ಉಡುಪಿ ಕೃಷ್ಣಮಠದ ದರ್ಶನ ಸದ್ಯಕ್ಕಿಲ್ಲ: ಅದಮಾರು ಈಶಪ್ರಿಯ ಸ್ವಾಮೀಜಿ
ಉಡುಪಿ: ಸದ್ಯ ಕೃಷ್ಣಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿಲ್ಲ. ಮುಂದಿನ ಪರಿಸ್ಥಿತಿ ನೋಡಿಕೊಂಡು ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು. ಕೃಷ್ಣಮಠದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತರು ಮನೆಯಲ್ಲಿದ್ದುಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಮಠದಲ್ಲಿಯೂ ದೇಶದ ಒಳಿತಿಗೆ ಪೂಜೆ, ಪ್ರಾರ್ಥನೆಗಳು ನಡೆಯಲಿವೆ ಎಂದು ಶ್ರೀಗಳು ಹೇಳಿದರು. ಮನಸ್ಸಿನ ದೋಷಗಳು ರೋಗಕ್ಕೆ ಮೂಲ ಕಾರಣ. ಆಯುರ್ವೇದದ ಪ್ರಕಾರ ಮನಸ್ಸು ಚೆನ್ನಾಗಿದ್ದರೆ ಎಂತಹ ರೋಗಗಳನ್ನೂ ಗೆಲ್ಲಬಹುದು. ಹಾಗಾಗಿ, ಮನಸ್ಸನ್ನು […]
ಕೋಟೇಶ್ವರ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಅರ್ಧದಲ್ಲೇ ಬಿಟ್ಟು ಪರಾರಿ
ಕುಂದಾಪುರ: ಇಲ್ಲಿನ ಕೋಟೇಶ್ವರ ಸಮೀಪದ ಕಟ್ಕೆರೆ ಮಹಾದೇವಿ ಕಾಳಿಕಾಂಬಾ ದೇವಸ್ಥಾನದಲ್ಲಿ ಬುಧವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಸೇಫ್ ಕುಂದಾಪುರ ಸಿಬ್ಬಂದಿಯ ಸಮಯಪ್ರಜೆಯಿಂದಾಗಿ ಕಳ್ಳರು ಅಲ್ಪ ಪ್ರಮಾಣದ ಬೆಳ್ಳಿ ಆಭರಣಗಳನ್ನು ಧೋಚಿ ಅರ್ಧದಲ್ಲೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ದೇವಳದ ಬಾಗಿಲಿಗೆ ಅಳವಡಿಸಿರುವ ಅಲ್ಪಸ್ವಲ್ಪ ಬೆಳ್ಳಿ ಕವಚ, ದೇವರ ಕೈಯ್ಯಲ್ಲಿದ್ದ ಖಡ್ಗ, ಪರಶು, ಡಿವಿಆರ್ ಕದ್ದು ಕಳ್ಳರು ಕಾಲ್ಕಿತ್ತಿದ್ದಾರೆ. ಕಳ್ಳತನವಾದ ಆಭರಣಗಳ ಮೌಲ್ಯ ಸುಮಾರು ಇಪ್ಪತ್ತೈದು ಸಾವಿರ ರೂ ಎಂದು ಅಂದಾಜಿಸಲಾಗಿದೆ. ಒಂದುವರೆ ಲಕ್ಷಕ್ಕೂ ಅಧಿಕ ಮೌಲ್ಯದ […]
ಮಣಿಪಾಲ: ನೇತಾಜಿ ನಗರದ ಯುವಕನಿಗೆ ಕೊರೊನಾ ಪಾಸಿಟಿವ್: ಮನೆ ಸೀಲ್ ಡೌನ್
ಮಣಿಪಾಲ: ಇಲ್ಲಿನ 80 ಬಡಗುಬೆಟ್ಟು ಗ್ರಾಮದ ನೇತಾಜಿ ನಗರದ ಯುವಕನೊಬ್ಬನಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈತ ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಕುಂದಾಪುರ: ಕಾಂಗ್ರೆಸ್ ನೂತನ ಅಧ್ಯಕ್ಷರ ಪ್ರತಿಜ್ಞಾವಿಧಿ ಕಾರ್ಯಕ್ರಮ ಪ್ರಸಾರ ವೀಕ್ಷಿಸಿ ಸಂಭ್ರಮಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಸಮಾರಂಭ ಉದ್ಘಾಟನೆಯಾಗುತ್ತಿದ್ದಂತೆ ಇಲ್ಲಿನ ವೀಕ್ಷಣೆ ಕೇಂದ್ರಗಳಲ್ಲಿಯೂ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞಾ ವಿಧಿ ನಡೆಯುತ್ತಿದ್ದಂತೆ ಇಲ್ಲಿಯೂ ಸೇರಿದ್ದ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸುವ ಮೂಲಕ ಪಕ್ಷದ ಆನ್ಲೈನ್ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.
ಮಂಗಳೂರು: ಮಂಗಳೂರಿನ ಶಾಸಕರಿಗೂ ವಕ್ಕರಿಸಿದ ಕೊರೊನಾ
ಮಂಗಳೂರು: ಕರಾವಳಿಯ ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಸೋಂಕಿತರ ಸಂಪರ್ಕದಿಂದ ಇವರಿಗೂ ಸೋಂಕು ತಗುಲಿರುವುದು ಶಂಕೆ ವ್ಯಕ್ತವಾಗಿದೆ. ಸ್ವಯಂ ಪ್ರೇರಿತವಾಗಿ ತಪಾಸಣೆ ನಡೆಸಿದ ವೇಳೆ ಸೋಂಕು ಪತ್ತೆಯಾಗಿದ್ದು, ಮಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಇವರು ಭಾಗಿಯಾಗಿದ್ದಾರೆ. ಸದ್ಯ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ. ಈ ಬಗ್ಗೆ ಸ್ಚತಃ ಟ್ವೀಟ್ ಮಾಡಿರುವ ಶಾಸಕರು ಜನತೆಗೆ ಜಾಗೃತಿವಹಿಸುವಂತೆ ಮನವಿ ಮಾಡಿದ್ದಾರೆ.