ಗಂಟುಮೂಟೆ ಕಟ್ಟಲಿವೆ ಚೈನಾದ 59 ಆ್ಯಪ್ ಗಳು: ಕೇಂದ್ರ ಸರಕಾರದ ಮಹತ್ವದ ಆದೇಶ

ನವದೆಹಲಿ: ಚೀನಾ ಮತ್ತು ಭಾರತ ದೇಶಗಳ ಮಧ್ಯೆ ಗಡಿ ತಕರಾರು ನಡೆಯುತ್ತಿರುವ ಸಂದರ್ಭದಲ್ಲೇ ಚೀನಾ ಮೂಲದ 59 ಮೊಬೈಲ್ ಅಪ್ಲಿಕೇಷನ್ ಗಳನ್ನು ಕೇಂದ್ರ ಸರಕಾರ ನಿಷೇಧಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಚೀನಾಕ್ಕೆ ದೊಡ್ಡ ಶಾಕ್ ನೀಡಿದೆ. ಭಾರತದ ಮೊಬೈಲ್ ಬಳಕೆದಾರರ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ ಮತ್ತು ಖಾಸಗಿತನಕ್ಕೆ ಅಪಾಯ ಉಂಟುಮಾಡುತ್ತಿದೆ ಎನ್ನುವ ಕಾರಣದಿಂದ ಆ ಎಲ್ಲ ಆ್ಯಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಟಿಕ್ ಟಾಕ್, ಹಲೋ ಆ್ಯಪ್ ಸೇರಿದಂತೆ ಚೀನಾ ಮೂಲದ ಅನೇಕ ಆ್ಯಪ್ ಗಳು […]

ಉಡುಪಿ ಕಂಟೈನ್ ಮೆಂಟ್ ವಲಯಗಳಲ್ಲಿ ಜಾರಿಯಾಗಿದೆ ಕೆಲವೊಂದು ಕಟ್ಟುನಿಟ್ಟಿನ ಆದೇಶ: ಯಾವುದಕ್ಕೆಲ್ಲಾ ನಿಷೇಧವಿದೆ?

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್  ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬoದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಏನೆಲ್ಲಾ ನಿಷೇಧ? ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ವೈದ್ಯಕೀಯ  ತುರ್ತು ಸೇವೆಗಳು ಮತ್ತು […]

ಕುಂದಾಪುರ: ಮೈಕ್ರೋ ಪೈನಾನ್ಸ್ ಸಾಲ ಹಾಗೂ ಬಡ್ಡಿ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ ಮುಖ್ಯಮಂತ್ರಿಗೆ ಮನವಿ

kundapura

ಕುಂದಾಪುರ : ಸ್ತ್ರೀ ಶಕ್ತಿ,  ಸ್ವ ಸಹಾಯ ಸಂಘಗಳು, ರಾಷ್ಟ್ರೀಕೃತ /ಸಹಕಾರ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಕಿರುಸಾಲ ಸಂಸ್ಥೆಗಳಿಂದ  ಪಡೆದ ಮೈಕ್ರೋ ಪೈನಾನ್ಸ್ ಸಾಲ ಹಾಗೂ ಬಡ್ಡಿ ಮನ್ನಾಕ್ಕೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಸರ್ಕಾರ ಹಾಗೂ ಮೈಕ್ರೋಪೈನಾನ್ಸ್ ಸಂಸ್ಥೆಗಳ ಅಡಿಯಲ್ಲಿ ಸುಮಾರು 35 ರಿಂದ 40 ಲಕ್ಷ ಮಹಿಳೆಯರು ಈ ಸಂಘಗಳ ಸದಸ್ಯರಾಗಿ ಸ್ವಯಂ ಉದ್ಯೋಗ, ಕೃಷಿ […]

ಕುಂದಾಪುರ: ಸರ್ಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳ ತಂಡ

kundapura

ಪುರಸಭೆ, ತಹಶೀಲ್ದಾರ್ ಕಚೇರಿ ಹಾಗೂ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಲೋಕಾಯುಕ್ತ ಡಿವೈಎಸ್ ಪಿ ಭಾಸ್ಕರ್ ರೆಡ್ಡಿಯವರ ನೇತ್ರತ್ವದ ತಂಡ ಕೋವಿಡ್ -19 ನಿಯಮಾವಳಿಗಳ ಪಾಲನೆಯ ಪರಿಶೀಲನೆ ನಡೆಸಿದರು. ಮಾಸ್ಕ್ ಧರಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಿದ ಅವರು, ಥರ್ಮಲ್ ಸ್ಕ್ಯಾನರ್ ಅಳವಡಿಸದೆ ಇರುವ ಹಾಗೂ ಕಚೇರಿಗೆ ಭೇಟಿ ನೀಡಿದ ಪ್ರತಿಯೊಬ್ಬರ ಮಾಹಿತಿಯನ್ನು ದಾಖಲಿಸದೆ ಇರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು

ಉಡುಪಿಯಲ್ಲಿ ಮತ್ತೆ 18 ಕೊರೊನಾ ಪಾಸಿಟಿವ್ ದೃಢ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಕೂಡ 18 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ 1197ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.