ಮೇ 17ರ ವರೆಗೆ ಲಾಕ್‍ಡೌನ್ ಅವಧಿ: ಕೇಂದ್ರ ಸರ್ಕಾರ ಘೋಷಣೆ
ನವದೆಹಲಿ: ಲಾಕ್‌ಡೌನ್ ಅವಧಿಯನ್ನು ಮೇ.17ರವರೆಗೆ ವಿಸ್ತರಣೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶವ್ಯಾಪಿ ಲಾಕ್‌ಡೌನ್ ಮೇ.3ಕ್ಕೆ ಮುಗಿಯಬೇಕಿತ್ತು. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ. ಮೇ.3ರ ನಂತರ ಎರಡು ವಾರ ಲಾಕ್‍ಡೌನ್ ವಿಸ್ತರಿಸಿರುವುದಾಗಿ ಪ್ರಕಟಣೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯವು ಈ ಅವಧಿಯಲ್ಲಿ ಕೆಲವು ಕಾರ್ಯಗಳಿಗೆ ನಿಯಂತ್ರಣ ಹೇರುವ ಬಗ್ಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಾಗಿ ವಿಂಗಡಿಸಿದ ಪ್ರದೇಶಗಳಲ್ಲಿ ಈ ರೀತಿ ನಿರ್ಬಂಧಗಳಿರಲಿವೆ. ಹೊಸ ಮಾರ್ಗ ಸೂಚಿಯ […]
ಮಂಗಳೂರಲ್ಲಿ ಮತ್ತಿಬ್ಬರಿಗೆ ಕೊರೊನಾ ದೃಢ: ದ.ಕ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಬಂಟ್ವಾಳದ 69 ವರ್ಷದ ವೃದ್ಧ ಮತ್ತು ಬೋಳೂರು ಗ್ರಾಮದ 62 ವರ್ಷದ ವೃದ್ದನಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಮತ್ತೆ ಇಬ್ಬರಿಗೆ ಪಾಸಿಟಿವ್ ಬಂದಿದ್ದು, ಇದೀಗ ಫಸ್ಟ್ ನ್ಯೂರೋ ಆಸ್ಪತ್ರೆ ಕೊರೋನಾ ಹಾಟ್ ಸ್ಪಾಟ್ ಆಗಿದೆ. ಎ.19ರಂದು ಕೊರೊನಕ್ಕೆ ಬಲಿಯಾದ ಮಹಿಳೆಯ ಸಂಬಂಧಿ ಹಾಗೂ ನೆರೆಮನೆಯವರಾಗಿರುವ ಬಂಟ್ವಾಳದ 69 ವರ್ಷದ ವೃದ್ದ, ಮತ್ತೊಬ್ಬರು ಬೋಳೂರು ನಿವಾಸಿ ಗುರುವಾರ ಪಾಸಿಟಿವ್ ಆದ […]
ಹೊರ ರಾಜ್ಯಗಳಿಗೆ ತೆರಳಲು ನೊಂದಾಯಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ
ಉಡುಪಿ, ಮೇ 1: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಸೆಕ್ಷನ್ 144(3) ರಂತೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ, ಜಿಲ್ಲೆಯಲ್ಲಿ ಇರುವ ಹೊರರಾಜ್ಯಗಳ ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳು ಲಾಕ್‌ಡೌನ್ ಕಾರಣದಿಂದಾಗಿ ಅವರ ಸ್ವಂತ ರಾಜ್ಯಗಳಿಗೆ ತೆರಳಲು ಸಾಧ್ಯವಾಗದೇ ಇಲ್ಲಿಯೇ ಉಳಿದಿದ್ದು, ಅಂತಹವರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ […]
ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ನೆರವಿನಿಂದ ರೈತರಿಗೆ ಮಾರುಕಟ್ಟೆ ಸೃಷ್ಠಿ
ಉಡುಪಿ ಮೇ 1: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದ ದೇಶ ಲಾಕ್ ಡಾನ್ ಆದ್ದರಿಂದ ರೈತರು ಬೆಳೆದ ಬೆಳೆಯನ್ನು ಮಾರಕಟ್ಟೆ ಮಾಡಲಾಗದೆ ಆತಂಕಗೊಳಗಾಗಿರುವ ರೈತರಿಗೆ ಧೈರ್ಯ ತುಂಬುವ ಕೆಲಸದ ಜೊತೆಗೆ ಬೇರೆ ಬೇರೆ ಮೂಲಗಳಿಂದ ಮಾರುಕಟ್ಟೆಯ ಸಂಪರ್ಕವನ್ನು ಕಲ್ಪಿಸಿಕೊಡುವ ಕೆಲಸವನ್ನು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ವತಿಯಿಂದ ಮಾಡಲಾಗುತ್ತಿದೆ. ಈ ರೀತಿಯಾಗಿ ಸಾಮಾಜಿಕ ಜಾಲತಾಣದ ಮುಖಾಂತರ ರೈತ ತನ್ನ ಜಮೀನಿನಲ್ಲಿ ನೇರ ಬಳಕೆದಾರರಿಗೆ ಮಾರಟ ಮಾಡುವ ಹಾಗೆ ಕಲ್ಪಿಸಿ ಕೊಟ್ಟದ್ದಕ್ಕೆ ಉದಾಹರಣೆ ಸುರೇಶ್ ನಾಯಕ್ […]
ಲಾಕ್ ಡೌನ್ ಹಿನ್ನಲೆ: ಸಂತೆಕಟ್ಟೆಯ ವಾರದ ಸಂತೆ ರದ್ದು
ಉಡುಪಿ, ಮೇ 1: ಉಡುಪಿ ನಗರಸಭಾ ವ್ಯಾಪ್ತಿಯ ಪುತ್ತೂರು (ಕಲ್ಯಾಣಪುರ) ಸಂತೆಕಟ್ಟೆಯಲ್ಲಿ ಪ್ರತಿ ಭಾನುವಾರ ನಡೆಯುವ ವಾರದ ಸಂತೆಯನ್ನು, ಕೋವಿಡ್-19 ಕರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮುಗಿಯುವರೆಗೂ ರದ್ದುಗೊಳಿಸಲಾಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.