ನಮ್ಮ ಯೋಧರ ತಾಕತ್ತು ಜಗತ್ತಿಗೆ ಗೊತ್ತಿದೆ: ಭೂ ವಿಸ್ತರಣೆಗೆ ಬಂದವರು ಸೋತು ಓಡಿಹೋಗಿದ್ದಾರೆ: ಪ್ರಧಾನಿ ಮೋದಿ
ಲೇಹ್: ನಮ್ಮ ಯೋಧರ ಶೌರ್ಯ, ತ್ಯಾಗ ಇಡೀ ಜಗತ್ತಿಗೆ ಗೊತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ಭಾರತ–ಚೀನಾ ಯೋಧರ ನಡುವೆ ಸಂಘರ್ಷ ನಡೆದು ಎರಡು ವಾರಗಳ ಬಳಿಕ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿಯವರು ಯೋಧರನ್ನು ಉದ್ದೇಶಿಸಿ ಮಾತನಾಡಿದರು. ನಿಮ್ಮ ಶೌರ್ಯದ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ನಿಮ್ಮ ಸಾಹಸಗಾಥೆ ದೇಶದ ಪ್ರತಿಯೊಂದು ಮನೆಯಲ್ಲಿಯೂ ಪ್ರತಿಧ್ವನಿಸುತ್ತಿದೆ. ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಮತ್ತೊಮ್ಮೆ ಗೌರವ […]
ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರರೋಗಿ ವಿಭಾಗಗಳು ಶನಿವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವೆಗೆ ಮಾತ್ರ ಸೇವೆಗೆ ಲಭ್ಯ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗವು ಜುಲೈ 4ರಿಂದ ಜಾರಿಗೆ ಬರುವಂತೆ ಪ್ರತಿ ಶನಿವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಹಾಗೆ ತಿಂಗಳ ಮೂರನೇ ಶನಿವಾರ, ಆಸ್ಪತ್ರೆಗೆ ಎಂದಿನಂತೆ ರಜೆ ಇರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದರು. ಈ ನಿರ್ಧಾರವು ಆಡಳಿತ ಮಂಡಳಿಯ ಮುಂದಿನ ನಿರ್ಧಾರದ ತನಕ ಚಾಲ್ತಿಯಲ್ಲಿರುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ಹೊರರೋಗಿ ವಿಭಾಗವು ಎಂದಿನಂತೆ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ. ಅಪಘಾತ, ತುರ್ತು ಚಿಕಿತ್ಸಾ […]
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಪ್ರಕಟ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಯು ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆಗೊಳಿಸಿದ್ದಾರೆ. ಪದಾಧಿಕಾರಿಗಳ ವಿವರ: ಉಪಾಧ್ಯಕ್ಷ- ವಿನೋದ್‍ರಾಜ್ ಪೂಜಾರಿ ಕುಂದಾಪುರ, ಸುಮಿತ್ ಮಡಿವಾಳ ಕಾರ್ಕಳ, ಸಚಿನ್ ಬೊಳ್ಜೆ ಉದ್ಯಾವರ, ಪ್ರಧಾನ ಕಾರ್ಯದರ್ಶಿ- ಶರತ್ ಉಪ್ಪುಂದ, ಅಕ್ಷಿತ್ ಹೆರ್ಗ, ಕಾರ್ಯದರ್ಶಿ- ಮಹೇಶ್ ಹಟ್ಟಿಕುದ್ರು, ಪ್ರವೀಣ್ ಪೂಜಾರಿ ಕಾಪು, ನವೀನ್ […]
ಉಡುಪಿಯಲ್ಲಿ ಮತ್ತೆ 16 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಇಂದು ಕೂಡ 16 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1258ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬಾರ್ಕೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಸಾವು
ಬ್ರಹ್ಮಾವರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾರ್ಕೂರು ಹಾಲೆಕೊಡಿ ನದಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು. ಈ ಇಬ್ಬರು ಗುರುವಾರ ರಾತ್ರಿ ನದಿಯಲ್ಲಿ ಮೀನಿಗೆ ಬಲೆ ಬೀಸಿ ಹೋಗಿದ್ದರು. ಇಂದು ಬೆಳಿಗ್ಗೆ ಬಲೆಯನ್ನು ಎಳೆಯಲು ನದಿಗೆ ಇಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಳಿಗ್ಗೆ […]