ಪಾಕಿಸ್ತಾನ ವಿಮಾನ ಕರಾಚಿಯಲ್ಲಿ ಪತನ!
ಪಾಕಿಸ್ತಾನ್ ಇಂಟರ್ ನ್ಯಾಷನಲ್ ಏರ್ಲೈನ್ಸ್’ಗೆ (ಪಿಐಎ) ಸೇರಿದ, ಸಿಬ್ಬಂದಿಯೂ ಸೇರಿ 107 ಜನರಿದ್ದ ವಿಮಾನವೊಂದು ಕರಾಚಿಯಲ್ಲಿ ಪತನಗೊಂಡಿದ್ದು, ಲ್ಯಾಂಡಿಂಗ್ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಪತನಗೊಂಡಿದೆ. ವಿಮಾನದಲ್ಲಿದ್ದವರ ಪೈಕಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಏರ್ ಬಸ್ ಎ320’ ವಿಮಾನವು ಲಾಹೋರ್ನಿಂದ ಕರಾಚಿಗೆ ತೆರಳುತ್ತಿತ್ತು. ಕರಾಚಿ ವಿಮಾನ ನಿಲ್ದಾಣಕ್ಕೆ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ. ಪಾಕಿಸ್ತಾನ ಸೇನೆಯ ಕ್ಷಿಪ್ರ ಕಾರ್ಯಾಚರಣೆ […]
ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಸುನಿಲ್ ಕುಮಾರ್
ಕಾರ್ಕಳ : ಪರಿಸರ ವ್ಯವಸ್ಥೆಯಲ್ಲಿ ಅಳಿವಿನ ಅಂಚಿಗೆ ಬಂದಿರುವ ವನ್ಯ ಸಸ್ಯ-ಪ್ರಾಣಿಗಳ ಸಂರಕ್ಷಣೆ ಅಗತ್ಯವಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು. ಮಂಗಳೂರು ವೃತ್ತ, ಕುಂದಾಪುರ ವಿಭಾಗ ಹಾಗೂ ಕಾರ್ಕಳ ವಲಯದ ವತಿಯಿಂದ ಶಿರ್ಲಾಲು ಸಸ್ಯಕ್ಷೇತ್ರದಲ್ಲಿ ನಡೆದ ಅಂತರರಾಷ್ಟ್ರೀಯ ಜೀವವೈವಿಧ್ಯ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮನುಕುಲದ ರೀತಿ ಇತರ ಪ್ರಾಣಿಗಳಿಗು ಬದುಕುವ ಹಕ್ಕಿದೆ. ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ ಜೀವವೈವಿಧ್ಯಗಳ ರಕ್ಷಣೆ ಅತ್ಯಂತ ಮಹತ್ವವಾದದು. ಪ್ರಮುಖವಾಗಿ ಜೀವವೈವಿಧ್ಯತೆಗಳ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಾಗಿದೆ […]
ಬೆಳ್ತಂಗಡಿ: ಮುಂಬಯಿ ಥಾಣೆಯಿಂದ ಬಂದ ಮಹಿಳೆಗೆ ಕೊರೊನಾ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಮುಂಬಯಿ ಥಾಣೆಯ ಡೊಂಬಿವಿಲಿಯಿಂದ ಈ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗೆ ಬಂದಿದ್ದರು. ಮೇ 18ಕ್ಕೆ ಈ ಮಹಿಳೆ ಬೆಳ್ತಂಗಡಿ ಗೆ ಬಂದಿದ್ದ ಇವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಇವರಿಗೆ ಇಂದು ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಇದರಲ್ಲಿ 21 ಮಂದಿ ಗುಣಮುಖ ರಾಗಿದ್ದು, ಐವರು ಸಾವನ್ನಪ್ಪಿದ್ದರು. 36 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಲಸೆ ಕಾರ್ಮಿಕರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಮೇ 22: ಜಿಲ್ಲೆಯಲ್ಲಿ, ಹೋಟೆಲ್, ಕಾರ್ಖಾನೆ, ಕಟ್ಟಡ ಕಾರ್ಮಿಕರು ಹಾಗೂ ಇನ್ನಿತರ ಯಾವುದೇ ಸಂಸ್ಥೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ, ಕೇಂದ್ರ ಸರ್ಕಾರದ ಆತ್ಮ ಭಾರತ್ ನಿರ್ಭರ್ ಯೋಜನೆ ಅಡಿಯಲ್ಲಿ, ಮೇ ಮತ್ತು ಜೂನ್ ಮಾಹೆಯಲ್ಲಿ ಉಚಿತವಾಗಿ ಆಹಾರಧಾನ್ಯವನ್ನು ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ, ಈ ಯೋಜನೆಯಡಿ ಬರುವ ವಲಸೆ ಕಾರ್ಮಿಕರು ರಾಜ್ಯದಲ್ಲಿ ಮತ್ತು ಬೇರಾವುದೇ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ […]
ಖ್ಯಾತ ಸಂಗೀತ ವಿದುಷಿ ಶ್ಯಾಮಲಾ ಜಿ.ಭಾವೆ ನಿಧನ
ಬೆಂಗಳೂರು: ಕರ್ನಾಟಕ ಸಂಗೀತ, ಉಭಯ ಗಾನ ವಿಶಾರದೆ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ಸಂಗೀತ ಸಂಯೋಜಕಿ ಶಾಮಲಾ ಜಿ. ಭಾವೆ ಶುಕ್ರವಾರ ಬೆಳಿಗ್ಗೆ 6.30ಕ್ಕೆ ನಿಧನರಾದರು. ಚಾಮರಾಜಪೇಟೆ ರುದ್ರಭೂಮಿಯಲ್ಲಿ ಗಾಯಕಿ ಶ್ಯಾಮಲಾ ಜಿ.ಭಾವೆ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯಲಿವೆ. ಲಾಕ್ಡೌನ್ ಹಿನ್ನೆಲೆ ಜನ ಸೇರುವುದಕ್ಕೆ ನಿರ್ಬಂಧವಿದೆ. ಅಭಿಮಾನಿಗಳು ಸಹಕರಿಸಬೇಕು ಎಂದು ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.