ಮೃತಪಟ್ಟ ಮೀನುಗಾರ ಭಾಗ್ಯರಾಜ್ ಕುಟುಂಬಕ್ಕೆ 2 ಲಕ್ಷ ಪರಿಹಾರ ನಿಧಿ ವಿತರಣೆ
ಉಡುಪಿ: ಇತ್ತೀಚೆಗೆ ಮೃತಪಟ್ಟ ಮಲ್ಪೆ ಬಡಾನಿಡಿಯೂರು ಗ್ರಾಮದ ಮೀನುಗಾರ ಭಾಗ್ಯರಾಜ್ ಅವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ವಿತರಿಸಿ ಮೃತರ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ […]
ಉಡುಪಿ: ಇಂದು ಮತ್ತೆ 20 ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಇಂದು ಮತ್ತೆ 20 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.
ದ.ಕ. ಜಿಲ್ಲೆ: ಕೊರೊನಾಗೆ 8ನೇ ಬಲಿ: 26 ವರ್ಷದ ಯುವಕ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಎಂಟನೇ ಬಲಿಯಾಗಿದ್ದು, ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಾವನ್ನಪ್ಪಿದ್ದಾರೆ. ಯುವಕನಿಗೆ ಕೋವಿಡ್ ಪರೀಕ್ಷೆ ವೇಳೆ ಕೊರೋನಾ ಇರುವುದು ದೃಢಪಟ್ಟಿತ್ತು.
ಭಾರತದ ರಕ್ಷಣಾ ಸಾಮರ್ಥ್ಯ ಸಾಕಷ್ಟು ಬಲಿಷ್ಠವಾಗಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ಸಾಕಷ್ಟು ವೃದ್ಧಿಸಿಕೊಂಡಿದ್ದು, ಈಗ ದುರ್ಬಲ ರಾಷ್ಟ್ರವಾಗಿ ಉಳಿದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಇಂದು ಜಮ್ಮು-ಕಾಶ್ಮೀರ ಸಂಬಂಧಿಸಿ ಆಯೋಜಿಸಿದ್ದ ಆನ್ ಲೈನ್ ರಾಲ್ಯಿಯಲ್ಲಿ ಮಾತನಾಡಿದ ಅವರು, ಭಾರತ ಗಡಿ ಭದ್ರತೆ, ರಾಷ್ಟ್ರೀಯ ಗೌರವದ ವಿಷಯದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ಗಡಿ ವಿವಾದ ಕುರಿತ ಬೆಳವಣಿಗೆಯನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಲಡಾಖ್ ನ ಪೂರ್ವಭಾಗದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದ ಬಗ್ಗೆ ಪ್ರಸ್ತಾಪಿಸಿದ ಅವರು, ನಮ್ಮೊಂದಿನ […]
ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬಯಿಯ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದರು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ದೊಡ್ಡ ಮಟ್ಟದ ಗೆಲುವು ನೀಡಿತ್ತು.