ಉಡುಪಿ: ಕೊರೊನಾಗೆ 82 ವರ್ಷದ ವೃದ್ಧ ಬಲಿ, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆ
ಉಡುಪಿ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಾಪು ತಾಲ್ಲೂಕಿನ ಪಡುಬಿದ್ರಿ ನಿವಾಸಿ 82 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶಾಸ್ವಕೋಶ ಹಾಗೂ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡಾಗ ಅವರ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವ್ಯಕ್ತಿಯೂ ಚಿಕಿತ್ಸೆ ಫಲಿಸದೆ ನಿನ್ನೆ ಸಂಜೆ ಮೃತಪಟ್ಟಿದ್ದು, ಅವರ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ […]
ಉಡುಪಿ: ಜು.15ರ 8ಗಂಟೆಯಿಂದ 14 ದಿನಗಳ ಕಾಲ ಜಿಲ್ಲೆಯ ಗಡಿ ಸೀಲ್ ಡೌನ್: ಬಸ್ ಸಂಚಾರ ಬಂದ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜುಲೈ 15 ರಿಂದ 29 ರ ವರೆಗೆ 14 ದಿನಗಳ ವರೆಗೆ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗುವುದು. ಜಿಲ್ಲೆಯೊಳಗಿನ ಆರ್ಥಿಕ ಚಟುವಟಿಕೆಗಳನ್ನು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದು ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ನಡೆದ ಚರ್ಚೆಯಂತೆ ಜುಲೈ 15ರ ಬುಧವಾರ ರಾತ್ರಿ 8 ಗಂಟೆಯಿಂದ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗುವುದು. ಆದರೆ […]
ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿಗೆ ಶೇ. 100 ಫಲಿತಾಂಶ: ಶೇ.99.86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್‍ಬೈಲ್‍ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 100 ಫಲಿತಾಂಶದ ಸಾಧನೆ ಮಾಡಿದೆ. ಒಟ್ಟು ಪರೀಕ್ಷೆ ಬರೆದ 1439 ವಿದ್ಯಾರ್ಥಿಗಳಲ್ಲಿ 1437 ವಿದ್ಯಾರ್ಥಿಗಳು ಅಂದರೆ ಶೇ.99.86ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಪದವಿ ಪೂರ್ವ ಶಿಕ್ಷಣದಲ್ಲಿ ಅಭೂತ ಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶೇ. 95ಕ್ಕಿಂತ ಅಧಿಕ ಅಂಕವನ್ನು 168 […]
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿಗೆ ಶೇ. 95.03 ಫಲಿತಾಂಶ
ಕಾರ್ಕಳ: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ೨೦೧೯-೨೦ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿಗೆ 95.03 ಫಲಿತಾಂಶ ದೊರೆತಿದೆ. ಪರೀಕ್ಷೆಗೆ 342 ವಿದ್ಯಾರ್ಥಿಗಳು ಹಾಜಾರಾಗಿದ್ದು, , 325 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಕಾಲೇಜಿನ 94 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 184 ವಿದ್ಯಾರ್ಥಿಗಳು ಪ್ರಥಮ ದರ್ಜೆ, ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 8 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅರೋನ್ ಡಿಸೋಜಾ, ಶೇಕಡಾ (587), , ವಾಣಿಜ್ಯ ವಿಭಾಗದಲ್ಲಿ […]
ಕಟ್‌ಬೇಲ್ತೂರು ಭದ್ರಮಹಾಕಾಳಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು, ನಗದು ಹೊತ್ತೊಯ್ದರು
ಕುಂದಾಪುರ: ತಾಲೂಕಿನ ಕಟ್‌ಬೇಲ್ತೂರು ಭದ್ರಮಹಾಕಾಳಿ ದೈವಸ್ಥಾನಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳನೋರ್ವ ನಗದು ದೋಚಿ ಪರಾರಿಯಾಗಿದ್ದು, ಘಟನೆ ಮಂಗಳವಾರ ಬೆಳಿಗ್ಗೆ ಕಳ್ಳತನ ಬೆಳಕಿಗೆ ಬಂದಿದೆ. ನಸುಕಿನ ಜಾವ ಮೂರು ಹದಿನೈದರ ಸುಮಾರಿಗೆ ಕೊಡೆ ಮತ್ತು ಚೀಲವೊಂದನ್ನು ಹಿಡಿದು ಬೀಗ ಒಡೆದು ದೈವಸ್ಥಾನದ ಒಳಪ್ರವೇಶಿಸಿದ ಕಳ್ಳ ಕಾಣಿಗೆ ಡಬ್ಬಿ ಒಡೆದು ನಗದು ದೋಚಿ, ಅಲ್ಲೇ ಸಮೀಪದಲ್ಲಿರುವ ಇನ್ನೊಂದು ಡಬ್ಬಿಯನ್ನು ಕೊಂಡೊಯ್ದಿದ್ದಾನೆ. ಕಳ್ಳ ದೈವಸ್ಥಾನದ ಅನತಿ ದೂರದಲ್ಲಿರುವ ರೈಲ್ವೆ ರಸ್ತೆಯ ಸಮೀಪದಲ್ಲಿ ಕಾಣಿಕೆ ಡಬ್ಬಿ, ಚಿಲ್ಲರೆ ಹಣ ಹಾಗೂ ಕೃತ್ಯಕ್ಕೆ […]