ಜೂನ್ 8ರಿಂದ ದೇವಸ್ಥಾನಗಳಲ್ಲಿ ಪೂಜೆ, ದರ್ಶನಕ್ಕೆ ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಸಹಿತ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಂದು ತೆರೆದು ಭಕ್ತರಿಗೆ ಪೂಜೆ ಪುನಸ್ಕಾರ ಮತ್ತು ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಈ ಮೊದಲು ಜೂನ್ 1ಕ್ಕೆ ತೀರ್ಮಾನಿಸಲು ಉದ್ದೇಶಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯಂತೆ ಜೂನ್ 8 ಕ್ಕೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ. ಜೂ. […]
ಕೊರೊನಾ ವಿರುದ್ಧ ಹೋರಾಡಲು ಆಯುರ್ವೇದಕ್ಕೆ ಮೊರೆ ಹೋಗುವುದು ಅನಿವಾರ್ಯ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಕರೊನಾದ ವಿರುದ್ಧ ಹೋರಾಡಲು ಅತ್ಯಂತ ಅವಶ್ಯಕವಾಗಿರುವುದು ಪ್ರತಿಯೊಬ್ಬ ನಾಗರಿಕರು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳುವುದು. ಈ ಹಿನ್ನೆಲೆಯಲ್ಲಿ ನಮ್ಮ ಅತ್ಯಂತ ಪ್ರಾಚೀನ ಪರಂಪರೆಯಿಂದ ಬಂದಿರುವ ಆಯುರ್ವೇದಕ್ಕೆ ಮೊರೆ ಹೋಗುವುದು ಇಂದಿನ ಅವಶ್ಯಕತೆಯಾಗಿದೆ. ಆಯುರ್ವೇದದಿಂದ ನಾವು ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಬೇರೆ ಬೇರೆ ದೇಶಗಳ ಜನರು ಕೂಡ ಆಯುರ್ವೇದದ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿರುವುದು ನಮ್ಮ ಭಾರತದ ಹಿರಿಮೆ […]