ಗಂಗೊಳ್ಳಿ ಬಂದರಿನ ಬ್ರೇಕ್ ವಾಟರ್ ತಡೆಗೋಡೆ ಕುಸಿಯುತ್ತಿದೆ ಎಚ್ಚರ! 

ಕುಂದಾಪುರ: ಕಳೆದೆರಡು ವರ್ಷಗಳ ಹಿಂದಷ್ಟೇ ಪೂರ್ಣಗೊಂಡಿದ್ದ 102 ಕೋಟಿ ರೂ. ವೆಚ್ಚದ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಬ್ರೇಕ್ ವಾಟರ್ ತಡೆಗೋಡೆ ದಕ್ಷಿಣ ಭಾಗದಲ್ಲಿ ಬಹುತೇಕ ಕುಸಿದಿದ್ದು, ತಡೆಗೋಡೆಗೆ ಹಾಕಲಾಗಿದ್ದ ಕಲ್ಲುಬಂಡೆಗಳು ಸಮುದ್ರ ಪಾಲಾಗುತ್ತಿವೆ. ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನ ದಕ್ಷಿಣ ದಿಕ್ಕಿನಲ್ಲಿ ಪಶ್ಚಿಮಕ್ಕೆ ಸುಮಾರು 700 ಮೀಟರ್ ಉದ್ದದ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯ ದಕ್ಷಿಣ ಭಾಗದಲ್ಲಿ ಕಲ್ಲುಗಳು ಜಾರಿ ಕಡಲು ಸೇರುತ್ತಿದ್ದು, ತಡೆಗೋಡೆ ಕುಸಿಯಲಾರಂಭಿಸಿದೆ. ತಡೆಗೋಡೆಯ ಕಲ್ಲು ಅಲೆಗಳ ಅಬ್ಬರಕ್ಕೆ ಕುಸಿದು ಸಮುದ್ರ […]

ಕುಂದಾಪುರದಲ್ಲಿ ಹೆಚ್ಚಾಯ್ತು ಕೊರೋನಾ ಪಾಸಿಟಿವ್! ಪತ್ತೆಯಾಯ್ತು 15ಪ್ರಕರಣ

ಕುಂದಾಪುರ: ಕೋವಿಡ್-19 ಪರೀಕ್ಷಾ ವರದಿ ಬಾರದೆ ಕ್ವಾರಂಟೈನ್‍ನಲ್ಲಿರುವವರನ್ನು ಮನೆಗೆ ಕಳುಹಿಸಿದ ಬೆನ್ನಲ್ಲೇ ತಾಲೂಕಿನಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾದ ಪರಿಣಾಮ ಕುಂದಾಪುರ ಹಾಗೂ ಬೈಂದೂರಿನ ಹಲವು ಪ್ರದೇಶಗಳನ್ನು ಕಂಟೈನ್‍ಮೆಂಟ್ ವಲಯಗಳಾಗಿ ಪರಿವರ್ತಿಸಲಾಗಿದೆ. ಮೇ.31 ರಂದು ಬೈಂದೂರು ತಾಲ್ಲೂಕಿನ ಕಾಲ್ತೂಡು ಗ್ರಾಮದ ಕಬ್ಸೆಯಲ್ಲಿ ಒಂದು ಪ್ರಕರಣ ಮಾತ್ರ ದಾಖಲಾಗಿತ್ತು. ಇದೀಗ ಸೋಮವಾರ ಬಂದಿರುವ ಪರೀಕ್ಷಾ ವರದಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ಒಟ್ಟು 15 ಪ್ರಕರಣಗಳಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಇಂದಿನ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಬೈಂದೂರು […]

ಉಡುಪಿಗೆ ‘ಮಹಾ’ ಉರುಳು: ಇಂದು ಒಂದೇ ದಿನ 73 ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಬಂದವರು ಉಡುಪಿ ಜಿಲ್ಲೆಗೆ ಮತ್ತೆ ಕಂಟಕವಾಗಿದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ 73 ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ಜಿಲ್ಲೆಯ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 3 ದಿನ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆದಲ್ಲಿ ಮಂಗಳವಾರ ಅಥವಾ ಬುಧವಾರ ಮುಂಗಾರು ಪ್ರವೇಶಿಸಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. 3 ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆ: ಮುಂಗಾರು ಪ್ರವೇಶಿಸುವ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದ್ದು, ನಾಳೆ ರಾಜ್ಯದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವೇಶಿಸಿ, ಭಾರೀ ಮಳೆಯಾಗುವ ನಿರೀಕ್ಷೆ ಇವೆ ಎಂದು ತಿಳಿಸಿದ್ದಾರೆ.

ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ: ಉಸ್ತುವಾರಿ ಕಾರ್ಯದರ್ಶಿ

ಉಡುಪಿ ಜೂನ್ 1: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬಂಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಇನ್ನೂ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಕೈಗಾರಿಕೆ, ವಾರ್ತಾ ಇಲಾಖೆಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ರಾಜ್ಯ ಸರಕಾರ ಆಸ್ಪತ್ರೆಗಳಲ್ಲಿ […]