ಜೂ.20ರಂದು ನಿಟ್ಟೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣ, ಉದ್ಯೋಗಾವಕಾಶಗಳ ಬಗ್ಗೆ ವೆಬಿನಾರ್

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಇಂಜಿನಿಯರಿಂಗ್ ಎಜುಕೇಶನ್ & ಎಂಪ್ಲಾಯ್ಮೆಂಟ್ ಪ್ರಾಸ್ಪೆಕ್ಟ್ಸ್-ಪೋಸ್ಟ್ ಕೋವಿಡ್ ಎಂಬ ವಿಷಯದ ಬಗೆಗೆ ಜೂ.20 ರಂದು ವೆಬಿನಾರ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಚಿಪ್ಳೂಣ್ಕರ್, ಎಡ್ಮಿಶನ್ಸ್ & ಅಲ್ಯೂಮ್ನಯ್ ಅಫೇರ್ಸ್ ವಿಭಾಗದ ಡೀನ್ ಡಾ.ಕೆ ರಾಜೇಶ್ ಶೆಟ್ಟಿ, ಅಭ್ಯುದಯ್-ಕೌನ್ಸಲಿಂಗ್, ವೆಲ್ಫೇರ್, ಟ್ರೈನಿಂಗ್ & ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥೆ ಪ್ರೊ. ಶಾಲಿನಿ ಕೆ ಶರ್ಮ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು. ಈ ಕಾರ್ಯಕ್ರಮದಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಗಳು, […]

ಭಾರತೀಯ ಸೈನಿಕರನ್ನು ಕೊಂದರೂ ‌ಯಾಕೆ ಸುಮ್ಮನಾಗಿದ್ದಾರೆ: ಖಾದರ್ ಪ್ರಶ್ನೆ

ಮಂಗಳೂರು: ಚೀನಾ ಸೈನಿಕರು ಈಗ ಭಾರತದ ಒಳಕ್ಕೆ ಬಂದು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ. ಈಗ ಯಾಕೆ 56 ಇಂಚಿನ ಎದೆಗಾರಿಕೆಯವರು ಮೌನವಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ. ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಇದ್ದಾಗ ಮೌನಿ ಬಾಬಾ ಎನ್ನುತ್ತಿದ್ದವರು ಈಗೆಲ್ಲಿದ್ದಾರೆ. ಮನೆಗೆ ಹೊಕ್ಕಿ ಹೊಡೆಯುವುದಾಗಿ ಭಾಷಣ ಮಾಡಿದ್ದವರು ಮೌನವಾಗಿದ್ದು ಏಕೆ ಎಂದು ವ್ಯಂಗ್ಯವಾಡಿದ ಖಾದರ್, ಹೊಡೆಯಬೇಕಿತ್ತಲ್ವಾ.. ಯಾಕೆ ಸುಮ್ಮನೆ ಕುಳಿತಿದ್ದಾರೆ..? ಎಂದು ಪ್ರಶ್ನೆ ಮಾಡಿದ್ದಾರೆ.  […]

ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧ ವಿತರಿಸಿದ್ದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 16: ಜಿಲ್ಲೆಯಲ್ಲಿ ಜ್ವರ ಶೀತ ಕೆಮ್ಮು ರೋಗಿಗಳಿಗೆ ವೈದ್ಯರ ಸಲಹಾ ಚೀಟಿಯಿಲ್ಲದೇ ಯಾವುದೇ ಮೆಡಿಕಲ್ ಶಾಪ್ ಗಳಲ್ಲಿ ಔಷಧ ವಿತರಿಸದಂತೆ ಈಗಾಗಲೇ ಸೂಚಿಸಲಾಗಿದ್ದು, ವೈದ್ಯರ ಚೀಟಿಯಿಲ್ಲದೇ ಮಾರಾಟ ಮಾಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವುದಾಗಿ  ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್ ಗಳು ಪ್ರತಿದಿನ ತಮ್ಮಲ್ಲಿ ಮಾರಾಟವಾದ ಔಷಧಗಳ ವಿವರ ನೀಡುವಂತೆ ಸೂಚನೆ ನೀಡಲಾಗಿದ್ದು, ಹಲವು ಮೆಡಿಕಲ್ ಶಾಪ್ ಗಳು ಪ್ರತಿದಿನ ವರದಿ ನೀಡದೇ ಇರುವುದು ಗಮನಕ್ಕೆ ಬಂದದ್ದು, ಎಲ್ಲರೂ ಕಡ್ಡಾಯವಾಗಿ […]

ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 16: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಕೋವಿಡ್-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತೆಗಳು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್,  ಕುಂದಾಪುರದ ಡಾ.ಜಿ.ಶಂಕರ್ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆ ಮಾಡಲು […]