ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಉಡುಪಿ ಬೋರ್ಡ್ ಹೈಸ್ಕೂಲ್ ಸಂಪೂರ್ಣ ಸ್ಯಾನಿಟೈಜೇಷನ್
ಉಡುಪಿ ಜೂನ್ 11: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಪ್ರಯುಕ್ತ, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳನ್ನು, ಕೋವಿಡ್-19 ಪ್ರಯುಕ್ತ ಕ್ವಾರಂಟೈನ್ ಗೆ ಬಳಸಿದ್ದಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಅಂತಹ ಕೇಂದ್ರಗಳನ್ನು ಸಂಪೂರ್ಣ ಸ್ವಾನಿಟೈಸ್ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೂಚಿಸಿದ್ದು, ಅದರಂತೆ ಗುರುವಾರ ಉಡುಪಿಯ ಬೋರ್ಡ್ ಹೈಸ್ಕೂಲ್ ನ್ನು, ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಅವರ ನೇತೃತ್ವದಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.
ಉಡುಪಿಯಲ್ಲಿ ಮತ್ತೆ ಕೊರೊನಾ ಅಟ್ಟಹಾಸ: ಮುಂಬೈನಿಂದ ಬಂದ 5 ವರ್ಷದ ಬಾಲಕಿ ಸಹಿತ 22 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಮುಂಬೈನಿಂದ ಬಂದ 5 ವರ್ಷದ ಬಾಲಕಿ ಸಹಿತ ಜಿಲ್ಲೆಯಲ್ಲಿ ಇಂದು 22 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬಸ್ ನಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಕಾದಿದೆ ಶಿಕ್ಷೆ: ಉಡುಪಿ ಜಿಲ್ಲಾಧಿಕಾರಿ
ಉಡುಪಿ ಜೂನ್ 11: ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಬಸ್ ಗಳಲ್ಲಿ ನಿಗಧಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ ಗಳ ವಿರುದ್ದ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೋನಾ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಬಸ್ ಗಳಲ್ಲಿ ಸಾಮಾಜಿಕ ಅಂತರ […]
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ, ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಸಿದ್ದತೆ: ಜಿಲ್ಲಾಧಿಕಾರಿ
ಉಡುಪಿ ಜೂನ್ 11: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಕುರಿತಂತೆ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸುಗಮ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸುವ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಕ್ ಡೌನ್ ಕಾರಣದಿಂದ ಬಾಕಿಯಿದ್ದ ದ್ವಿತೀಯ ಪಿಯುಸಿ […]
ಜಿಲ್ಲಾಡಳಿತದ ವಿರುದ್ದ ಆಧಾರರಹಿತ ಅಪವಾದ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
ಉಡುಪಿ ಜೂನ್ 10: ಕೋವಿಡ್-19 ವಿರುದ್ದ ಜಿಲ್ಲಾಡಳಿತ ಕೈಗೊಂಡಿರುವ ಕಾರ್ಯಗಳ ಕುರಿತು ಸುಖಾ ಸುಮ್ಮನೇ, ಯಾವುದೇ ಆಧಾರವಿಲ್ಲದೇ , ಸಾಮಾಜಿಕ ಮಾದ್ಯಮದಲ್ಲಿ ಅವಹೇಳನವಾಗಿ ಅಪವಾದ ಪ್ರಕಟಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಅನ್ವಯ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ 947 ಪಾಸಿಟಿವ್ ಪ್ರಕರಣ ಪೈಕಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿದ್ದು, ಜಿಲ್ಲಾಡಳಿತ ಹಾಗೂ ಯಾವುದೇ ಸಂಸ್ಥೆಯ ವಿರುದ್ದ ಇಲ್ಲಸಲ್ಲದ ಕಲ್ಪನೆ ಮಾಡಿಕೊಂಡು ಆಧಾರರಹಿತ […]