9, 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ: ಸಿಬಿಎಸ್ಇ

ಉಡುಪಿ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್ ಇ ಕಂಟ್ರೋಲರ್ ಸನ್ಯಮ್ ಭಾರದ್ವಾಜ್ ತಿಳಿಸಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಪರೀಕ್ಷೆ ನಡೆಸಬೇಕು ಎಂದು ಹೇಳಿದ್ದಾರೆ.

ದ.ಕ. ಜಿಲ್ಲೆಯ ವಿವಿಧೆಡೆ ಭಾರೀ ಮಳೆ: ಅಲ್ಲಲ್ಲಿ ಹಾನಿ

ಮಂಗಳೂರು: ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಗುಡುಗು ಸಹಿತ ಸುರಿದ ಭಾರೀ ಮಳೆಗೆ ವಿವಿಧೆಡೆ ಹಾನಿ ಉಂಟಾಗಿದೆ. ಸಂಜೆ ವೇಳೆ ಬೀಸಿದ ಭಾರಿ ಗಾಳಿ ಮಳೆಗೆ ಸುಬ್ರಹ್ಮಣ್ಯ ಸುತ್ತಮುತ್ತಲ ಕೆಲವು ಪ್ರದೇಶಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿ ಉಂಟಾಯಿತು. ಅಲ್ಲದೆ ಕೆಲವು ಮನೆಗಳಿಗೆ ಅಳವಡಿಸಿದ್ದ ಸಿಮೆಂಟ್ ಶೀಟ್ಗಳು ಗಾಳಿಗೆ ಹಾರಿ ಹೋಗಿದೆ. ಸುಬ್ರಹ್ಮಣ್ಯದ ಬಿಲದ್ವಾರದ ವಾಲಗದ ಕೇರಿ ನಿವಾಸಿ ಆನಂದ ಎಂಬವರ […]

ಕೇರಳ ರಾಜ್ಯದಲ್ಲಿ ಸಿಲುಕಿದ್ದ 41 ಯಾಂತ್ರೀಕೃತ ಬೋಟುಗಳು ಜಿಲ್ಲೆಗೆ ವಾಪಸ್ 

ಉಡುಪಿ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಚರವತ್ತೂರು, ಚೊಂಬಲ್ ಮತ್ತು ಕಣ್ಣೂರುನಲ್ಲಿ ಸಿಲುಕಿದ್ದ ಉಡುಪಿ ಜಿಲ್ಲೆಯ 41 ಬೋಟುಗಳು ರಾಜ್ಯ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಹಕಾರದಿಂದ ಇಂದು ಬೋಟ್ ಮಾಲೀಕ ಮೀನುಗಾರರ ಕೈ ಸೇರಲಿವೆ. ಸಚಿವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರೊಂದಿಗೆ ಚರ್ಚಿಸಿ ಕೇರಳ ಸರ್ಕಾರದ ಜತೆಗೆ ಸಂಪರ್ಕ ಸಾಧಿಸಿದ್ದರು. ಅದು ಫಲಪ್ರದವಾಗಿದ್ದು, ಇದೀಗ ಎರಡು ರಾಜ್ಯಗಳ ಒಪ್ಪಂದದಂತೆ ಇಂದು ಮಧ್ಯಾಹ್ನ 1 […]

ಮೇ 18ರಿಂದ ಉಡುಪಿ ಜಿಲ್ಲೆಯಾದ್ಯಂತ ಸೆಲೂನ್ ಪುನಾರಂಭ: ಜಿಲ್ಲಾಧಿಕಾರಿಯಿಂದ ಷರತ್ತುಬದ್ಧ ಅನುಮತಿ

ಉಡುಪಿ: ಮೇ 18ರಿಂದ ಜಿಲ್ಲೆಯಾದ್ಯಂತ ಎಲ್ಲಾ ಸೆಲೂನ್ (ಕ್ಷೌರಿಕ ಅಂಗಡಿ)ಗಳನ್ನು ತೆರೆಯಲು ಜಿಲ್ಲಾಧಿಕಾರಿ ಷರತ್ತು ಬದ್ಧ ಅನುಮತಿ ನೀಡಿದ್ದಾರೆ ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 53 ದಿನಗಳಿಂದ ಸೆಲೂನ್ ಗಳು ಸ್ಥಗಿತಗೊಂಡಿದ್ದು, ಇದರಿಂದ ಕ್ಷೌರಿಕರು ಯಾವುದೇ ಸಂಪಾದನೆ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳ ನಿಯೋಗವು ಮೇ 13 […]

ದ.ಕ.ಜಿಲ್ಲೆ: ಕಿಲ್ಲರ್ ಕೊರೊನಾಗೆ 5ನೇ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ 5ನೇ ಬಲಿಯಾಗಿದೆ. ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ವೃದ್ಧೆ ಗುರುವಾರ ಬಲಿಯಾಗಿದ್ದಾರೆ‌. ಅವರು ಮಂಗಳೂರು ಕೊವೀಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಅವರು ಬಳಲುತ್ತಿದ್ದರು.