ಉಡುಪಿಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ದಾಖಲು: ಮುಂಬೈನಿಂದ ಬಂದ ಏಳು ತಿಂಗಳ ಗರ್ಭಿಣಿಯಲ್ಲಿ ಸೋಂಕು ದೃಢ
ಉಡುಪಿ: ಮುಂಬೈನಿಂದ ಮೇ 12ರಂದು ಉಡುಪಿ ಜಿಲ್ಲೆಗೆ ಆಗಮಿಸಿದ್ದ 28 ವರ್ಷದ ಏಳು ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ಖಚಿತಗೊಂಡಿದ್ದು, ಈ ಹಿನ್ನೆಯಲ್ಲಿ ಆಕೆಯನ್ನು ಕ್ವಾರಂಟೈನ್ ನಿಂದ ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಗರ್ಭಿಣಿಯೊಂದಿಗೆ ಪ್ರಯಾಣ ಬೆಳೆಸಿದ ಗಂಡನನ್ನು ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದೆ. ಗರ್ಭಿಣಿಯೊಂದಿಗೆ ಮುಂಬೈನಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದ 25 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ […]
ಮೇ 31ರ ವರೆಗೆ ಕರ್ನಾಟಕ ಪ್ರವೇಶಕ್ಕೆ ಅನ್ಯ ರಾಜ್ಯದ ಜನತೆಗೆ ಅವಕಾಶವಿಲ್ಲ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಜನರಿಗೆ ಮೇ 31 ರವರೆಗೆ ಅವಕಾಶ ನಿರ್ಬಂಧಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಜಲ್ ಜೀವನ್ ಮಿಷನ್: ಜಿಲ್ಲೆಯಿಂದ 415 ಕೋಟಿ ರೂ. ಪ್ರಸ್ತಾವನೆ
ಉಡುಪಿ ಮೇ 18: ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ , ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಒಗದಿಸಲು ರೂ.415 ಕೋಟಿ ರೂ ಗಳ ಕ್ರಿಯ ಯೋಜನೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲು , ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಲ ಜೀವನ್ ಮಿಷನ್ ಯೋಜನೆಯಡಿ 2024 ರೊಳಗೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರತಿ ವ್ಯಕ್ತಿಗೆ ವರ್ಷದ 365 ದಿನವೂ, ದಿನಕ್ಕೆ […]
ಜುಲೈ 1ರಿಂದ 15ರ ವರೆಗೆ ನಡೆಯುತ್ತೆ ಸಿಬಿಎಸ್ಇ ಪರೀಕ್ಷೆ: ಇಲ್ಲಿದೆ ವೇಳಾಪಟ್ಟಿ
ನವದೆಹಲಿ: ಸಿಬಿಎಸ್ಇಯು 10 ಮತ್ತು 12ನೇ ತರಗತಿಯ ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಜುಲೈ 1ರಿಂದ 15ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮಾರ್ಚ್ 25ರಿಂದ ದೇಶದಾದ್ಯಂತ ಲಾಕ್ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲ್ಪಟ್ಟಿತ್ತು. 10ನೇ ತರಗತಿ ಪರೀಕ್ಷೆಗೆ ಜುಲೈ 1ರಿಂದ ಮೊದಲುಗೊಂಡು ನಾಲ್ಕು ದಿನಾಂಕ ನಿಗದಿಪಡಿಸಲಾಗಿದೆ. ಮೊದಲ ಪರೀಕ್ಷೆ ಸಮಾಜ ವಿಜ್ಞಾನ ವಿಷಯದ್ದಾಗಿರಲಿದೆ. ಮರುದಿನ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ತಿಳಿಸಿದ್ದಾರೆ. […]
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂ. 25ರಿಂದ ಪರೀಕ್ಷೆ ಆರಂಭ
ಉಡುಪಿ: ಕರ್ನಾಟಕ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಜೂ. 25 ರಿನಂದ ಜು. 4 ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 2879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ 18 ರಂದು ಬಾಕಿ ಉಳಿದ ‘ದ್ವಿತೀಯ ಪಿಯುಸಿ’ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.