ಕಾರ್ಮಿಕರಿಗೆ ಊರಿಗೆ ತೆರಳಲು ರೈಲು ವ್ಯವಸ್ಥೆಯ ವದಂತಿ: ಕಾರ್ಮಿಕರಿಂದ ಪ್ರತಿಭಟನೆ
ಮಂಗಳೂರು: ಮಂಗಳೂರಿನಿಂದ ಉತ್ತರ ಭಾರತ ರಾಜ್ಯಗಳಿಗೆ ರೈಲಿನ ವ್ಯವಸ್ಥೆ ಮಾಡಲಾಗಿದೆ ಅಂತ ವದಂತಿ ಹಬ್ಬಿ ಸಾವಿರಾರು ವಲಸೆ ಕಾರ್ಮಿಕರು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಬಳಿ ಗುಂಪು ಸೇರಿ, ಪ್ರತಿಭಟನೆ ನಡೆಸಿ ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು. ಉತ್ತರ ಭಾರತದ ವಲಸೆ ಕಾರ್ಮಿಕರು ರೈಲು ಮೂಲಕ ತಮ್ಮನ್ನು ಊರಿಗೆ ಕಳುಹಿಸುತ್ತಾರೆ ಎನ್ನುವ ವದಂತಿ ನಂಬಿ ಬೆಳಗ್ಗೆನಿಂದಲೇ ರೈಲು ನಿಲ್ದಾಣದಲ್ಲಿ ಸೇರಿದ್ದರು. ಆದ್ರೆ ರೈಲೇ ಸಿಬ್ಬಂದಿ ಯಾವುದೇ ರೈಲ್ವೆ ವ್ಯವಸ್ಥೆ ಮಾಡಿಲ್ಲ ಎಂದು ಹೇಳಿ ಸೇರಿದ ವಲಸೆ […]
ಮದ್ಯ ಮಾರಾಟ ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು: ಸಚಿವರ ಎಚ್ಚರಿಕೆ
ಮಂಗಳೂರು: ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಅಂತಹ ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು. ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ ಮದ್ಯದಂಗಡಿಗಳ […]
ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಿದೇಶದಲ್ಲಿರುವವರನ್ನು ವಾಪಾಸ್ ಕರೆಯಿಸಿಕೊಳ್ಳಿ: ಗೋಪಾಲ ಪೂಜಾರಿ
ಕುಂದಾಪುರ: ಕೊರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯರ್ತೆಯರ ಹಗಲು-ರಾತ್ರಿ ನಿರಂತರ ಶ್ರಮದಿಂದಾಗಿ ಇಂದು ಉಡುಪಿ ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ ಜಿಲ್ಲಾಡಳಿತ ಈ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶುಕ್ರವಾರ ಹೆಮ್ಮಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕುಟುಂಬ ನಿರ್ವಹಣೆಗಾಗಿ ಊರು ಬಿಟ್ಟು ಮುಂಬೈ, ಬೆಂಗಳೂರು, ಹೈದರಾಬಾದ್, ದುಬೈ ಮುಂತಾದೆಡೆಗಳಲ್ಲಿ ನಲೆಸಿದ ಯುವಕರು ಇಂದು ಅತಂತ್ರರಾಗಿದ್ದಾರೆ. ಅವರನ್ನು ನಾವು […]
ವಿದೇಶ, ಹೊರ ರಾಜ್ಯದಿಂದ ಬರುವವರಿಗೆ ಸುವ್ಯವಸ್ಥಿತವಾದ ರೀತಿಯಲ್ಲಿ ಕ್ವಾರಂಟೈನ್ ಮಾಡುತ್ತೇವೆ:ಹಾಲಾಡಿ ಶ್ರೀನಿವಾಸ ಶೆಟ್ಟಿ
ಕುಂದಾಪುರ: ವಿದೇಶ, ರಾಜ್ಯ, ಜಿಲ್ಲೆಗಳಲ್ಲಿರುವ ನಮ್ಮವರು ಇಲ್ಲಿಗೆ ಬಂದಾಗ ಯೋಗ್ಯ ರೀತಿಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ನಮ್ಮನ್ನೇ ನಂಬಿಕೊಂಡು ಅವರೆಲ್ಲಾ ಬರುತ್ತಿದ್ದಾರೆ. ಆ ನಿಟ್ಟಿನಲ್ಲಿ ಸುವ್ಯವಸ್ಥಿತವಾದ ರೀತಿಯಲ್ಲಿ ಕ್ವಾರಂಟೈನ್ ಮಾಡುವಲ್ಲಿ ನಮ್ಮಿಂದ ಏನು ಸಹಕಾರ ಬೇಕೊ ಅದನ್ನು ಖಂಡಿತವಾಗಿ ನೀಡುತ್ತೇವೆ. ಇದೊಂದು ರಾಷ್ಟ್ರೀಯ ವಿಪತ್ತಾಗಿದ್ದು, ಅಧಿಕಾರಿಗಳು ಯಾವುದೇ ಸಂದರ್ಭದಲ್ಲಿ ಕರೆದರೂ ನಾವು ಸ್ಪಂದಿಸಲು ಸಿದ್ಧರಿದ್ದೇವೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಸಂಜೆ ಕುಂದಾಪುರ […]
ಮೂಕಾಂಬಿಕಾ ಸೇವಾ ಸಹಕಾರಿ ಸಂಘದ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಕೊಲ್ಲೂರು ಗ್ರಾ.ಪಂ ವ್ಯಾಪ್ತಿಯ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಶುಕ್ರವಾರ ಸಂಘದ ಕಚೇರಿಯಲ್ಲಿ ಜರುಗಿತು. ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಶಾಸಕ ಸುಕುಮಾರ ಶೆಟ್ಟಿ, ಆಶಾ ಕಾರ್ಯಕರ್ತೆಯರು, ವೈದ್ಯರು, ಪೊಲೀಸ್ ಹಾಗೂ ಅಧಿಕಾರಿಗಳ ಪ್ರಾಮಾಣಿಕ ಸೇವೆಯಿಂದಾಗಿ ಇಂದು ಉಡುಪಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗಿದೆ. ಲಾಕ್ಡೌನ್ನಿಂದಾಗಿ ಜನರಿಗೆ ಕೆಲಸವಿಲ್ಲದೇ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕೊಲ್ಲೂರಿನ ಆಯ್ದ […]