ಮಂಗಳೂರು: ಇಬ್ಬರು ಪತ್ರಕರ್ತರಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದ.ಕ.‌ಜಿಲ್ಲೆಯಲ್ಲಿ‌ ಇಬ್ಬರು ಪತ್ರಕರ್ತರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ರಾಜ್ಯದ ಪ್ರತಿಷ್ಠಿತ ಸುದ್ದಿವಾಹಿನಿಗಳ ಕ್ಯಾಮರ ಮ್ಯಾನ್ಗಳಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಇಬ್ಬರೂ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸಚಿವ ಕೋಟ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ತರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಖ್ಯ ಮಂತ್ರಿಗಳ ಜತೆಗಿನ  ಸಭೆಯ ಬಳಿಕವೇ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸ್ಥಿತಿಗತಿ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಲಾಕ್ ಡೌನ್ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಮುಖ್ಯಮಂತ್ರಿಗಳ ಜತೆ ಸಭೆ […]

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯ ಇಬ್ಬರು ಸಿಬಂದಿಗೆ ಕೊರೊನಾ ಧೃಢ

ಬೆಳ್ತಂಗಡಿ: ತಾಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಇಬ್ಬರು ಸಿಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಪ್ರಯೋಗಶಾಲಾ ತಂತ್ರಜ್ಞರಿಗೆ ಹಾಗೂ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಖಚಿತಗೊಂಡಿದೆ.

ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಬೆಂಗಳೂರು ಮಾದರಿಯಲ್ಲಿ ಒಂದು ವಾರ ಲಾಕ್ ಡೌನ್.?: ನಾಳೆ ಡಿಸಿಗಳೊಂದಿಗೆ ಸಿಎಂ ಸಭೆ 

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಮಾದರಿಯಲ್ಲಿಯೇ ಕೊರೊನಾ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು ಸೇರಿದಂತೆ ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ವೇಗ ಹೆಚ್ಚಾಗಿದ್ದು, ಇದಕ್ಕೆ ತಡೆಯೊಡ್ಡುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ವೇಗಕ್ಕೆ ಬ್ರೇಕ್ ಹಾಕುವ ಸಲುವಾಗಿ ಸರ್ಕಾರ ಮಂಗಳವಾರ (ಜುಲೈ 14) ರಾತ್ರಿ 8ಗಂಟೆಯಿಂದ ಜುಲೈ 23ರ ಬೆಳಿಗ್ಗೆ 5 ಗಂಟೆಯವರೆಗೆ ಒಂದು ವಾರ ಲಾಕ್ ಡೌನ್ ಘೋಷಣೆ […]

ಉಡುಪಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ದಾವಣಗೆರೆ ಮೂಲದ 70 ವರ್ಷದ ವೃದ್ಧ ಸಾವು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಉಡುಪಿಯ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾವಣಗೆರೆ ಮೂಲದ 70 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ವೃದ್ಧ ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರವದ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಈ ನಿಟ್ಟಿನಲ್ಲಿ ಅವರನ್ನು ಜುಲೈ 10ರಂದು ಉಡುಪಿಯ ಡಾ. ಟಿಎಂಎ ಪೈ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ […]