ಕುಂದಾಪುರ: ಕೊರೋನಾ ಆತಂಕದ ನಡುವೆಯೂ ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ

ಕುಂದಾಪುರ ತಾಲೂಕಿನ ಒಟ್ಟು ಎಂಟು ಕೇಂದ್ರಗಳಲ್ಲಿ ಕೋವಿಡ್  ಮಾರ್ಗಸೂಚಿಯನ್ನು ಅನುಸರಿಸಿ‌ ವಿದ್ಯಾರ್ಥಿಗಳಿಗೆ ಏನೂ ಗೊಂದಲಗಳಾಗದಂತೆ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ನಗರದ ಬೋರ್ಡ್ ಹೈಸ್ಕೂಲು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಏನೂ ತೊಡಕಾಗದಂತೆ ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗಿದೆ. ಬೆಳಿಗ್ಗೆ ಎಂಟು ಗಂಟೆಯಿಂದಲೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ‌ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗಳಿಗೆ ತೆರಳಿದ್ದಾರೆ. ವಿದ್ಯಾರ್ಥಿಗಳ‌ ಸಮಯ ಹಾಳು ಮಾಡಬಾರದೆಂಬ ಉದ್ದೇಶದಿಂದ ಪ್ರತೀ ನೂರು ವಿದ್ಯಾರ್ಥಿಗಳಿಗೆ ಒಂದು ಆರೋಗ್ಯ ತಪಾಸಣಾ […]

ಮುಂಬೈ ಐಐಟಿಯ ಮುಂದಿನ ಸೆಮಿಸ್ಟರ್ ಸಂಪೂರ್ಣ ಆನ್ ಲೈನ್: ನಿರ್ದೇಶಕ ಸುಭಾಶಿಸ್ ಚೌಧರಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಬೈನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಆನ್ ಲೈನ್ ತಂತ್ರಜ್ಞಾನದ ಮೊರೆಹೋಗಿದೆ. ಸಂಸ್ಥೆಯು ಮುಂದಿನ ಸೆಮಿಸ್ಟರ್ ಸಂಪೂರ್ಣ ಆನ್ ಲೈನ್ ನಲ್ಲಿ ಮಾಡಲು ಮುಂದಾಗಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ‌ ಮಾಹಿತಿ ನೀಡಿದ ಮುಂಬೈನ ಐಐಟಿ ನಿರ್ದೇಶಕ ಸುಭಾಶಿಸ್ ಚೌಧರಿ, ಈಗಾಗಲೇ ಆನ್ ಲೈನ್ ಶಿಕ್ಷಣದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದು, ಮುಂದಿನ ಸೆಮಿಸ್ಟರ್ ಸಂಪೂರ್ಣವಾಗಿ ಆನ್ ಲೈನ್ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಾಗೂ […]

ಉಡುಪಿಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು 14 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಇಂದು ಹೊಸದಾಗಿ 14 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1116ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾಗೆ ಒಂದೇ ದಿನ 418 ಮಂದಿ ಸಾವು

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16,922 ಪ್ರಕರಣಗಳು ದಾಖಲಾಗಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 418 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಒಟ್ಟು 4,73,105 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮೃತರ ಸಂಖ್ಯೆಯು 14,894ಕ್ಕೆ ಏರಿಕೆಯಾಗಿದೆ. 1,86,514 ಸಕ್ರಿಯ ಪ್ರಕರಣಗಳಿದ್ದು, 2,71,697 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ […]