ಜೂನ್ 1: ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರಿಗೆ ದೇವರ ದರ್ಶನ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯಾಗಿರುವ ಹಿನ್ನಲೆ ಇದೀಗ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಬರುವ ಜೂನ್ 1ರಿಂದ ಪೂಜೆ-ಪುನಸ್ಕಾರಗಳು ಕೆಲವೊಂದು ಷರತ್ತುಗಳೊಂದಿಗೆ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ: ರಾಜ್ಯದಲ್ಲಿ ಜೂನ್ 1ರಿಂದ ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. […]

ಕೊರೋನಾ ಸೋಂಕು ಉತ್ತುಂಗ ಸ್ಥಿತಿಯಲ್ಲಿದ್ದಾಗ ಲಾಕ್ ಡೌನ್ ಸಡಿಲಿಸಬಾರದಿತ್ತು: ಮಾಧ್ಯಮ ಸಂವಾದದಲ್ಲಿ ರಾಹುಲ್ ಗಾಂಧಿ ಅಭಿಪ್ರಾಯ

ನವದೆಹಲಿ: ಕೇಂದ್ರ ಸರಕಾರದ ಮೂರು ಲಾಕ್ ಡೌನ್ ಗಳು ಸಫಲವಾಗಿತ್ತು ಆಧರೆ ಲಾಕ್ ಡೌನ್  4 ನಿರಾಶೆ ಮೂಡಿಸಿದೆ. ದೇಶದಲ್ಲಿ ಕೊರೋನಾ ಸೋಂಕು ಇನ್ನೂ ಹರಡುತ್ತಲೇ ಇರುವಾಗ ಲೌಕ್ ಡೌನ್ ಸಡಿಲ ಬಿಡಲಾಗಿದೆ.ಜರ್ಮನಿ, ಇಟಲಿ,ಫ್ರಾನ್ಸ್ ಗಳು ಇದೇ ನೀತಿ ಅನುಸರಿಸಿದ್ದರಿಂದ ಅಲ್ಲಿಯೂ ಈಗ ಸೋಂಕು ಹರಡುವ ಪ್ರಮಾಣ ಜಾಸ್ತಿಯಾಗಿದೆ.ಲಾಕ್ ಡೌನ್ ಅನ್ನು ಈ ಸಮಯದಲ್ಲಿ ಗಂಭೀರವಾಗಿ ಮಾಡಬೇಕಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಆನ್ ಲೈನ್ ನಲ್ಲಿ ವಿವಿಧ ಪತ್ರಿಕಾ […]

ಉಡುಪಿ: ಮುಂಬೈನಿಂದ ಬಂದಿರುವ 9 ವರ್ಷದ ಬಾಲಕಿ ಸಹಿತ ಮೂವರಿಗೆ ಕೊರೊನಾ ಪಾಸಿಟಿವ್ 

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ ಸೇರಿದಂತೆ ಜಿಲ್ಲೆಯಲ್ಲಿ ಇಂದು ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯ ಕುಟುಂಬ ಹಾಗೂ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆಗೊಳಿಸಿದ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಮುಂಬೈನಿಂದ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ, 27 ವರ್ಷದ ಯುವಕ ಹಾಗೂ 30 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮೇ 26ರಿಂದ 29ರ ವರೆಗೆ ಕರಾವಳಿಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇದೇ 26ರಿಂದ 29ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಇಲಾಖೆಯು ಮೂರೂ ದಿನಗಳವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ […]