ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ರೈತರಿಗಾಗಿ ಉಳುವ ಯಂತ್ರ ಟ್ರ್ಯಾಕ್ಟರ್ ಸೇವೆ
ಕಾರ್ಕಳ : ಜಿಲ್ಲೆಯ ರೈತರಿಗೆ ಅನೂಕೂಲಕ್ಕಾಗಿ ಭತ್ತದ ಕಾರ್ಯಕ್ಕೆ ತೊಡಗುವಂತೆ ಜನರನ್ನು ಒಗ್ಗಿಸುವ ನಿಟ್ಟಿನಲ್ಲಿ ಬೇರೆ ಜಿಲ್ಲೆಗಳಿಂದ ಉಳುವ ಯಂತ್ರ ಟ್ರ್ಯಾಕ್ಟರ್ ಅನ್ನು ತರಿಸಿ ರೈತರಿಗೆ ಅತಿ ಕಡಿಮೆ ಬೆಲೆಗೆ (ಗಂಟೆಗೆ 700/ ರೂಪಾಯಿ) ಸಿಗುವಂತೆ ಮಾಡಿ ಸ್ಥಳೀಯ ಆಸುಪಾಸಿನ ಎಲ್ಲಾ ರೈತರಿಗೆ ಕೃಷಿಯನ್ನು ಮಾಡಲು ಉತ್ತೇಜಿಸುವ ಸಲುವಾಗಿ ಆಡಳಿತ ಮಂಡಳಿ ಉತ್ತಮ ನಿರ್ಧಾರ ಕೈಗೊಂಡಿದೆ. ಇವತ್ತಿನಿಂದ ಅತಿ ಕಡಿಮೆ ದರದಲ್ಲಿ ಉತ್ತಮ ಉಳುವ ಯಂತ್ರಗಳು ನೀರೆ ಬೈಲೂರು ವ್ಯವಸಾಯ ಸೇವಾ ಸಂಘದ ವತಿಯಿಂದ ರೈತರಿಗೆ ಲಭ್ಯವಿದೆ […]
ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂನ್ 3: ಜಿಲ್ಲೆಗೆ ಹೊರಜಿಲ್ಲೆಯಿಂದ ಆಗಮಿಸುವವರು ಕ್ವಾರಂಟೈನ್ ಗೆ ತೆರಳುವ ಮುನ್ನ ತಪ್ಪು ವಿಳಾಸ , ದೂರವಾಣಿ ಸಂಖ್ಯೆ ನೀಡಿದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆಪ್ ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗದಲ್ಲಿ ಆಗಮಿಸುವವರು, ರಾಜ್ಯದ ಗಡಿಯಲ್ಲಿರುವ ಸ್ವೀಕಾರ (BRC – BORDER RECEIVE CENTER) ಕೇಂದ್ರದಲ್ಲಿ ಸೂಚಿಸುವ, ತಮ್ಮ ಜಿಲ್ಲೆಯಲ್ಲಿನ, ಸ್ವೀಕಾರ ಕೇಂದ್ರ (DRC – DISTRICT RECEIVE […]
ಉಡುಪಿ: 62 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 471ಕ್ಕೆ ಏರಿಕೆ
ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 62 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 62 ಸೋಂಕಿತರ ಪೈಕಿ 43 ಪುರುಷರು, 15 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇದರಲ್ಲಿ ಬಹುತೇಕ ಸೋಂಕಿತರು ಮುಂಬೈಯಿಂದ ಬಂದವರಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಸಚಿವ ಡಾ. ಸುಧಾಕರ್
ಉಡುಪಿ ಜೂನ್ 3: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ಈ ಕುರಿತಂತೆ ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು. ಅವರು ಬುಧವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ […]
ಸೆಲೂನ್ ಗ್ರಾಹಕರಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಿದ ತಮಿಳುನಾಡು ಸರಕಾರ
ಚೆನ್ನೈ: ಕೊವೀಡ್-19 ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಲೂನ್, ಸ್ಪಾ, ಬ್ಯೂಟಿ ಪಾರ್ಲರ್ ಗಳಿಗೆ ಬರುವ ಗ್ರಾಹಕರ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗೆ ಪಡೆದುಕೊಳ್ಳಲಾಗುವುದು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಸಾಮಾನ್ಯವಾಗಿ ಎಲ್ಲಾ ಗ್ರಾಹಕರು ಹೆಸರು, ವಿಳಾಸ, ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ಒಳಗೊಂಡ ಮಾಹಿತಿಯನ್ನು ಹೊಂದಿರುವುದು ಕಡ್ಡಾಯ. ಆದರಿಂದ ಕೊರೋನಾ ಸಂಪರ್ಕವನ್ನು ಸುಲಭವಾಗಿ ಮತ್ತು ವೇಗವಾಗಿ ಪತ್ತೆ ಹಚ್ಚಲು ಅನುಕೂಲವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ ಚೆನ್ನೈ ಪೊಲೀಸ್ ಠಾಣೆ […]