ಉಡುಪಿಯಲ್ಲಿ ಕೊರೊನಾಗೆ ಮೊದಲ ಬಲಿ: ಮುಂಬೈನಿಂದ ಆಗಮಿಸಿದ್ದ 54 ವರ್ಷದ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ಸಾವು
ಉಡುಪಿ: ಕ್ವಾರಂಟೈನ್ ನಲ್ಲಿ ಇದ್ದ 54 ವರ್ಷದ ವ್ಯಕ್ತಿ ಮೇ 14ರಂದು ಮೃತಪಟ್ಟಿದ್ದು, ಇಂದು ಬಂದ ಕೊರೊನಾ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಮೃತ ವ್ಯಕ್ತಿ ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದು, ಇವರನ್ನು ಕುಂದಾಪುರದ ಕಲ್ಯಾಣ ಮಂಟಪವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೇ 13ರಂದು ವ್ಯಕ್ತಿಗೆ ಹೃದಯಾಘಾತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲಿಗೆ ಕುಂದಾಪುರದ ಆಸ್ಪತ್ರೆಗೆ ಹಾಗೂ ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು […]
ಶಾಲೆ ಪ್ರಾರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ಶಾಲಾ ಮಕ್ಕಳ ಪೋಷಕರು ಯಾವುದೇ ಸುದ್ದಿಗಳನ್ನು ತಿಳಿದು ಆತಂಕ ಪಡುವ ಅಗತ್ಯವಿಲ್ಲ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ ಎಂದು ಅವರು ತಿಳಿಸಿದ್ದಾರೆ.
ಮೇ 14ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ
ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14 ರಂದು ಸಂಜೆ ಮೃತಪಟ್ಟಿದ್ದ ಮುಂಬೈನಿಂದ ಬಂದಿದ್ದ ಕುಂದಾಪುರ ಮೂಲದ 54 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಮುಂಬೈನಿಂದ ಕುಂದಾಪುರ ತಾಲ್ಲೂಕಿಗೆ ಬಂದಿರುವ ಈ ವ್ಯಕ್ತಿಗೆ ಮೇ 13ರಂದು ಹೃದಯಾಘಾತ ಸಂಭವಿಸಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೇ 14ರಂದು ಮೃತಪಟ್ಟಿದ್ದರು. ಆ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಐಸೋಲೇಷನ್ […]
ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ಸಾವು: ಕೊರೊನಾ ಶಂಕೆ
ಉಡುಪಿ: ಕ್ವಾರಂಟೈನ್ ನಲ್ಲಿ ಇದ್ದ ಕುಂದಾಪುರ ತಾಲ್ಲೂಕಿನ ವ್ಯಕ್ತಿಯೊಬ್ಬರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಕೊರೊನಾ ಸೋಂಕಿನಿಂದಲೇ ಮೃತಪಟ್ಟಿದ್ದಾರೆಯೇ ಎನ್ನುವುದು ಖಚಿತಗೊಂಡಿಲ್ಲ. ಕೊರೊನಾ ಶಂಕೆಯ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲಿನ ಮಾದರಿಯನ್ನು ಪರೀಕ್ಷೆಗಾಗಿ ಮಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ನಿರೀಕ್ಷೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಈ ವ್ಯಕ್ತಿ ಮೇ 5ರ ಬಳಿಕ ಮಹಾರಾಷ್ಟ್ರದಿಂದ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ್ದರು. ಕ್ವಾರಂಟೈನ್ ನಲ್ಲಿ […]