ಮನೆಯಲ್ಲಿಯೇ ಕುಳಿತು ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯಿರಿ: ಡಿಸಿ ಜಿ. ಜಗದೀಶ್

ಉಡುಪಿ ಜೂನ್ 10: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು  ದಿನೇ ದಿನೇ ಹೆಚ್ಚಿನ ದಾಖಲಾಗುತ್ತಿದ್ದು , ಸಾರ್ವಜನಿಕರು ವಿವಿಧ ಅನಾನುಕೂಲಗಳ ನಡುವೆಯೇ , ಜಿಲ್ಲಾಧಿಕಾರಿ ಕಚೇರಿಯಲ್ಲಿನ ವಿವಿಧ ಕಾರ್ಯಗಳಿಗಾಗಿ ದೂರದ ಊರುಗಳಿಂದ ಸ್ವಂತ ವಾಹನ ಹಾಗೂ ಬಸ್ಸುಗಳ ಮೂಲಕ ಜಿಲ್ಲಾಧಿಕಾರಿಯವರ ಕಛೇರಿಗೆ ಆಗಮಿಸುತ್ತಿದ್ದು, ಇವರೆಲ್ಲರ ಅನುಕೂಲಕ್ಕಾಗಿ ಜಿಲ್ಲಾಡಳಿತ ಅತ್ಯಂತ ಸರಳ ಮತ್ತು ತ್ವರಿತ ಸೇವೆ ನೀಡುವ ನೂತನ ಯೋಜನೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ […]

ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ನಿಲ್ಲಿಸಬೇಕು: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಎಲ್ ಕೆಜಿ, ಯುಕೆಜಿ ಸೇರಿದಂತೆ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ನಡೆಸುವುದನ್ನು ಇಂದಿನಿಂದಲೇ ಕೈಬಿಡಬೇಕು. ಜತೆಗೆ ಫೀಸ್ ಪಡೆಯುವುದನ್ನೂ ನಿಲ್ಲಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆನ್ ಲೈನ್ ತರಗತಿ‌ ನಡೆಸುವುದು ಕಷ್ಟಕರವಾಗಿದ್ದು, ಈಗಾಗಲೇ ದೂರುಗಳು ಕೇಳಿಬಂದಿದೆ. ಶಿಕ್ಷಣ ಎನ್ನುವುದು ಕೇವಲ ಸಿಲೆಬಸ್ ಮುಗಿಸುವುದಲ್ಲ, ಜ್ಞಾನವೃದ್ದಿ ಆಗಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ಇಂದಿನಿಂದಲೇ ನಿಲ್ಲಿಸಬೇಕು. ಜತೆಗೆ ಆನ್ ಲೈನ್ ತರಗತಿಗಳಿಗೆ ಫೀಸ್ ತೆಗೆದುಕೊಳ್ಳುವುದನ್ನು ಕೂಡ ತಕ್ಷಣವೇ ನಿಲ್ಲಿಸಬೇಕು.  […]

ಎಂಡಿ ಲಕ್ಷ್ಮಿನಾರಾಯಣ್ ಅವರನ್ನು ಎಂಎಲ್ ಸಿ ಮಾಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಒಬಿಸಿ ಮೋರ್ಚಾ ಆಗ್ರಹ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷ ಎಂಡಿ ಲಕ್ಷ್ಮಿನಾರಾಯಣ (ಅಣ್ಣಯ್ಯ) ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗ ಆಗ್ರಹಿಸಿದೆ. ಲಕ್ಷ್ಮೀನಾರಾಯಣ್ ಅವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯಾದ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ಸಂಘಟನೆ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ,ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ಕೊಟ್ಟು ಪಕ್ಷದಲ್ಲಿ ದುಡಿಯುವಂತೆ ಪ್ರೋತ್ಸಾಹಿಸಿದ್ದಾರೆ. ಚುನಾವಣೆಗಳು ನಡೆದಂತಹ ಸಂದರ್ಭಗಳಲ್ಲಿ ರಾಜ್ಯದ ಮೂಲೆ […]

ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಉಡುಪಿ ಜೂನ್ 10: ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಈಗಾಗಲೇ ಸರಕಾರದ ಆಧೇಶವಾಗಿದ್ದು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ, ನೂತನ ಕ್ವಾರಂಟೈನ್ ನಿಯಮದ ಅನುಷ್ಠಾನ ಕುರಿತಂತೆ  ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾರಾಷ್ಟ್ರದಿಂದ ಬರುವವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಗೆ […]

ಆನ್ ಲೈನ್ ಶಿಕ್ಷಣ ರದ್ದು, ವಾರ್ಷಿಕ ಶುಲ್ಕ ಹೆಚ್ಚಿಸುವಂತಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಎಲ್ ಕೆಜಿ, ಯುಕೆಜಿ ಹಾಗೂ 1ರಿಂದ 5 ತರಗತಿವರೆಗಿನ ಆನ್ ಲೈನ್ ಶಿಕ್ಷಣವನ್ನು ಸರ್ಕಾರ ರದ್ದುಪಡಿಸಿದೆ. ಆನ್ ಲೈನ್ ಶಿಕ್ಷಣದ ಬಗ್ಗೆ ಸಾಕಷ್ಟು ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದವು. ಅಲ್ಲದೆ ಬಹುತೇಕ ಮಕ್ಕಳ ಪೋಷಕರು ಕೂಡ ಆನ್ ಲೈನ್ ಶಿಕ್ಷಣದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸರ್ಕಾರ ಕೂಡ ಆನ್ ಲೈನ್ ಶಿಕ್ಷಣಕ್ಕೆ ನಿಷೇಧ ಹೇರಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಆನ್ ಲೈನ್ […]