ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್: ವಾಹನ ಸಂಚಾರ, ವ್ಯಾಪಾರ ವಹಿವಾಟು, ಮದ್ಯದಂಗಡಿ ಬಂದ್
ಬೆಂಗಳೂರು:ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯ ಪ್ರಕಾರ ರಾಜ್ಯಾದ್ಯಂತ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರಲಿದ್ದು, ಬಸ್, ವಾಹನ ಸಂಚಾರ ಹಾಗೂ ವ್ಯಾಪಾರ ವಹಿವಾಟಿಗೆ ಅವಕಾಶ ಇರುವುದಿಲ್ಲ. ಮದ್ಯದಂಗಡಿ ಕೂಡ ಬಂದ್ ಆಗಿರುತ್ತದೆ. ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಬಸ್ ಗಳು ಓಡಾಟ ನಡೆಸಬಹುದು. ಆದರೆ ಒಂದು ಬಸ್ ನಲ್ಲಿ 30 ಜನರ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ದರ ಏರಿಕೆಗೆ […]
ನಾಳೆಯಿಂದ ರಾಜ್ಯಾದ್ಯಂತ ಬಸ್ ಸಂಚಾರಕ್ಕೆ ಅವಕಾಶ: ಸಿಎಂ ಯಡಿಯೂರಪ್ಪ
ನಾಳೆಯಿಂದ ರಾಜ್ಯಾದ್ಯಂತ ಬಸ್ ಸಂಚಾರಕ್ಕೆ ಅವಕಾಶ: ಸಿಎಂ ಯಡಿಯೂರಪ್ಪ ಬೆಂಗಳೂರು: ರಾಜ್ಯದ ರೆಡ್ ಝೋನ್ ಹಾಗೂ ಕಂಟೇನ್ ಮೆಂಟ್ ಝೋನ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ನಾಳೆ (ಮೇ 19) ಬೆಳಿಗ್ಗೆ 9 ಗಂಟೆಯಿಂದ ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಂಟೇನ್ ಮೆಂಟ್ ಜೋನ್ ಹಾಗೂ ಕರ್ನಾಟಕಕ್ಕೆ ಅಂತಾರಾಜ್ಯಗಳ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಎಂದರು. ಖಾಸಗಿ […]
ಕಟಪಾಡಿ: ಸಿಡಿಲು ಬಡಿದು ಯುವಕ ಸಾವು
ಕಟಪಾಡಿ: ಸಿಡಿಲು ಬಡಿದು ಯುವಕ ಸಾವು ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾಪು ತಾಲ್ಲೂಕಿನ ಕಟಪಾಡಿ ಏಣಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಟಪಾಡಿ ಏಣಗುಡ್ಡೆಯ ನಿವಾಸಿ ಭರತ್ (22) ಮೃತ ದುರ್ದೈವಿ. ಮನೆಯಲ್ಲಿ ಕುಳಿತಿದ್ದ ಭರತ್ ಗೆ ಸಿಡಿಲು ಬಡಿದಿದ್ದು, ಕೂಡಲೇ ಆತ ಕುಸಿದು ಬಿದ್ದಿದ್ದಾನೆ. ತಕ್ಷಣ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭರತ್ ಕೊನೆಯುಸಿರೆಳೆದಿದ್ದಾರೆ. ಕಾಪು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.