ಸೀಲ್ ಡೌನ್ ವಿಧಾನಗಳ ಕುರಿತು ಚರ್ಚೆ ನಡೆಸಲಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಕೊರೋನಾ ಪ್ರಾಬಲ್ಯ ಹೆಚ್ಚಾಗುತ್ತಿರುವ ಹಾಗೂ ಸಮುದಾಯ ಮಟ್ಟಕ್ಕೆ ಸೋಂಕು ಹರಡಬಹುದು ಎನ್ನುವ ಆತಂಕದ ಹಿನ್ನೆಲೆಯಲ್ಲಿ ಲಭ್ಯವಿರುವ ಆಸ್ಪತ್ರೆ, ಚಿಕಿತ್ಸಾ ಸೌಲಭ್ಯ, ಕ್ವಾರಂಟೈನ್, ಸೀಲ್‍ಡೌನ್ ಮಾಡುವ ವಿಧಾನಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತ್ರತ ಚರ್ಚೆ ನಡೆಸಿ ಅಭಿಪ್ರಾಯ ಪಡೆದುಕೊಳ್ಳಲಾಗಿದೆ ಎಂದು ರಾಜ್ಯ ಮೀನುಗಾರಿಕಾ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಇಲ್ಲಿನ ಮಿನಿ ವಿಧಾನಸೌಧದಲ್ಲಿ ಬುಧವಾರ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಲ ಕಾಲಕ್ಕೆ […]

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಂದ ಸೋಂಕು ಹರಡಿಲ್ಲ: ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ.‌ ಜಗದೀಶ್ 

ಉಡುಪಿ: ಜಿಲ್ಲೆಯ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಕೊರೊನಾ ಸೋಂಕು ಹರಡಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಸ್ತುಬದ್ಧವಾಗಿ ಮತ್ತು ಸುರಕ್ಷಿತ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಸೋಂಕು ಹರಡುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಐಸಿಯುನಲ್ಲಿದ್ದ ರೋಗಿಗಳ ಆರೋಗ್ಯದಲ್ಲಿ ಚೇತರಿಕೆ: ನಾಲ್ಕು ಮಂದಿ ಸೋಂಕಿತರು […]

ಕೋಟದ ಲತಾ ಹೋಟೆಲ್ ಮಾಲೀಕರಿಗೆ ಕೊರೊನಾ ಪಾಸಿಟಿವ್: ಪಾರ್ಸೆಲ್ ಖರೀದಿಸಿದ ಗಿರಾಕಿಗಳಲ್ಲಿ ಟೆನ್ಷನ್ ಶುರು

ಉಡುಪಿ: ಜಿಲ್ಲೆಯ ಕೋಟದ ಲತಾ ಹೋಟೆಲ್ ಮಾಲೀಕರಿಗೆ ಕೊರೊನಾ ಸೋಂಕು‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಹೋಟೆಲ್ ಅನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೋಟೆಲ್ ಮಾಲೀಕರಿಗೆ ಸೋಂಕು ದೃಢಪಟ್ಟಿದ್ದು, ಇದೀಗ ಹೋಟೆಲ್ ನಲ್ಲಿ ಉಪಹಾರ, ಊಟ ಪಾರ್ಸೆಲ್ ತೆಗೆದುಕೊಂಡ ಹೋದ ಗ್ರಾಹಕರಲ್ಲಿ ಹಾಗೂ ಸುತ್ತಮುತ್ತಲಿನ ಜನರಲ್ಲಿ ಆತಂಕ ಶುರುವಾಗಿದೆ.

ವ್ಯವಸ್ಥಿತ ಕ್ವಾರಂಟೈನ್ ಮಾಡುವುದರಲ್ಲಿ ಸರಕಾರ ವಿಫಲ: ಗೋಪಾಲ ಪೂಜಾರಿ

ಕುಂದಾಪುರ : ದೇಶಾದ್ಯಾಂತ ಲಾಕ್‍ಡೌನ್ ಮಾಡಿದ್ದರೂ, ಕೋವಿಡ್-19 ಸೋಂಕು ಹರಡುವಿಕೆಯ ಪ್ರಮಾಣ ಇಳಿಮುಖವಾಗದೆ ಇರುವುದು ಆತಂಕಗಳನ್ನು ಹೆಚ್ಚಿಸುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿರುವುದರಿಂದ ಸಮುದಾಯಕ್ಕೆ ಸೋಂಕು ಹಬ್ಬುತ್ತಿದೆಯಾ ಎನ್ನುವ ಜಿಜ್ಞಾಸೆಯನ್ನು ಹುಟ್ಟುಹಾಕುತ್ತಿದೆ. ಮಹಾರಾಷ್ಟ್ರ ಹಾಗೂ ಹೊರ ಭಾಗಗಳಿಂದ ಬಂದವರನ್ನು ವ್ಯವಸ್ಥಿತವಾಗಿ ಕ್ವಾರಂಟೈನ್ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಟ್‍ಬೇಲ್ತೂರಿನ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಹೊರ ರಾಜ್ಯ ಹಾಗೂ ದೇಶಗಳಿಂದ ಬಂದವರಲ್ಲಿ […]

ಉಡುಪಿ ಜಿಲ್ಲೆ ಕೊರೊನಾ ಹೋರಾಟದಲ್ಲು ಮಾದರಿಯಾಗಬೇಕು: ಜಿಲ್ಲಾಧಿಕಾರಿ

ಉಡುಪಿ ಜುಲೈ 1: ಕೋರೊನಾ ಹೋರಾಟ ಎಂಬುದು ನಿರಂತರ ಹೋರಾಟ, ಎಲ್ಲಿಯ ತನಕ ಕೊರೊನಾ ಇರುತ್ತದೆಯೋ ಅಲ್ಲಿಯ ತನಕ ನಾವು ಹೋರಾಟ ಮಾಡಲೇಬೇಕು ಇಂದು ನಾವು ಕೊರೋನಾ ಹೊರಾಟದ ಪ್ರಾರಂಭದ ಹಂತದಲ್ಲಿ ನಾವಿದ್ದೇವೆ. ಆದ್ದರಿಂದ ಕೊರೊನಾ ವಿರುದ್ದ ನಾವು ಸಮರ ಸಾರಲೇಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಬುಧವಾರ ಐಎಂಎ ಭವನದಲ್ಲಿ ಭಾರತೀಯ ವೈಧ್ಯಕೀಯ ಸಂಘ, ಉಡುಪಿ ಕರಾವಳಿ ಶಾಖೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು. ಇದು ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ […]