ವಿದೇಶದಲ್ಲಿ ಸಿಲುಕಿಕೊಂಡ 177 ಕರಾವಳಿಗರು ಇಂದು ಮಂಗಳೂರಿಗೆ
ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4.10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9.10ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬೋರ್ಡಿಂಗ್ ಆದ ಬಳಿಕವಷ್ಟೇ […]
ಮಂಗಳೂರು: ಕೊರೊನಾ ಕುರಿತು ವೈದ್ಯಕೀಯ ತಂಡದ ಸಭೆ; ಮೂಲ ಪತ್ತೆಗೆ ಆದ್ಯತೆ: ಕೋಟ
ಮಂಗಳೂರು: ಜಿಲ್ಲೆಯಲ್ಲಿ ಕಂಡು ಬಂದ ಕೋರೋನಾ ಪ್ರಕರಣಗಳ ಮೂಲ ಪತ್ತೆ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ತಜ್ಞ ವೈದ್ಯಕೀಯ ತಂಡದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಜನರಲ್ಲಿ ಸಂಶಯ ನಿವಾರಣೆ ಆಗತ್ಯ ಇರುವುದರಿಂದ ಸೋಂಕು ಮೂಲ ಪತ್ತೆ ಅನಿವಾರ್ಯವಾಗಿದ್ದು, ಇದರ ಬಗ್ಗೆ ಮತ್ತಷ್ಟು ವಿವರಣೆ ಪಡೆಯಬೇಕೆಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳು ಮಾತನಾಡಿ, ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1000ಕ್ಕೂ […]
ಮುಂಬೈನಿಂದ ಕುಂದಾಪುರದತ್ತ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಬೆಂಕಿಗಾಹುತಿ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರೂ ಪಾರು
ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್ ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ವೇಳೆಯಲ್ಲಿ ಟೆಂಪೋ ಟ್ರಾವೆಲ್ಲರ್ ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ. ಸೇವಾಸಿಂಧು ಆಪ್ ಮೂಲಕ ಕುಂದಾಪುರದ ವಂಡ್ಸೆ ಸಮೀಪದ ತಾರಿಬೇರು ಕುಟುಂಬದ ಹನ್ನೊಂದು ಮಂದಿ ಸೋಮವಾರ ಟೆಂಪೋ ಟ್ರಾವೆಲ್ಲರ್ ನಲ್ಲಿ ಮುಂಬೈನ ಭಾಂಡುಪ್ ನಿಂದ ಊರಿಗೆ ಪ್ರಯಾಣ ಬೆಳೆಸಿದ್ದರು. ಮೂರುವರೆ ಗಂಟೆ ಪ್ರಯಾಣ ಮುಗಿಸಿ ಲೋನಾವಾಲಾ ಸಮೀಪಿಸುತ್ತಿದ್ದಂತೆಯೇ ಟಿಟಿ ಸ್ಟೇರಿಂಗ್ ಸಮೀಪದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲೇ ಬೆಂಕಿ ಇಡೀ ವಾಹನಕ್ಕೆ ವ್ಯಾಪಿಸಿದ್ದು, ಚಾಲಕನ […]
ದ.ಕ. ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್; ಪಸ್ಟ್ ನ್ಯೂರೊ ಆಸ್ಪತ್ರೆಯಿಂದ ಕಾರ್ಕಳದ ಇಬ್ಬರಿಗೆ ಹರಡಿತು ಸೋಂಕು
ಮಂಗಳೂರು: ಫಸ್ಟ್ ನ್ಯೂರೊ ಆಸ್ಪತ್ರೆಯಿಂದ ಮತ್ತೆ ಇಬ್ಬರಿಗೆ ಸೋಂಕು ಹರಡಿರುವುದು ಇಂದು ಪತ್ತೆಯಾಗಿದೆ. ಉಡುಪಿ ಮೂಲದ ಇಬ್ಬರಿಗೆ ಸೋಂಕು ದೃಢ ಪಟ್ಟಿದೆ. 50 ವರ್ಷದ ಮಹಿಳೆ ಮತ್ತು 26 ವರ್ಷದ ಯುವಕನಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಈ ಇಬ್ಬರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ತನಿಖೆ ವೇಳೆ ಚಿಕಿತ್ಸೆ ಪಡೆದಿದ್ದವರ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕ್ವಾರಂಟೈನ್ ನಲ್ಲಿ ಇಟ್ಟು ಪರೀಕ್ಷೆ ಮಾಡಲಾಗಿತ್ತು. P-507 ರ ಸಂಪರ್ಕದಿಂದ ಇಬ್ಬರಿಗೂ ಸೋಂಕು ಎನ್ನಲಾಗಿದೆ.ಸೋಂಕಿತರಿಬ್ಬರು ಕಾರ್ಕಳ ಮೂಲದವರು ಎನ್ನುವುದು […]
ಯಕ್ಷರಂಗದಲ್ಲಿ ಅರಳುತ್ತಾರೆ, ವಿದ್ಯಾರ್ಥಿಗಳನ್ನೂ ಅರಳಿಸ್ತಾರೆ: ಬನ್ನಂಜೆ ಸಂಜೀವ ಸುವರ್ಣರ ಶಿಷ್ಯ ಶೈಲೇಶ್ ತೀರ್ಥಹಳ್ಳಿ ಕತೆಯಿದು!
ಇದು ಉಡುಪಿ XPRESS “ಬಣ್ಣದ ಕನಸುಗಾರರು” ಸರಣಿಯ 8ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ಈ ಸಂಚಿಕೆಯಲ್ಲಿ ಯಕ್ಷರಂಗದಲ್ಲಿ ತಾವೂ ಅರಳುತ್ತ, ವಿದ್ಯಾರ್ಥಿಗಳನ್ನೂ ಅರಳಿಸುವ ಬನ್ನಂಜೆ ಸಂಜೀವ ಸುವರ್ಣರ ಶಿಷ್ಯ ಶೈಲೇಶ್ ತೀರ್ಥಹಳ್ಳಿ ಅವರ ಕತೆ. ಯಕ್ಷಗಾನ ನೋಡುವ, ಆರಾಧಿಸುವ, ಆನಂದಿಸುವ, ಪ್ರೀತಿಸುವ ಕಲಾಭಿಮಾನಿಗಳಿಗೆ ನಮ್ಮಲ್ಲೇನೂ […]