ಉಡುಪಿಯಲ್ಲಿ ಇಂದು 31 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮುಂದುವರಿದಿದ್ದು, ಇಂದು ಕೂಡ 31 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1421ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿ ನಗರಸಭೆ: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಹಕರಿಸದಿದ್ದಲ್ಲಿ ಕಠಿಣ ಕ್ರಮ
ಉಡುಪಿ: ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಉದ್ದಿಮೆಗಳನ್ನು ತರೆಯಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ರಿಂದ ಬೆಳ್ಳಿಗೆ 5 ರವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಭಂದಿಸಿದ್ದು, ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮೇ 5 ರ ಭಾನುವಾರ ದಿಂದ ಮುಂದಿನ ನಾಲ್ಕು ಭಾನುವಾರಗಳು ಅಂದರೆ ಆಗಸ್ಟ್ 2 ರ ವರೆಗಿನ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಘೋಷಿಸಿದ್ದು ,ಯಾವುದೇ ನಾಗರಿಕರ […]
ಉಡುಪಿಯಲ್ಲಿ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ, ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬ್ ನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು, ರಾಜ್ಯದಲ್ಲೇ ಕೊರೋನಾ ಆರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈ ಲ್ಯಾಬ್ ನೊಂದಿಗೆ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್ ಗಳ ಸಂಖ್ಯೆ 82 ಕ್ಕೇರಿದೆ. ಜಿಲ್ಲೆಯಲ್ಲಿ ಮೊದಲು ಟೆಸ್ಟಿಂಗ್ ಗಾಗಿ ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, […]
ಶೀಘ್ರದಲ್ಲೇ ಚಂದನ ವಾಹಿನಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ತರಗತಿಗಳ ಪ್ರಸಾರ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾಗಳು ಆರಂಭಗೊಳ್ಳುವ ಸಾಧ್ಯತೆ ಕಡಿಮೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ ಕಾರ್ಯಕ್ರಮಗಳ ವಿಡಿಯೊ ತರಗತಿಗಳನ್ನು ಸರ್ಕಾರ ಶೀಘ್ರದಲ್ಲಿಯೇ ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲಿದ್ದು, ಇದಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್ಇಆರ್ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ […]
ಉಡುಪಿ: ಅಪರಿಚಿತ ವ್ಯಕ್ತಿ ಸಾವು, ಪತ್ತೆಗೆ ಸೂಚನೆ
ಉಡುಪಿ: ಇಲ್ಲಿನ ಆದಿ ಉಡುಪಿ ಬಸ್ ನಿಲ್ದಾಣದಲ್ಲಿ ಬುಧವಾರ ಅಸ್ವಸ್ಥರಾಗಿ ಬಿದಿದ್ದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಪರೀಕ್ಷಿಸಿದಾಗ ಆತ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತನ ವಾರಸುದಾರರು ಇದ್ದಲ್ಲಿ ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಆಸ್ಪತ್ರೆಗೆ ಸಾಗಿಸಲು ಗ್ರಹರಕ್ಷಕ ದಳದ ಸಿಬ್ಬಂದಿ ವನಿತಾ, ನಗರದ ತ್ಯಾಜ್ಯ ವಿಲೇವಾರಿ ಉಸ್ತುವಾರಿ ವನಜಾ ಹಾಗೂ ಶೇಖರ್ ಕೊಟ್ಯಾನ್ ಪಡುಕೆರೆ ಧೈರ್ಯದಿಂದ ನೆರವಿಗೆ ಬಂದರೆಂದು ನಿತ್ಯಾನಂದ […]