ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಗೆ ಕೊರೊನಾ ಪಾಸಿಟಿವ್: ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.‌ ಕೊರೊನಾ ಸೋಂಕು ಬಂದಿರುವ ಬಗ್ಗೆ ಸ್ವತಃ ಬಚ್ಚನ್ ಅವರೇ ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. ಸದ್ಯ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಸ್ಥರು ಹಾಗೂ ಸಿಬ್ಬಂದಿ ಸಹ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು, ಇನ್ನೂ ಅದರ ವರದಿ ಬಂದಿಲ್ಲ. ‘ಕಳೆದ ಹತ್ತು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆ ಮಾಡಿಸಿ, ನನ್ನ ಸಂಪರ್ಕಿತರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು […]

ಮಂಗಳೂರಿನಲ್ಲಿ ಇಂದು 186 ಕೊರೊನಾ ಪಾಸಿಟಿವ್ ಪತ್ತೆ

ಮಂಗಳೂರು: ಕರಾವಳಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಂಗಳೂರಿನಲ್ಲಿ ಇಂದು ಬರೋಬ್ಬರಿ 186 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ILI – 64 ಮಂದಿಗೆ, ಪ್ರಾಥಮಿಕ ಸಂಪರ್ಕದಿಂದ 37, ಸಂಪರ್ಕವೇ ಪತ್ತೆಯಾಗದ 32 ಮಂದಿಗೆ, SARI – 17, ರ್ಯಾಡಂಮ್ ಟೆಸ್ಟ್ ನಿಂದ 13 ಮಂದಿ, ವಿದೇಶದಿಂದ ಬಂದ 10 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಶಸ್ತ್ರಚಿಕಿತ್ಸೆಯ ಮೊದಲು ಮಾಡಿದ ಟೆಸ್ಟ್ ನಿಂದ 7 ಮಂದಿಗೆ ಕೊರೋನಾ ಪಾಸಿಟಿವ್, ಹೆರಿಗೆಗಿಂತ ಮೊದಲು ಮಾಡಿದ ಟೆಸ್ಟ್‌ ‌ನಲ್ಲಿ‌ 4 ಮಹಿಳೆಯರಿಗೆ […]

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಕಾಲ ಲಾಕ್ ಡೌನ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ ಎಂದು ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬಿದ್ದಿದೆ. ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು.14 ಮಂಗಳವಾರ ರಾತ್ರಿ 8.00 ಗಂಟೆಯಿಂದ  ಜು.23 ರ ಬೆಳಿಗ್ಗೆ 5.00 ಗಂಟೆಯವರೆಗೆ […]

ಕುಂದಾಪುರದಲ್ಲಿ ಜು.13 ರಿಂದ ನಡೆಯಲಿದೆ ವರ್ತಕರ ಸ್ವಯಂಪ್ರೇರಿತ ಬಂದ್: ಯಾವುದಿದೆ? ಯಾವುದಿಲ್ಲ?

ಕುಂದಾಪುರ: ತಾಲೂಕಿನಲ್ಲಿ ಕೋವಿಡ್-19  ವೈರಸ್ ಸಾಮುದಾಯಿಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವರ್ತಕರು ಮತ್ತು ಸಾರ್ವಜನಿಕ ಹಿತದೃಷ್ಠಿಯಿಂದ ಜು.13 ರಿಂದ ಜು.31 ತನಕ ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲಾ ಅಂಗಡಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ಕುಂದಾಪುರದ ಸಮಾನ ಮನಸ್ಕ ವರ್ತಕರು ತಿಳಿಸಿದ್ದಾರೆ. ಈ ಕುರಿತು ನಗರದ ಖಾಸಗಿ ಹೋಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವರ್ತಕ ರಾಧಕೃಷ್ಣ ಅವರು, ಮೆಡಿಕಲ್, ಹಾಲು, ಹೋಟೆಲ್, ಬಾರ್ ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಬೆಳಗ್ಗಿನಿಂದ ಮಧ್ಯಾಹ್ನ […]

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಒಂದು ವಾರ ಲಾಕ್ ಡೌನ್ ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಇದನ್ನು ತಡೆಗಟ್ಟುವುದೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಕೊರೊನಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಂಗಳೂರು ಸಹಿತ ಏಳು ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿಎಂ ಯಡಿಯೂರಪ್ಪನವರು ಈ ಬಗ್ಗೆ ಹಿರಿಯ ಸಚಿವರೊಂದಿಗೆ ಅಭಿಪ್ರಾಯ ‌ಹಂಚಿಕೊಂಡಿದ್ದಾರೆ.  ಇದಕ್ಕೆ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಬೀದರ್, ಬಳ್ಳಾರಿ, ಮೈಸೂರು, ಯಾದಗಿರಿ, […]