ಬೆಳ್ತಂಗಡಿ: ವೃದ್ದೆಗೆ ಹಿಂಸೆ, ಮಗ-ಮೊಮ್ಮಗ ಪೊಲೀಸ್ ವಶಕ್ಕೆ; ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲಿನಲ್ಲಿ ಅನಾರೋಗ್ಯ ಪೀಡಿತ ವಯೋವೃದ್ದ ಮಹಿಳೆಯೋರ್ವರನ್ನು ಹಿಂಸಿಸಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಮಗ ಹಾಗೂ ಮೊಮ್ಮಗನನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 70 ವರ್ಷದ ವೃದ್ದ ಮಹಿಳೆ ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿಯಾಗಿದ್ದು, ಆರೋಪಿಗಳಾದ ವೃದ್ದೆಯ ಮಗ ಶ್ರೀನಿವಾಸ ಶೆಟ್ಟಿ ಮತ್ತು ಮೊಮ್ಮಗ ಪ್ರದೀಪ್‌  ಶೆಟ್ಟಿ ಎಂಬವರು ಮನೆಯಲ್ಲಿ ಅಮಾನೀಯವಾಗಿ ಹಿಂಸಿಸಿದ್ದಾರೆ. ಹಿಂಸೆ ನೀಡುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಹೀಗಾಗಿ ಬೆಳ್ತಂಗಡಿ ಠಾಣಾ ಪೊಲೀಸರು […]

ಭೂಸುಧಾರಣೆ ಕಾಯ್ದೆ ತಿದ್ದುಪಡಿ ಬಡವರಿಂದ ಭೂಮಿ ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡುವ ಹುನ್ನಾರ:ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ

ಕುಂದಾಪುರ : ರಾಜ್ಯದಲ್ಲಿ ಕೊರೊನಾ ಸೋಂಕು ತೀವೃವಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಬಡವರಿಂದ ಭೂಮಿ ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡುವ ಹುನ್ನಾರ ನಡೆಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಆರೋಪಿಸಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿದ ದಿನ ರಾಜ್ಯದ ಬಡವರ ಮತ್ತು ಕೃಷಿಕರ ಪಾಲಿಗೆ ಕರಾಳ ದಿನವಾಗಿದೆ. ತನ್ನ ಸರ್ವಾಧಿಕಾರ ಬಳಸಿ ತಂದಿರುವ ಈ ಕಾಯಿದೆ ಜನವಿರೋಧಿಯಾಗಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ .ಇದರಿಂದಾಗಿ ಹಸಿರು ಶಾಲು […]

ಬೆಂಗಳೂರಿನಲ್ಲಿ ಲಾಕ್‌ಡೌನ್‌ ಮುಂದುವರಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸದ್ಯ ಒಂದು ವಾರದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಅದು ಜುಲೈ 22ರ ಬುಧವಾರಕ್ಕೆ ಕೊನೆಗೊಳ್ಳಲಿದೆ. ಈ ನಡುವೆ ಲಾಕ್ ಡೌನ್ ಅನ್ನು ಇನ್ನೊಂದು ವಾರ ಮುಂದುವರೆಸುವ ಸಾಧ್ಯತೆ ಇದೆ ಎಂಬಂತಹ ಸುದ್ದಿ ಹರಿದಾಡುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ‘ಲಾಕ್ ಡೌನ್ ಅನ್ನು ಮುಂದುವರಿಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ’ ಎನ್ನುವ ಮೂಲಕ ಲಾಕ್ ಡೌನ್ ಕುರಿತು ಹರಿದಾಡುತ್ತಿದ್ದ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ. ಇಂದು ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ […]

ವೃದ್ದೆ ತಾಯಿಗೆ ಮಗ ಮೊಮ್ಮಗನಿಂದ ಹಲ್ಲೆ: ಬೆಳ್ತಂಗಡಿಯಲ್ಲೊಂದು ಅಮಾನುಷ ಘಟನೆ

ಬೆಳ್ತಂಗಡಿ: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಅಮಾನುಷ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಇರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ. ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ‌ ಮೊಮ್ಮಗ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಅನಾರೋಗ್ಯದಿಂದ […]

ಆಗಸ್ಟ್ ತಿಂಗಳಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ: ಪ್ರಧಾನಿ ಮೋದಿಗೆ ಆಹ್ವಾನ  

ಅಯೋಧ್ಯೆ: ಇಲ್ಲಿನ ರಾಮ ಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಆಗಸ್ಟ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮೂಲಗಳಿಂದ ತಿಳಿದುಬಂದಿದೆ. ರಾಮನ ದೇವಾಲಯ ನಿರ್ಮಾಣಕ್ಕೆ ಸಂಬಂಧಿಸಿ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಭೆ ನಡೆಯಲಿದ್ದು, ಭೂಮಿ ಪೂಜೆ ನೆರವೇರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಟ್ರಸ್ಟ್ ಮುಖ್ಯಸ್ಥರು ಹೇಳಿದ್ದಾರೆ. ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಈಗಾಗಲೇ ಪ್ರಧಾನ […]