ಉಡುಪಿಯಲ್ಲಿ ಮುಂದುವರಿದ ಕೊರೊನಾ ಕರಿಛಾಯೆ: ಇಂದು ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕರಿಛಾಯೆ ಮುಂದುವರಿದಿದ್ದು, ಇಂದು ಹೊಸದಾಗಿ 14 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1242ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಾನು ಸವಾಲಿನಿಂದ ಹಿಂದೆ ಸರಿಯುವವನಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ಆದರೆ ಸವಾಲಿನಿಂದ ಹಿಂದೆ ಸರಿಯುವವನಲ್ಲ. ಪಕ್ಷವನ್ನು ಬೂತು ಮಟ್ಟದಿಂದ ಕಟ್ಟಿ ಬೆಳೆಸುವುದು ನನ್ನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪ್ರತಿಜ್ಞೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಯಾವ ತಪ್ಪೂ ಮಾಡಿಲ್ಲ. ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧ. ಆದರೆ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ. ಇದಕ್ಕೆ ಜಗ್ಗುವುದಿಲ್ಲ ಎಂದು ಅಬ್ಬರಿಸಿದರು. ನಾನು ಕನಕಪುರದ ಬಂಡೆ ಅಲ್ಲ. ವಿಧಾನಸೌಧದ […]

ಜೆಡಿಎಸ್ ಜತೆಗಿನ ಮೈತ್ರಿಯೇ ಲೋಕಸಭೆ ಚುನಾವಣೆ ಸೋಲಿಗೆ ಕಾರಣ: ಇನ್ನು ಯಾವ ಮೈತ್ರಿಯೂ ಇಲ್ಲ: ಗುಂಡೂರಾವ್

ಬೆಂಗಳೂರು: ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸುವಂತಾಯಿತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಲು ಮೈತ್ರಿಯೇ ಮುಖ್ಯ ಕಾರಣ. ಹಾಗಾಗಿ ಇನ್ಮುಂದೆ ಯಾವ ಮೈತ್ರಿಯೂ ಇಲ್ಲದೆ ಪಕ್ಷವು ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಅವರ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದರು. ಎಲ್ಲ ನಾಯಕರು ಜತೆಗೂಡಿದ್ದು, ಪಕ್ಷವು ಇಂದು ಒಗ್ಗಟ್ಟಿನಿಂದಿದೆ. ಪಕ್ಷವನ್ನು ಸಂಘಟಿತವಾಗಿ ಮುನ್ನಡೆಸುವ […]

ಕಾರ್ಕಳ: ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ತಿಂಗಳ ಹಸುಗೂಸು ಸಾವು: ಕೊರೊನಾ ಶಂಕೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನಲ್ಲಿ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ತಿಂಗಳ ಹಸುಗೂಸು ಮೃತಪಟ್ಟಿದ್ದು, ಕೊರೊನಾ ಸೋಂಕು ತಗುಲಿರಬಹುದೇ ಎಂಬ ಆತಂಕ ಮೂಡಿದೆ. ವಿಜಯಪುರ ಜಿಲ್ಲೆಯ ಮೂಲದ ದಂಪತಿಯ ಮಗುವಾಗಿದ್ದು, ಏಪ್ರಿಲ್ ತಿಂಗಳಲ್ಲಿ ಊರಿಗೆ ಹೋಗಿದ್ದ ಇವರು ಕಳೆದ 10 ದಿನಗಳ ಹಿಂದೆಯಷ್ಟೇ ಉಡುಪಿಗೆ ಮರಳಿದ್ದರು. ಜೂನ್ 28ರಂದು ಮಗುವಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗುವನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.  ಆದರೆ ಎರಡು ದಿನಗಳ ಹಿಂದೆ ಕಾರ್ಕಳದ ತಾಲ್ಲೂಕು […]

ಜ್ವರ, ಉಸಿರಾಟದ ಸಮಸ್ಯೆಯಿಂದ ಕಾರ್ಕಳದ ಮಿಯಾರುನಲ್ಲಿ ಹತ್ತು ತಿಂಗಳ ಮಗು ಸಾವು

ಉಡುಪಿ: ಕಾರ್ಕಳ ತಾಲ್ಲೂಕಿನ ಮಿಯಾರುನಲ್ಲಿ ಹತ್ತು ತಿಂಗಳ ಮಗು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಮಗುವಿನ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ ಮಗುವಿನ ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.