ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಪಠ್ಯದ ಹೊರೆ ಕಡಿಮೆಯಾಗಲಿದೆ ,ಸಚಿವರಿಂದ ಪ್ಲಾನ್
ಉಡುಪಿ ಜೂನ್ 9: ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. […]
ಕಾರಿಂಜ: ಅಂತರ ಕಾಯ್ದುಕೊಂಡು ಕುಳಿತ ವಾನರ ಸೇನೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್
ಬಂಟ್ವಾಳ: ಈಗಾಗಲೇ ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದರೆ ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಇದಕ್ಕಾಗಿಯೇ ದೇಗುಲಗಳಲ್ಲಿ ಬಣ್ಣದಿಂದ ಬಾಕ್ಸ್ ಗಳನ್ನು ಬಳಿಯಲಾಗಿದೆ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ಕೋತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅದರ ಮೇಲೆ ಕುಳಿತ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಾರೀ ಮೆಚ್ಚುಗೆ ಗಳಿಸಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀಕಾರಿಂಜೇಶ್ವರ ದೇವಸ್ಥಾನ […]
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹಸಚಿವ ಬೊಮ್ಮಾಯಿ ಭೇಟಿ
ಮಂಗಳೂರು: ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೇಗುಲ ಪ್ರವೇಶಕ್ಕೂ ಮುನ್ನ ಇತರ ಭಕ್ತರಿಗೆ ಥರ್ಮಲ್ ಸ್ಕ್ಯಾನ್ ಮಾಡಿ ದೇವಸ್ಥಾನಕ್ಕೆ ಪ್ರವೇಶ ನೀಡಲಾಯಿತು. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.
ಉಡುಪಿಯಲ್ಲಿ ಶೂನ್ಯಕ್ಕೆ ಇಳಿದ ಕೊರೊನಾ: ಇನ್ನೂ 712 ಮಂದಿ ಸೋಂಕಿತರು ಸಕ್ರಿಯ
ಉಡುಪಿ: ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ಇದರಿಂದ ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯದಿಂದ ಜಿಲ್ಲೆಗೆ ಬಂದಿರುವವರ ಕೊರೊನಾ ಪರೀಕ್ಷೆ ನಿನ್ನೆಗೆ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕಿತರು ಕಂಡುಬಂದಿಲ್ಲ. ಈವರೆಗೆ ಜಿಲ್ಲೆಯಲ್ಲಿ 947 ಮಂದಿ ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ 234 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ಜಿಲ್ಲೆಯಲ್ಲಿ 712 ಸಕ್ರಿಯ ಪ್ರಕರಣಗಳಿವೆ. ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜ್ಞಾನದ ಸಗ್ಗ ಈ ಮಂಕುತಿಮ್ಮನ ಕಗ್ಗ: ಬಳ್ಕೂರರ ಬಾಯಲ್ಲಿ ಮಂಕುತಿಮ್ಮನ ಕಗ್ಗ ಕೇಳಿ
ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗ ಕನ್ನಡದ ಮೇರು ಕೃತಿ. ಅದರ ಒಂದೊಂದು ಕಗ್ಗವೂ ಬಾಳಿಗೆ ಜ್ಞಾನ ಬೆಳಕು. ಕತ್ತಲನ್ನು ತೊಲಗಿಸಿ ಬೆಳಕಿನ ಕಿಡಿಗಳನ್ನು ಹೊಮ್ಮಿಸೋ ಮಾಧುರ್ಯ ಆ ಕಗ್ಗಗಳಿಗಿವೆ.ಈ ಕಗ್ಗಗಳನ್ನು ಎಲ್ಲರಿಗೂ ತಲುಪಿಸಬೇಕು, ಸಾಮಾನ್ಯ ಜನರಿಗೆ ಇದೊಂದು ಸ್ಪೂರ್ತಿಯಾಗಬೇಕು ಎನ್ನುವ ಉದ್ದೇಶದಿಂದ ಎಕ್ಸ್ ಪರ್ಟ್ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಉಪನ್ಯಾಸಕರಾದ ಕರುಣಾಕರ ಬಳ್ಕೂರ್ ಅವರು ಡಿಜಿವಿ ಅವರ ಮಂಕುತಿಮ್ಮನ ಕಗ್ಗದ ವಾಚನ ಮತ್ತು ವ್ಯಾಖ್ಯಾನ ಮಾಲಿಕೆಗಳನ್ನು ಯುಟ್ಯೂಬ್ ಜಾಲತಾಣದಲ್ಲಿ ಕಾವ್ಯಾಸಕ್ತರಿಗೆ ತಲುಪಿಸಿದ್ದಾರೆ. ಕಗ್ಗವನ್ನು ಸುಂದರವಾಗಿ ವಾಚಿಸುತ್ತ, […]