ಮಂಗಳೂರಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ: ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಮತ್ತೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮಂಗಳೂರಿನ ಬೋಳೂರಿನ 51 ವರ್ಷದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ಬೋಳೂರುನಲ್ಲಿ ಈ ಮೊದಲು ಇಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಬೋಳೂರು ಪ್ರದೇಶದಲ್ಲಿ ಮೂವರಿಗೆ ಕೊರೊನಾ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೋಪುರಕ್ಕೆ ಡಿಕ್ಕಿ ಹೊಡೆದ ಕಾರು: ಪಾನಮತ್ತರಾಗಿದ್ದ ಇಬ್ಬರು ಗಂಭೀರ

ಉಡುಪಿ: ಇಲ್ಲಿನ ಚಿತ್ತರಂಜನ್ ಸರ್ಕಲ್ ಬಳಿ ಇರುವ ವೃತ್ತ ಗೋಪುರಕ್ಕೆ ಸೋಮವಾರ ತಡರಾತ್ರಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರು ಪಾನಮತ್ತರಾಗಿದ್ದರು. ಚಾಲಕ ಕೂಡ ಪಾನಮತ್ತನಾಗಿದ್ದು, ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಒಳಕಾಡು ನಿವಾಸಿಗಳಾದ ವೇಂಕಟೇಶ ಪ್ರಭು (47), ಸಂತೋಷ್ ಶೇಟ್ (42 ) ಎಂದು ಗುರುತಿಸಲಾಗಿದೆ. ಈ ಇಬ್ಬರನ್ನು ಸಮಾಜಸೇವಕ ನಿತ್ಯಾನಂದ […]