ಉಡುಪಿ: ಕೊರೋನಾಗೆ ಮೂರನೇ ಬಲಿ: ಬೈಂದೂರಿನ 48 ವರ್ಷದ ವ್ಯಕ್ತಿ ಸಾವು
ಉಡುಪಿ: ಮಹಾಮಾರಿ ಕೊರೋನಾಗೆ ಉಡುಪಿ ಜಿಲ್ಲೆಯಲ್ಲಿ ಮೂರನೇ ಬಲಿಯಾಗಿದ್ದು, ಬೈಂದೂರಿನ 48 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ವ್ಯಕ್ತಿ ಇತರ ಹಲವು ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಅವರು ಶನಿವಾರ ಮುಂಬೈನಿಂದ ತವರಿಗೆ ವಾಪಾಸಾಗಿದ್ದು ಭಾನುವಾರ ತನ್ನ ಸ್ವಗ್ರಾಮ ಕಾಲ್ತೋಡಿನಲ್ಲಿ ಮೃತಪಟ್ಟಿದ್ದರು. ಅವರ ಗಂಟಲ ದ್ರವ ಪರೀಕ್ಷೆ ಮಾಡಿದ್ದು, ಅದರ ವರದಿ ಮಂಗಳವಾರ ಬಂದಿದ್ದು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಉಡುಪಿಯಲ್ಲಿ ಮುಂದುವರಿದ ಕೊರೊನಾ ಆತಂಕ: ಇಂದು 9 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರಿದ್ದು, ಇಂದು ಕೂಡ ಹೊಸದಾಗಿ 9 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1206ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿಯಲ್ಲಿ ಮತ್ತೊಬ್ಬ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು: ಕುಂದಾಪುರ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢ
ಉಡುಪಿ: ಕುಂದಾಪುರ ತಾಲ್ಲೂಕಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಮವಾರ ವಿಜ್ಞಾನ ವಿಷಯದ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿನಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿತ್ತು. ಈ ನಿಟ್ಟಿನಲ್ಲಿ ಆಕೆಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಗೆ ಸೋಂಕು ಹೇಗೆ ತಗುಲಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆಕೆಯ ಕುಟುಂಬದ ಸದಸ್ಯರಿಗೆ ಸೋಂಕು ಇಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಸೋಂಕಿತ ವಿದ್ಯಾರ್ಥಿನಿಗೆ […]
ದೇಶಕ್ಕೆ ಮಾರಕವಾಗಿದ್ದ ಆ್ಯಪ್ ನಿಷೇಧಿಸಿರುವುದು ಸ್ವಾಗತಾರ್ಹ: ವೀಣಾ ಎಸ್. ಶೆಟ್ಟಿ
ಉಡುಪಿ: ದೇಶದ ಆಂತರಿಕ ಸಧೃಢತೆಗೆ ಮಾರಕವಾಗಿದ್ದ ಹಾಗೂ ದೇಶದ ಬಹುಪಾಲು ಜನತೆಯ ದಾರಿ ತಪ್ಪಿಸುವ ಸಲುವಾಗಿ ಮನರಂಜನೆಯ ಹೆಸರಿನಲ್ಲಿ ನಾನಾ ರೀತಿಯ ಮುಖವಾಡಗಳನ್ನು ತೊಟ್ಟು ರಾರಾಜಿಸುತ್ತಿದ್ದ 59 ಚೈನಾ ಆಪ್ ಗಳನ್ನು ಕೇಂದ್ರ ಸರ್ಕಾರ ದೇಶದಲ್ಲಿ ನಿಷೇಧ ಹೇರಿರುವುದು ಅಭಿನಂದನಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ ದೇಶದ ಜನತೆ ಈಗ ಭಾರತೀಯ ಸಂಸ್ಕೃತಿಯನ್ನು ಮತ್ತು ಸ್ವದೇಶಿಯತೆಯನ್ನು ಮೈಗೂಡಿಸಲು ಸರಿಯಾದ ದಾರಿ ನಿರ್ಮಾಣವಾಗಿದೆ. ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು […]
ಬಡವರಿಗೆ ನವೆಂಬರ್ ವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ
ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ಗರೀಬ್ ಕಲ್ಯಾಣ್ ಯೋಜನೆಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲೂ ಮುಂದುವರಿಸಲಾಗುವುದು ಎಂದಿದ್ದಾರೆ. ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್ಲಾಕ್ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ […]