ಕೆಎಂಎಫ್ ನಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ
ಉಡುಪಿ ಜೂನ್ 6: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ, ಕೋವಿಡ್-19 ವಿರುದ್ದ ಹೋರಾಟದಲ್ಲಿ ಶ್ರಮಿಸುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 2600 ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಹಾಲಿನ ಉತ್ಪನ್ನಗಳ ಕಿಟ್ ವಿತರಣೆಯ ಕಾರ್ಯಕ್ರಮಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ , ಉಡುಪಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸುವ ಚಾಲನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿದ ಸಂಸದರು, ಕೋವಿಡ್-19 ವಿರುದ್ದದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು […]
ಸಾಣೂರು ಯುವಕ ಮಂಡಲದ ವತಿಯಿಂದ ಪರಿಸರ ದಿನಾಚರಣೆ
ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ ಸಾಣೂರು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ವಿಜೇತ ಸಂಸ್ಥೆ) ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಯುವಕ ಮಂಡಲದ ಎದುರು ರಾಷ್ಟ್ರೀಯ ಹೆದ್ದಾರಿ ಬಳಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 30 ವಿವಿಧ ಬಗೆಯ ಗಿಡಗಳನ್ನು ನೆಡಲಾಯಿತು ಮತ್ತು ಗಿಡಗಳ ರಕ್ಷಣೆ ಬಗ್ಗೆ ಮಂಡಲದ ಸದಸ್ಯರಿಗೆ ಜವಾಬ್ದಾರಿ ನೀಡಲಾಯಿತು. ಕಾರ್ಯಕ್ರಮದಲ್ಲಿ […]
ಜೂ. 8ರಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ತೆರಯದಿರಲು ನಿರ್ಧಾರ
ಮಂಗಳೂರು: ಸೋಮವಾರದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ತೆರೆಯದಿರಲು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಮಾಡಿದೆ. ದೇವಸ್ಥಾನ ತೆರೆದಿಟ್ಟಲ್ಲಿ ಅತೀ ಹೆಚ್ಚಿನ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದೆ. ಭಕ್ತಾಧಿಗಳ ದರ್ಶನಕ್ಕೆ ಟಿಕೆಟ್ ಮೂಲಕ ವ್ಯವಸ್ಥೆಗಾಗಿ ಸಾಫ್ಟ್ ವೇರ್ ಮಾಡಲಾಗಿದೆ. ನೂತನ ಸಾಫ್ಟ್‌ವೇರ್ ಅಭಿವೃದ್ದಿಪಡಿಸಿದ ಬಳಿಕ ದೇವಸ್ಥಾನ ತೆರೆಯಲು ಚಿಂತನೆ ನಡೆಸಲಾಗಿದ್ದು, ಎಲ್ಲಾ ವ್ಯವಸ್ಥೆಗಳನ್ನು ಸಜ್ಜುಗೊಳಿಸಿ ದೇವಸ್ಥಾನ ತೆರೆಯಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಜೂ.8ರ ಸೋಮವಾರದಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಉಡುಪಿ ಜೂನ್ 6: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ರಾಷ್ಟಿಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು […]