ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಕಿಟ್ ಹಾಗೂ ಚೆಕ್ ವಿತರಣೆ
ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ,ಇದರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಮೂರ್ತಿಯವರ ಸಹಕಾರದಿಂದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಅರ್ಚಕರು, ಪುರೋಹಿತರು, ಹಾಗೂ ವಿಪ್ರ ಬಾಂಧವರ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನಿತ್ಯಾವಶ್ಯಕ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು. ಹಾಗೂ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ, ತಾಲೂಕಿನಲ್ಲಿ 31 ಬ್ರಾಹ್ಮಣ ವಲಯಗಳಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪ್ರತಿ ವಲಯದ 2 ಬ್ರಾಹ್ಮಣ ಕುಟುಂಬಗಳಿಗೆ ತಲಾ […]
ಜಿಲ್ಲೆಯಲ್ಲಿ ಸಮುದಾಯಕ್ಕೆ ಕೋವಿಡ್ ಹರಡದಂತೆ ಎಚ್ಚರ ವಹಿಸಲಾಗಿದೆ: ರಘುಪತಿ ಭಟ್
ಉಡುಪಿ ಮೇ 19: ಉಡುಪಿ ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯ ಮತ್ತು ವಿದೇಶಗಳಿಂದ 7000 ಕ್ಕೂ ಅಧಿಕಮಂದಿ ಆಗಮಿಸಿದ್ದು, ಎಲ್ಲರನ್ನೂ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಸ್ಥಳೀಯವಾಗಿ ಸಮುದಾಯದಲ್ಲಿ ಕೋವಡ್ 19 ಹರಡದಂತೆ ಎಚ್ಚರವಹಿಸಲಾಗಿದೆ ಎಂದು ಶಾಸಕ ರಘುಪತಿಭಟ್ ತಿಳಿಸಿದ್ದಾರೆ. ಅವರು ಮಂಗಳವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ನೀಡಿದ, ಉಡುಪಿ ತಾಲೂಕಿನಲ್ಲಿ ಕೋವಿಡ್ ಮಾದರಿ ಸಂಗ್ರಹಿಸುವ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬಂದಿರುವ […]
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್-19 ಪರೀಕ್ಷೆ ಆರಂಭ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್ -19 ರ ಪರೀಕ್ಷೆ ಆರಂಭಿಸಲಾಗಿದೆ ಎಂದು ಆಸ್ಪತ್ರೆಯವ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ “ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ ಸಿ ಎಂ ಆರ್)”ಯಿಂದ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ದೊರೆತಿದೆ. ಇದರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಪ್ರಯೋಗಾಲಯವು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ಪಡೆದ ಮೊದಲ ಆಸ್ಪತ್ರೆಯಾಗಿದೆ ಎಂದಿದ್ದಾರೆ. […]
ಮುಂಬೈನಿಂದ ಉಡುಪಿಗೆ ಬಂದಿರುವ 8 ವರ್ಷದ ಬಾಲಕ ಸೇರಿದಂತೆ ಐವರಲ್ಲಿ ಕೊರೊನಾ ಸೋಂಕು ದೃಢ: ಡಿಸಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಐದು ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕೊರೊನಾ ಹೆಲ್ತ್ ಬುಲೆಟಿನ್ ಸಂಬಂಧಿಸಿ ಇಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬೈನಿಂದ ಜಿಲ್ಲೆಗೆ ಬಂದು ಕ್ವಾರಂಟೈನ್ ನಲ್ಲಿ ಇರುವ 53 ವರ್ಷದ ಪುರುಷ, 29 ವರ್ಷದ ಮಹಿಳೆ, 24 ವರ್ಷದ ಯುವಕ, 8 ವರ್ಷದ ಬಾಲಕ ಹಾಗೂ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿರುವ ಚಿತ್ರದುರ್ಗದ 17 ವರ್ಷದ ಯುವತಿಯಲ್ಲಿ […]
ಉಡುಪಿಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು: ಜಿಲ್ಲೆಗೆ ಕಂಟಕವಾದ ಮಹಾರಾಷ್ಟ್ರದ ನಂಟು
ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಕೊರೊನಾ ಸೋಂಕಿತ ನಾಲ್ಕು ಮಂದಿ ಕೂಡ ಮುಂಬೈನಿಂದ ಜಿಲ್ಲೆಗೆ ಆಗಮಿಸಿದ್ದವರಾಗಿದ್ದಾರೆ . ಮಧ್ಯಾಹ್ನ ಬಿಡುಗಡೆಗೊಂಡ ರಾಜ್ಯ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದವರಾಗಿದ್ದಾರೆ. 24 ಯುವಕ, 24 ವರ್ಷದ ಯುವತಿ, 8 ವರ್ಷದ ಬಾಲಕ ಹಾಗೂ 38 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರೆಲ್ಲರನ್ನು ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಐಸೋಲೇಷನ್ […]