ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಕಾಪುವಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಕಾಪು ತಾಲ್ಲೂಕಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಇರುವುದು ಖಚಿತಗೊಂಡಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ವಿದ್ಯಾರ್ಥಿನಿ ಜೂ. 25ರಂದು ಕನ್ನಡ ಹಾಗೂ ಜೂ. 27ರಂದು ಗಣಿತ ಪರೀಕ್ಷೆ ಬರೆದಿದ್ದಳು. ಈಕೆಯ ತಂದೆಗೆ ಜೂ. 27 ರಂದು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈಕೆಯ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ಇರುವುದು ಖಚಿತಗೊಂಡಿದೆ. […]
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯ ಮನೆಯವರೆಗೆ ಕೊರೊನಾ ಪಾಸಿಟಿವ್: ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳ ಮನೆಯವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪಡುಬಿದ್ರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಶನಿವಾರ ಈ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಅಂದೇ ಆಕೆಯ ಮನೆಯವರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದ್ದು, ಜೂನ್ 29ರೊಳಗೆ ಪರೀಕ್ಷಾ ವರದಿ ಬಾರದಿದ್ದರೆ ಆಕೆ, ಅಂದಿನ ಪರೀಕ್ಷೆ ಬರೆಯುವುದರಿಂದ ವಂಚಿತವಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿದ್ಯಾರ್ಥಿನಿಯ ವರದಿ ನೆಗೆಟಿವ್ ಬಂದರೂ […]
ಬೆಂಗಳೂರು: ಭೀಕರವಾಗುತ್ತಲೇ ಇದೆ ಕೊರೊನಾ ಅಟ್ಟಹಾಸ..
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಶನಿವಾರ ಒಂದೇ ದಿನ 918 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ದಿನವೊಂದರಲ್ಲಿ ವರದಿಯಾದ ಗರಿಷ್ಠ ಸಂಖ್ಯೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಹಾಗೂ ಬೆಂಗಳೂರಿನಲ್ಲಿ ಸೋಂಕು ಪ್ರಮಾಣ ಹೆಚ್ಚು ಕಾಣಿಸಿಕೊಂಡಿದ್ದು, ಇಂದು ಒಂದೇ ದಿನ 596 ಪ್ರಕರಣಗಳು ವರದಿಯಾಗಿವೆ. ಇದೂ ಕೂಡ ಒಂದೇ ದಿನದಲ್ಲಿ ವರದಿಯಾದ ಗರಿಷ್ಠ ಸಂಖ್ಯೆಯಾಗಿದೆ. ರಾಜ್ಯದಲ್ಲಿ ಇಂದು 11 ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ […]
ಕೊರೊನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರ ಬಲಿ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬಂಟ್ವಾಳದ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ನ ಇಡ್ಯಾದ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಸೋಂಕಿತ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯುವಕ ಸರ್ಕಾರಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆಯಾಗಿದೆ