ನಾಳೆಯಿಂದ ರಂಜಾನ್ ಉಪವಾಸ ಆರಂಭ

ಉಡುಪಿ: ಪವಿತ್ರ ರಂಜಾನ್ ಪ್ರಥಮ ಚಂದ್ರ ದರ್ಶನವು ಕೇರಳದ ಕಾಪಾಡ್ ನಲ್ಲಿ ಗುರುವಾರ ಆಗಿರುವುದರಿಂದ ಶುಕ್ರವಾರದಿಂದ ರಂಜಾನ್ ಉಪವಾಸ ಆರಂಭವಾಗಲಿದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಕರೆ ನೀಡಿದ್ದಾರೆ.

ಮೂರು ದಿನಗಳೊಳಗೆ ಉಡುಪಿ ಜಿಲ್ಲೆ ಗ್ರೀನ್ ಝೋನ್ ಗೆ ಸೇರ್ಪಡೆ: ನಿರ್ಬಂಧ ಸಡಿಲಿಕೆಗೆ ಕ್ರಮ: ಸಚಿವ ಬೊಮ್ಮಾಯಿ

ಉಡುಪಿ: ಕೋವಿಡ್-19 ನಿಂದ ಮುಕ್ತವಾಗಿರುವ ಉಡುಪಿ ಜಿಲ್ಲೆ ಮೂರು ದಿನಗಳಲ್ಲಿ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ಗೆ ಸೇರ್ಪಡೆಯಾಗಲಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ  ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಣಿಪಾಲ ರಜತಾದ್ರಿಯಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಜಿಲ್ಲೆಯು ಹಸಿರು ವಲಯಕ್ಕೆ ಸೇರ್ಪಡೆಗೊಂಡ ಬಳಿಕ ರಾಜ್ಯದ 11 ಹಸಿರು ವಲಯ ಜಿಲ್ಲೆಗಳಂತೆ ಉಡುಪಿಯಲ್ಲೂ ನಿರ್ಬಂಧ ಸಡಿಲಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದರು. ಹೊರರಾಜ್ಯ […]

ಮಂಗಳೂರು: ಕೊರೊನಾ ‌ಮಹಾಮಾರಿಗೆ ಎರಡನೇ ಬಲಿ

ಮಂಗಳೂರು: ಕೊರೊನಾ ‌ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ನೀಡಿದ್ದು,  ಕೊರೋನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅತ್ತೆಯೂ ಬಲಿಯಾಗಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಅತ್ತೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಅಲ್ಲದೇ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಆದರೆ ಸಂಜೆಯ ವೇಳೆಗೆ ಅವರು ಕೊವೀಡ್ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ಇವರ ಸೊಸೆ ಎಪ್ರಿಲ್ 19 ರಂದು ಕೊರೋನಾದಿಂದ ಮೃತಪಟ್ಟಿದ್ದರು.  

75 ವರ್ಷದ ವೃದ್ಧೆಗೆ ಕೊರೊನಾ ಪಾಸಿಟಿವ್: ವೃದ್ಧೆ ದಾಖಲಾಗಿದ್ದ ಫಸ್ಟ್ ನ್ಯೂರೋ ಆಸ್ಪತ್ರೆ ಜಿಲ್ಲಾಡಳಿತದ ವಶ

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 75 ವರ್ಷದ ವೃದ್ಧೆಗೆ ಕೊರೊನಾ ಪಾಸಿಟಿವ್ ಆಗಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ಕೊರೊನಾ ಪತ್ತೆಯಾದ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯನ್ನು ಪೂರ್ತಿ ಜಿಲ್ಲಾಡಳಿತ ವಶಕ್ಕೆ ಪಡೆದಿದ್ದು ಐಸೋಲೇಶನ್ ವಾರ್ಡ್ ಆಗಿ ಕನ್ವರ್ಟ್ ಮಾಡಿದೆ. ಅಲ್ಲದೆ, ಅದರಲ್ಲಿರುವ ರೋಗಿಗಳನ್ನು ಅಲ್ಲಿಯೇ ಉಳಿಸಿಕೊಂಡು ರೋಗಿ ಮತ್ತು ಎಲ್ಲ ವೈದ್ಯಕೀಯ ಸಿಬಂದಿಯನ್ನು ಕ್ವಾರಂಟೈನ್ ಒಳಪಡಿಸಲಾಗಿದೆ. ಇವರೆಲ್ಲರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಇದಲ್ಲದೆ, ಆಸ್ಪತ್ರೆ ಕಟ್ಟಡ ಇರುವ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ […]

ಬಂಟ್ವಾಳದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ: ಮೃತ ಮಹಿಳೆಯ ಅತ್ತೆಗೆ ಕೊರೊನಾ

ಬಂಟ್ವಾಳ: ಬಂಟ್ವಾಳದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಬಂಟ್ವಾಳದ ಮೃತ ಮಹಿಳೆಯ ಅತ್ತೆಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಎಪ್ರಿಲ್ 19 ರಂದು ಕೊರೊನಾದಿಂದ ಬಂಟ್ವಾಳದ ಮಹಿಳೆ ಮೃತಪಟ್ಟಿದ್ದರು. ಇದೀಗ ಅವರ ಅತ್ತೆ 75 ವರ್ಷ ಪ್ರಾಯದ ವೃದ್ಧೆಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಎಪ್ರಿಲ್‌ 18 ರಿಂದ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರನ್ನು ಮಂಗಳೂರಿನ ಕೊವೀಡ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.