ನಾಳೆಯಿಂದ ಉಡುಪಿ ಜಿಲ್ಲೆಯಲ್ಲಿ ಯಾವುದಕ್ಕೆಲ್ಲಾ ಬ್ರೇಕ್? :ಕೊರೋನಾ ನಿಯಮ ಆಗಲಿದೆ ಇನ್ನಷ್ಟು ಬಿಗಿ:

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 (ಕೋರೋನ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವಾಗಿದ್ದು,  ಇದಕ್ಕಾಗಿ ಜಿಲ್ಲೆಯಾದ್ಯಂತ ಜುಲೈ 15 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಮುಂದಿನoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಕಂಟೈನ್‌ಮೆoಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧ ಕಂಟೈನ್‌ಮೆoಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ವೈದ್ಯಕೀಯ […]

ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ: ರಾಜ್ಯಕ್ಕೆ ಪ್ರಥಮ ರ್‍ಯಾಂಕ್

ಉಡುಪಿ:  ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜು ದ್ವಿತೀಯ ಪಯುಸಿ ಪರೀಕ್ಷೆಯಲ್ಲಿ ಶೇ. 100  ಫಲಿತಾಂಶ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ 285 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 190 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 94 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 168 ಮಂದಿ ಪರೀಕ್ಷೆ ಬರೆದಿದ್ದು, 72 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 92 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಜ್ಯ ಮಟ್ಟದಲ್ಲಿ ವಿದ್ಯೋದಯದ ಅಪೂರ್ವ ಸಾಧನೆ ಉಡುಪಿ ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ […]

ಈ ದಿನದ ಕುಂದಾಪುರ ತಾ.ಪಂ ಸಭೆಯಲ್ಲಿ ಏನಾಯ್ತು? ಏನಂದ್ರು ಸದಸ್ಯರು?

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿದ್ದರಿಂದ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಸೂಕ್ತ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಕೋಟ ಹಾಗೂ ಅಜ್ಜರಕಾಡು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ತ್ರಾಸದಾಯಕವಾಗುತ್ತಿದೆ. ತಾಲೂಕು ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಮೀಸಲಿಡಬೇಕು ಎಂದು ತಾ.ಪಂ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ. ವಿ ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯ ಕರಣ್ ಪೂಜಾರಿ, ಕೋವಿಡ್ ಆಸ್ಪತ್ರೆಯನ್ನು ಸಮೀಪದ ವಿದ್ಯಾರ್ಥಿ ವಸತಿ […]

ಉಡುಪಿಯ ಪೂರ್ಣಪ್ರಜ್ಞ ಕಾಲೇಜಿಗೆ ಶೇ.100 ಫಲಿತಾಂಶ

ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 336 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 336 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 232 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 231 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಒಟ್ಟು 568 ವಿದ್ಯಾರ್ಥಿಗಳಲ್ಲಿ 298 ಮಂದಿ ವಿಶಿಷ್ಟ ಶ್ರೇಣಿ ಪಡೆದಿದ್ದು, ಶೇಕಡ 99.82 ಫಲಿತಾಂಶ ದಾಖಲಾಗಿದೆ.