋವಿಡ್ ಹಾಟ್‌ಸ್ಪಾಟ್ ಅಲ್ಲದ ಪ್ರದೇಶಗಳಲ್ಲಿ ನಾಳೆಯಿಂದ ಆಯ್ದ ಸೇವೆಗಳಿಗೆ ಅನುಮತಿ
ಬೆಂಗಳೂರು: ಕೊರೊನಾ (ಕೋವಿಡ್–19) ಕಂಟೈನ್ಮೆಂಟ್ ಅಲ್ಲದ ವಲಯಗಳಲ್ಲಿ ನಾಳೆಯಿಂದ ಕೊರಿಯರ್, ನಿರ್ಮಾಣ ಕಾರ್ಯ, ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆ ಸೇರಿದಂತೆ ಆಯ್ದ ಕೆಲವು ಸೇವೆಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್ ಡೌನ್ ನಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಆಯ್ದ ಕೆಲ ಹೆಚ್ಚುವರಿ ಚಟುವಟಿಕೆಗಳಿಗೆ ಏ. 23ರಿಂದ ಅವಕಾಶ ನೀಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದ್ದಾರೆ. ಸರ್ಕಾರ ಕೋವಿಡ್ ಹಾಟ್ ಸ್ಪಾಟ್ ಗಳೆಂದು ಗುರುತಿಸಿರುವ ಪ್ರದೇಶಗಳಿಗೆ ಈ ನಿಯಮ ಅನ್ವಯವಾಗಲ್ಲ. ಅಲ್ಲಿ […]
ಏ.29 ರಿಂದ ಚಂದನವಾಹಿನಿಯಲ್ಲಿ ಎಸ್.ಎಸ್.ಎಲ್.ಸಿ ಪುನರ್ಮನನ ತರಗತಿ: ಸುರೇಶ್ ಕುಮಾರ್
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್ ನಿಂದ ಲಾಕ್‌ಡೌನ್ ಜಾರಿಯಾಲ್ಲಿದ್ದು, ಈ ಹಿನ್ನೆಲೆಯಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ಮುಂದೂಡಿಕೆ ಆಗಿರುವುದರಿಂದ ಪರೀಕ್ಷೆ ಬರೆಯಲು ಕಾಯುತ್ತಿರುವ ವಿದ್ಯಾರ್ಥಿಗಳು ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ನುರಿತ ಶಿಕ್ಷಕರಿಂದ ಬೋಧನೆ: ವಿದ್ಯಾರ್ಥಿಗಳಿಗೆ ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ಜರಗಲಿದ್ದು, ನುರಿತ ಶಿಕ್ಷಕರಿಂದ ಬೋಧನೆ ನಡೆಯಲಿದೆ. ಮೊದಲ 16 ದಿನ ಪ್ರತಿ […]
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವಹೇಳನ: ಅರ್ನಾಬ್ ಗೋಸ್ವಾಮಿ ಬಂಧನಕ್ಕೆ ಒತ್ತಾಯ
ಉಡುಪಿ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸಾಧುಗಳ ಗುಂಪು ಹತ್ಯೆಯ ಕುರಿತಾಗಿ ರಿಪಬ್ಲಿಕ್ ಟಿವಿಯ ನಿರೂಪಕ ಅರ್ನಾಬ್ ಗೋಸ್ವಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವಹೇಳನ ಮಾಡಿರುವುದು ಭಾರತೀಯ ಪತ್ರಿಕೋದ್ಯಮಕ್ಕೇ ಕಳಂಕ. ಈ ಕುರಿತು ಮಹಾರಾಷ್ಟ್ರ ಸರಕಾರ ಸೂಕ್ತ ಕ್ರಮಕೈಗೊಂಡು 101 ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದರೂ, ದ್ವೇಷದ ಭಾವನೆಗಳನ್ನು ಜಾತ್ಯಾತೀತ ಭಾರತದ ಪ್ರಜೆಗಳಲ್ಲಿ ಬಿತ್ತುತ್ತಿರುವ ಅರ್ನಾಬ್ ಗೋಸ್ವಾಮಿಯನ್ನು ಭಾರತದ ಪತ್ರಿಕಾ ಮಾಧ್ಯಮ ಲೋಕ ತಕ್ಷಣ ದೂರವಿಟ್ಟು ಮಾಧ್ಯಮ ಕ್ಷೇತ್ರದ ಮರ್ಯಾದೆ ಉಳಿಸಬೇಕು ಮತ್ತು ಸರಕಾರ ಸೂಕ್ತ ಪ್ರಕರಣ […]
ನಾಳೆಯಿಂದ ಮಕ್ಕಳಿಗೆ ಚುಚ್ಚುಮದ್ದು: ಡಿಹೆಚ್‍ಓ
ಉಡುಪಿ ಏ.22: ಲಾಕ್ ಡೌನ್ ನಿಂದ ಐದು ವರ್ಷದೊಳಗಿನ ಮಕ್ಕಳಿಗೆ ವಿವಿಧ ಹಂತದಲ್ಲಿ ಮತ್ತು ಗರ್ಭಿಣಿಯರಿಗೆ ನೀಡಬೇಕಾದ ಚುಚ್ಚುಮದ್ದುಗಳನ್ನು ನಿಲ್ಲಿಸಲಾಗಿದ್ದು, ಏ.23ರಿಂದ (ಗುರುವಾರ) ಎಂದಿನಂತೆ ಈ ಚುಚ್ಚುಮದ್ದುಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸೋಮವಾರ ದಿಂದ ಶನಿವಾರದ ವರೆಗೆ ಮತ್ತು ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತೀ ಗುರುವಾರ, 1.5, 2.5, 3.5 ಮತ್ತು […]
ಕೊರೊನ ವಾರಿಯರ್ಸ್ ಹಲ್ಲೆ ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿವುದು: ಸಚಿವ ಕೋಟ
ಮಂಗಳೂರು: ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರನ್ನು ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ನೀಡಿರುವ ದಿನಸಿ ಸಾಮಾಗ್ರಿಗಳನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಸ್ತಾಂತರ ಮಾಡಿ ಮಾತನಾಡಿದರು. ಕೊರೋನಾ […]