ಗಂಗೊಳ್ಳಿ ಗ್ರಾಮದ ಮೊಗೇರಹಿತ್ಲು ಪರಿಸರ ಸೀಲ್‍ಡೌನ್
ಕುಂದಾಪುರ : ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನಲೆ ಮನೆಗೆ ಬಂದ ಗಂಗೊಳ್ಳಿ ಗ್ರಾಮದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಗಂಗೊಳ್ಳಿ ಗ್ರಾಮದ ದಾಕುಹಿತ್ಲು ಪ್ರದೇಶದ ಮೊಗೇರಹಿತ್ಲು ಪರಿಸರವನ್ನು ಭಾನುವಾರ ಸೀಲ್‍ಡೌನ್ ಮಾಡಲಾಗಿದೆ. ಗಂಗೊಳ್ಳಿ ಗ್ರಾಮದ ದಾಕುಹಿತ್ಲು ಮೊಗೇರಹಿತ್ಲು ಎಂಬಲ್ಲಿನ ಮನೆಗೆ ಮಹಾರಾಷ್ಟ್ರದಿಂದ ಆಗಮಿಸಿದ ಮಹಿಳೆಯ ವರದಿಯು ಪಾಸಿಟಿವ್ ಬಂದಿದ್ದು, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತ ಮಹಿಳೆಯ ಮನೆ ಸಮೀಪದ 100 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್‍ಮೆಂಟ್ ಜೋನ್ ಎಂದು […]
ಉಡುಪಿ: ಮುಂಬೈನಿಂದ ಬಂದ 7 ವರ್ಷದ ಬಾಲಕ ಸಹಿತ 13 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ 7 ವರ್ಷದ ಬಾಲಕ ಸೇರಿದಂತೆ ಇಂದು ಹೊಸದಾಗಿ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 902ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಕೊರೊನಾ ಪ್ರಕರಣ ದೃಢ
ಮಂಗಳೂರು,ಜೂ.7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಈ 17 ಮಂದಿಯಲ್ಲಿ 16 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಒಬ್ಬರು ಗೋವದಿಂದ ಬಂದವರಾಗಿದ್ದಾರೆ. 37, 50, 17, 52,57, 32,34, 33, 40,15, 40, 38, 41, 45,14 ವಯಸ್ಸಿನ ಪುರುಷರು ಮತ್ತು 32, 41 ಮಹಿಳೆಯರು. 15 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಿಗೆ ಕೊರೊನಾ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು ದೃಢಪಟ್ಟ ಪ್ರಕರಣ 192 ಆಗಿದ್ದು, 94 ಮಂದಿ […]
ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
ಬೆಂಗಳೂರು: ಚಂದನವನದ ಖ್ಯಾತ ನಟ ಚಿರಂಜೀವಿ ಸರ್ಜಾ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ. ಸದ್ಯ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ. ‘ಚಿರು’ ಎಂದು ಖ್ಯಾತರಾಗಿದ್ದ ಈ ನಟ. ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ ಅಷ್ಟಲ್ಲದೇ ಕನ್ನಡದ […]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ಜೂ.8 ರಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ
ಕುಂದಾಪುರ: ಕೊರೋನಾ ಮಹಾಮಾರಿ ಹಿನ್ನೆಲೆ ಕಳೆದೆರಡು ತಿಂಗಳುಗಳಿಂದ ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶ ನಿರಾಕರಿಸಲಾಗಿದ್ದು ಕೊನೆಗೂ ಸರ್ಕಾರ ಸೋಮವಾರದಿಂದ ರಾಜ್ಯಾದ್ಯಂತ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಭರದ ಸಿದ್ಧತೆಗಳು ನಡೆಯುತ್ತಿದ್ದು, ಭಾನುವಾರ ಸಿದ್ದತೆ ಪೂರ್ಣಗೊಳ್ಳಲಿದ್ದು ಸೋಮವಾರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಎದುರಿನ ಮುಖ್ಯ ದ್ವಾರದಿಂದ ಒಳ ಪ್ರವೇಶಿಸುವ ಭಕ್ತರು ಹಿಂಭಾಗದ ಆನೆ ಬಾಗಿಲಿನ ಮೂಲಕ ಹೊರ ತೆರಳಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇವಸ್ಥಾನ ಪ್ರವೇಶ […]