ಉಡುಪಿ: ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ಉಡುಪಿ ಪುರಸಭೆ (ಇಂದಿನ ನಗರಸಭೆ)ಯ ಮಾಜಿ ಅಧ್ಯಕ್ಷ, ಹಿರಿಯ ಬಿಜೆಪಿ ಮುಖಂಡ ಸೋಮಶೇಖರ್ ಭಟ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ಮೋದಿಯವರು ಸೋಮಶೇಖರ್ ಅವರೊಂದಿಗೆ ಎರಡು ನಿಮಿಷಗಳ‌ ಮಾತನಾಡಿದ್ದು, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಸೋಮಶೇಖರ್ ಭಟ್ ತಾವು ಜೈಪುರದಲ್ಲಿ ಪುರಸಭೆ ಸದಸ್ಯರ ಅಧಿವೇಶನದಲ್ಲಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದ ಸಂದರ್ಭ ಹಾಗೂ ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲು ಸೇರಿದ್ದ ಘಟನೆಗಳನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. […]

ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ ದೇವಳದ ರಥೋತ್ಸವ ಮುಂದೂಡಿಕೆ

ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏ.25ರಿಂದ 29ರವರೆಗೆ ನಡೆಯಬೇಕಾಗಿದ್ದ ವಾರ್ಷಿಕ ರಥೋತ್ಸವವನ್ನು ಕೊರೋನಾ ಕೋವಿಡ್ -19ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಭಕ್ತರು ಸಹಕರಿಸಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲಮನ್ನಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಈ ಕರೋನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿ […]

ಬೆಳ್ತಂಗಡಿ: ಲೌಕ್ ಡೌನ್ ನಿಂದ ಕಂಗಾಲಾಗಿದ್ದ ವಿವಿಧ ಭಾಗಗಳ ಕಾರ್ಮಿಕರು ಮರಳಿ ಊರಿಗೆ

ಮಂಗಳೂರು: ದಕ್ಷಿಣ ‌ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಇದ್ದ 179 ಮಂದಿ ವಲಸೆ ಕಾರ್ಮಿಕರನ್ನು ಬಸ್ ಮೂಲಕ ಅವರ ಊರಿನತ್ತ ಕಳುಹಿಸಿಕೊಡಲಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದ ವಲಸೆ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ವಿವಿಧೆಡೆ, ಕಟ್ಟಡ ನಿರ್ಮಾಣ, ಮನೆ ಕೆಲಸ ಹೀಗೆ ಬೇರೆ ಬೇರೆ ರೀತಿಯಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆದರೆ ಲಾಕ್ಡೌನ್‌ನಿಂದಾಗಿ ಯಾರಿಗೂ ಮನೆಗೆ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇವರೆಲ್ಲ ಬೆಳ್ತಂಗಡಿಯ ಆಶ್ರಯ ಕೇಂದ್ರಗಳಲ್ಲಿದ್ದ ಆಶ್ರಯ ಪಡೆದುಕೊಂಡಿದ್ದರು. ಆದ್ರೆ ತಮ್ಮನ್ನು ಊರಿಗೆ […]

ಮೀನುಗಾರರಿಗೆ ರೂ.60 ಕೋಟಿ ಸಾಲಮನ್ನಾ ಮೊತ್ತ ಬಿಡುಗಡೆಗೊಳಿಸಿದ ಸರಕಾರದ ನಡೆ ಸ್ವಾಗತಾರ್ಹ:ಯಶ್ ಪಾಲ್ ಸುವರ್ಣ

ಉಡುಪಿ:  ಕೊರೊನಾ ಮಹಾಮಾರಿಯ ಈ ಸಂದಿಗ್ಧ ಸಮಯದಲ್ಲಿ ಈಗಾಗಲೇ ರಾಜ್ಯ ಸರಕಾರ ಘೋಷಿಸಿದ್ದ 23 ಸಾವಿರ ಮಹಿಳಾ ಮೀನುಗಾರರ 60 ಕೋಟಿ ರೂಪಾಯಿ ಸಾಲಮನ್ನಾದ ಮೊತ್ತವನ್ನು ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ. ಮಹಿಳಾ ಮೀನುಗಾರರ ಸಂಷ್ಟಕ್ಕೆ ಶೀಘ್ರವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ  […]