ಉಡುಪಿ: ಲಾಕ್ ಡೌನ್ ಕುರಿತಂತೆ ನಾಳೆ ಜನಪ್ರತಿನಿಧಿಗಳ ಸಭೆ: ಡಿಸಿ ಜಗದೀಶ್

ಉಡುಪಿ: ಮುಖ್ಯಮಂತ್ರಿಗಳು ಇಂದು ಕೊರೊನಾ ಹೆಚ್ಚುತ್ತಿರುವ 11 ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಿದ್ದು, ಲಾಕ್ ಡೌನ್ ಸಂಬಂಧಿಸಿದಂತೆ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಅದರಂತೆ ನಾಳೆ (ಜುಲೈ 14) ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬುವುದರ ಬಗ್ಗೆ ತೆಗೆದುಕೊಳ್ಳುತ್ತೇವೆ. ಅಲ್ಲದೆ ಲಾಕ್ ಡೌನ್ ಬಗ್ಗೆಯೂ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.‌ಜಗದೀಶ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆಯಲ್ಲಿ […]

ಉಡುಪಿಯಲ್ಲಿ ಕೊರೊನಾ ಸೋಂಕಿಗೆ 70 ವರ್ಷದ ವೃದ್ಧ ಸಾವು: ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಉಡುಪಿ: ನಗರದ ಡಾ.ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇವರು ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಮಂಗಳೂರು: ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಬುಧವಾರ ರಾತ್ರಿಯಿಂದ ಒಂದು ವಾರಗಳ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮುಖ್ಯಮಂತ್ರಿಗಳ ಸಭೆಯ ಬಳಿಕ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು, ಬುಧವಾರ ರಾತ್ರಿಯಿಂದ ಒಂದು ವಾರಗಳ ಲಾಕ್ ಡೌನ್ ಮಾಡಲಾಗುವುದು. ಲಾಕ್ ಡೌನ್ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿಯವರು ಬಿಡುಗಡೆ ಮಾಡಲಿದ್ದಾರೆ ಎಂದರು. ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಬೇಕು ಎಂದು ಮಂಗಳೂರು ಸಂಸದ ನಳೀನ್ ಕುಮಾರ್ […]

ದಕ್ಷಿಣ ಕನ್ನಡ, ಧಾರವಾಡ ಡಿಸಿಗಳಿಂದ ಲಾಕ್ ಡೌನ್ ಗೆ ಮನವಿ: ಉಡುಪಿ ಸಹಿತ ಬಹುತೇಕ ಡಿಸಿಗಳಿಂದ ಗಡಿ ಸೀಲ್ ಡೌನ್ ಗೆ ಒಲವು

ಬೆಂಗಳೂರು: ಸಂಪೂರ್ಣವಾಗಿ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವ ಅಗತ್ಯವಿಲ್ಲ. ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಿ, ಅಂತರ್ ರಾಜ್ಯ ಮತ್ತು ಜಿಲ್ಲೆಗಳ ಓಡಾಟಕ್ಕೆ ನಿರ್ಬಂಧ ಹೇರಬೇಕು ಎಂದು ಇಂದು ಸಿಎಂ ಯಡಿಯೂರಪ್ಪನವರ ಜತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಬಹುತೇಕ ಜಿಲ್ಲೆಗಳ ಡಿಸಿಗಳು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ, ಧಾರವಾಡ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಗೆ ಒಲವು ವ್ಯಕ್ತಪಡಿಸಿದ್ದು, ಒಂದು ವಾರಗಳ ಕಾಲ ತಮ್ಮ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಸಿಎಂ ಬಳಿ‌ ಮನವಿ ಮಾಡಿದ್ದಾರೆ.