ಬಿಜೆಪಿ ಹೆಬ್ರಿ ಶಕ್ತಿಕೇಂದ್ರ ಮಹಿಳಾ ಮೋರ್ಚಾ: ಲಕ್ಷ್ಮೀ ಕಿಣಿ ಅಂಡಾರು ಅಧ್ಯಕ್ಷೆ, ರೇವತಿ ವರಂಗ ಕಾರ್ಯದರ್ಶಿ
ಹೆಬ್ರಿ: ಹೆಬ್ರಿ ಶಕ್ತಿಕೇಂದ್ರ ಮಹಿಳಾ ಮೋರ್ಚಾ ಅದ್ಯಕ್ಷೆಯಾಗಿ ಲಕ್ಷ್ಮಿ ಕಿಣಿ ಅಂಡಾರ್ ಹಾಗೂ ಕಾರ್ಯದರ್ಶಿಯಾಗಿ ರೇವತಿ ವರಂಗ ಅವರನ್ನು ಆಯ್ಕೆಮಾಡಲಾಗಿದೆ. ಅಧ್ಯಕ್ಷ ಮಹಾವೀರ ಹೆಗ್ಡೆ, ಹೆಬ್ರಿ ಬಿಜೆಪಿ ಪ್ರಮುಖರಾದ ಗುರುದಾಸ್ ಶೆಣೈ, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನಯ ಡಿ ಬಂಗೇರ, ಉಡುಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ಕಾರ್ಕಳ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಡಿಜಿ, ತಾಲೂಕು ಪಂಚಾಯತ್ […]
ಜುಲೈ 5ರಿಂದ ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್: ಕರ್ಫ್ಯೂ ಅವಧಿ ಕೂಡ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದು ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಕೆಲವೊಂದು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಈ ಕೆಳಗಿನಂತಿವೆ. ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ). ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಛೇರಿಗಳಿಗೆ ರಜೆ […]
ಉಡುಪಿಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು 14 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಇಂದು ಹೊಸದಾಗಿ 14 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1139ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಾರ್ಕಳ: ಉಡುಪಿ ಜಿಲ್ಲಾ ಸಿಜಿಕೆ ಪ್ರಶಸ್ತಿ ಪ್ರಧಾನ ಸಮಾರಂಭ: ಕಲಾವಿದ ಚಂದ್ರನಾಥ ಬಜಗೋಳಿ ಅವರಿಗೆ ಪ್ರಶಸ್ತಿ ಪ್ರಧಾನ
ಸಿಜಿಕೆ೨೦೨೦ ಪ್ರಶಸ್ತಿ ಸ್ವೀಕರಿಸಿದ ರಂಗ ನಿರ್ದೇಶಕ ಚಂದ್ರನಾಥ ಬಜಗೋಳಿ ಮಾತನಾಡಿ, ಪ್ರಶಸ್ತಿಯು ತರಭೇತುದಾರರಿಗೆ ಹಾಗೂ ಅಭಿಮಾನಿಗಳಿಗೆ ಅರ್ಪಣೆಯಾಗಿದೆ. ಯಾವುದೇ ನಿರಾಪೇಕ್ಷೆ ಇಟ್ಟುಕೊಂಡು ಯಾವುದೇ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಬಾರದು
ಉಡುಪಿ: ತಪ್ಪು ಮಾಹಿತಿ ನೀಡಿದ ಇಬ್ಬರು ಕೊರೊನಾ ಸೋಂಕಿತರ ವಿರುದ್ಧ ಪ್ರಕರಣ ದಾಖಲು
ಉಡುಪಿ: ಪ್ರಾಥಮಿಕ ಸಂಪರ್ಕ ಹಾಗೂ ಟ್ರಾವೆಲ್ ಹಿಸ್ಟರಿಯ ಬಗ್ಗೆ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ ಇಬ್ಬರು ಕೊರೊನಾ ಸೋಂಕಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಕೋವಿಡ್ 19 ಸೋಂಕಿತ ರೋಗಿಗಳಾದ 10186 ಮತ್ತು 10187 ತಮ್ಮ ಟ್ರಾವೆಲ್ ಹಿಸ್ಟರಿ ಮತ್ತು ಪ್ರಾಥಮಿಕ ಸಂಪರ್ಕದ ಬಗ್ಗೆ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ್ದರು. ಅವರು ತಪ್ಪು ಮಾಹಿತಿ ನೀಡಿದ್ದರಿಂದ ಸಂಪರ್ಕಿತರನ್ನು ಶೀಘ್ರವಾಗಿ ಪತ್ತೆಹಚ್ಚಲು ತೊಂದರೆ ಆಗಿದೆ. ಅಲ್ಲದೆ ಈ ರೀತಿ ಮಾಹಿತಿ ಮುಚ್ಚಿಡುವುದು ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ […]