ಕೊರೋನಾ ಭೀತಿ: ನಾಳೆಯಿಂದ ಸೆಲೂನ್‌ ಬಂದ್

ಕುಂದಾಪುರ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸೆಲೂನ್ ಶಾಪ್ ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ನಿರ್ಧಾರಕ್ಕೆ ಗಂಗೊಳ್ಳಿ ವಲಯ ಸವಿತಾ ಸಮಾಜ ತೀರ್ಮಾನಿಸಿದೆ. ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ, ಮುಳ್ಳಿಕಟ್ಟೆ, ಬಂಟ್ವಾಡಿ, ಅಲೂರು ಹಾಗೂ ಹೆಮ್ಮಾಡಿಯಲ್ಲಿರುವ ಎಲ್ಲ ಸೆಲೂನ್ ಅಂಗಡಿಗಳನ್ನು ಮೇ 26 ರಿಂದ ಮುಂದಿನ 10 ದಿನಗಳವರೆಗೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ನಿರ್ಧಾರಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ಹೊರ ರಾಜ್ಯ, ವಿದೇಶದಿಂದ ಬಂದವರು ಕೂಡ ತಮ್ಮ […]

ಸರಳೇಬೆಟ್ಟು ವಾರ್ಡ್ ನ ಮಾಜಿ ಕಾಂಗ್ರೆಸ್ ನಗರಸಭಾ ಸದಸ್ಯ ದೇವಾನಂದ ಪೂಜಾರಿ ನಿಧನ

ಉಡುಪಿ: ಸರಳೇಬೆಟ್ಟು ವಾರ್ಡ್ ನ ಮಾಜಿ ಕಾಂಗ್ರೆಸ್ ನಗರಸಭಾ ಸದಸ್ಯ ದೇವಾನಂದ ಪೂಜಾರಿ (53) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.‌ ಕಾಂಗ್ರೆಸ್ ಪಕ್ಷವನ್ನು ಸರಳೇಬೆಟ್ಟು ವಾರ್ಡಿನಲ್ಲಿ ಕಟ್ಟಿ ಬೆಳೆಸುವಲ್ಲಿ ಹಾಗೂ ನಗರಸಭಾ ಅನುದಾನದಿಂದ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿ ಸೈ ಎನಿಸಿಕೊಂಡಿದ್ದರು.  ಸರಳೇಬೆಟ್ಟು ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.  ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ. ಯು, ಆರ್ ಸಭಾಪತಿ,  ಕಾಂಗ್ರೆಸ್ನ ಹಿರಿಯ […]

ಉಡುಪಿಯಲ್ಲಿ ಕೊರೊನಾ ಅಟ್ಟಹಾಸ: ಎಂಟು ಮಕ್ಕಳಿಗೆ ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ 8 ಮಕ್ಕಳು ಸೇರಿದಂತೆ ಇಂದು ಹೊಸದಾಗಿ ಜಿಲ್ಲೆಯಲ್ಲಿ 16 ಕೊರೊನಾ ಪಾಸಿಟಿವ್  ಪತ್ತೆಯಾಗಿದೆ. ಮಧ್ಯಾಹ್ನ ಬಿಡುಗಡೆಗೊಂಡ ರಾಜ್ಯ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯಲ್ಲಿ ಪತ್ತೆಯಾದ 16 ಕೊರೊನಾ ಸೋಂಕಿತರ ಪೈಕಿ 14 ಮಂದಿ ಮುಂಬೈ ಹಾಗೂ ಇಬ್ಬರು ದುಬೈನಿಂದ ಬಂದಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದು ಮತ್ತಷ್ಟು ಆತಂಕವನ್ನು […]

ಉಡುಪಿಯಲ್ಲಿ ಮತ್ತೆ 16 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 16 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 69 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ ಎಂದು ರಾಜ್ಯ ಕುಟುಂಬ ಮತ್ತು ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆಗೊಳಿಸಿದ ಕೊರೊನಾ ಬುಲೆಟಿನ್ ನಲ್ಲಿ ತಿಳಿದುಬಂದಿದೆ.

ಮಂಗಳೂರು: ಕೊರೊನಾಗೆ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಬಲಿ; ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು

ಮಂಗಳೂರು: ಮಹಾಮಾರಿ ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ವ್ಯಕ್ತಿ ಬಲಿಯಾಗಿದ್ದು, ಅವರು ವೆನ್ಲಾಕ್ ಆಸ್ಪತ್ರೆಗೆ ಬಂದ ದಾಖಲಾದ ಅನಂತರ ಸಾವನ್ನಪ್ಪಿದ್ದಾರೆ. ಬಳಿಕ ಕೋವಿಡ್ ಟೆಸ್ಟ್ ನಲ್ಲಿ ಕೊರೊನ ಪಾಸಿಟಿವ್ ಬಂದಿದೆ. ಹೃದಯ ಕಾಯಿಲೆ ಸಂಬಂಧಿಸಿದಂತೆ ಅವರು ಚಿಕಿತ್ಸೆಗೆ ಆಗಮಿಸಿದ್ದರು. ಮೃತಪಟ್ಟ ಬಳಿಕ ಕೊರೊನಾ ಟೆಸ್ಟ್ ಮಾಡಲಾಗಿತ್ತು.  ಜಿಲ್ಲಾಡಳಿತದಿಂದ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ.